ಗುರುನಂದನ್ ಅಭಿನಯದ ಬಹು ನಿರೀಕ್ಷಿತ “ರಾಜು ಜೇಮ್ಸ್ ಬಾಂಡ್” ಚಿತ್ರದ ಪ್ರೀ ರಿಲೀಸ್ ಇವೆಂಟ್ ಗೆ ಮುಖ್ಯ ಅತಿಥಿಗಳಾಗಿ ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ನಟಿ ರಮ್ಯ ಆಗಮಿಸಲಿದ್ದಾರೆ .

Picture of Cinibuzz

Cinibuzz

Bureau Report

ಕರ್ಮ ಬ್ರೋಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಮಂಜುನಾಥ್ ವಿಶ್ವಕರ್ಮ (ಲಂಡನ್) ಹಾಗೂ ಕಿರಣ್ ಭರ್ತೂರು(ಕೆನಡಾ) ನಿರ್ಮಿಸಿರುವ ಹಾಗೂ ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕನಾಗಿ ನಟಿಸಿರುವ, ಅತ್ಯಂತ ನಿರೀಕ್ಷಿತ ಸಿನಿಮಾ “ರಾಜು ಜೇಮ್ಸ್ ಬಾಂಡ್” ಚಿತ್ರದ ಪ್ರೀ ರಿಲೀಸ್ ಇವೆಂಟ್ ಫೆಬ್ರವರಿ 11ರಂದು ನಡೆಯಲಿದೆ. ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ನಟಿ ರಮ್ಯ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ನಗುವೇ ಪ್ರಧಾನವಾಗಿರುವ ಈ ಚಿತ್ರ ಫೆಬ್ರವರಿ 14 ರಂದು ಬಿಡುಗಡೆಯಾಗಲಿದೆ.

ಗುರುನಂದನ್ ಈ ಚಿತ್ರದ ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿಯಾಗಿ ಮೃದುಲ ಅಭಿನಯಿಸಿದ್ದಾರೆ. ಸಾಧು ಕೋಕಿಲ, ಅಚ್ಯುತ್ ಕುಮಾರ್, ಚಿಕ್ಕಣ್ಣ, ರವಿಶಂಕರ್, ಜೈ ಜಗದೀಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇನ್ನಷ್ಟು ಓದಿರಿ

Scroll to Top