ಶ್ರೀ ರವಿಶಂಕರ್ ಗುರೂಜಿ ಅವರಿಂದ ಮೋಹನ್ ಬಾಬು ನಿರ್ಮಾಣದ, ವಿಷ್ಣು ಮಂಚು ಅಭಿನಯದ ಬಹು ನಿರೀಕ್ಷಿತ “ಕಣ್ಣಪ್ಪ” ಚಿತ್ರದ “ಶಿವಶಿವ ಶಂಕರ” ಹಾಡಿನ‌ ಬಿಡುಗಡೆ

Picture of Cinibuzz

Cinibuzz

Bureau Report

ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ‌ ಖ್ಯಾತ ನಟ ಮೋಹನ್ ಬಾಬು ನಿರ್ಮಾಣದ, ಮುಖೇಶ್ ಕುಮಾರ್ ಸಿಂಗ್ ನಿರ್ದೇಶನದ ಹಾಗೂ ವಿಷ್ಣು ಮಂಚು ಮುಖ್ಯಪಾತ್ರದಲ್ಲಿ ನಟಿಸಿರುವ ಬಹು ನಿರೀಕ್ಷಿತ “ಕಣ್ಣಪ್ಪ” ಚಿತ್ರದ “ಶಿವಶಿವ ಶಂಕರ” ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಆರ್ಟ್ ಆಫ್ ಲಿವಿಂಗ್ ನ ಶ್ರೀ ರವಿಶಂಕರ್ ಗುರೂಜಿ ಈ ಹಾಡನ್ನು ಬಿಡುಗಡೆ ಮಾಡಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ಮೋಹನ್ ಬಾಬು, ವಿಷ್ಣು ಮಂಚು, ನಿರ್ದೇಶಕ ಮುಖೇಶ್ ಕುಮಾರ್ ಸಿಂಗ್ ಮುಂತಾದ ಚಿತ್ರತಂಡದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶ್ರೀಮತಿ ಭಾರತಿ ವಿಷ್ಣುವರ್ಧನ್, ಶ್ರೀಮತಿ ಸುಮಲತ ಅಂಬರೀಶ್ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅತಿಥಿಗಳಾಗಿ ಆಗಮಿಸಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನನಗೆ “ಕಣ್ಣಪ್ಪ ಅಂದಕೂಡಲೆ ನೆನಪಿಗೆ ಬರುವುದು ಡಾ||ರಾಜಕುಮಾರ್ ಅವರು ಎಂದು ಮಾತು ಆರಂಭಿಸಿದ ನಟ, ನಿರ್ಮಾಪಕ ಮೋಹನ್ ಬಾಬು, ಇಂದು ಶ್ರೀರವಿಶಂಕರ್ ಗುರೂಜಿ ಅವರು ನನ್ನ ಮಗ ವಿಷ್ಣು ಮಂಚು ಅಭಿನಯದ “ಕಣ್ಣಪ್ಪ” ಚಿತ್ರದ ಹಾಡನ್ನು ಬಿಡುಗಡೆ ಮಾಡಿ ಆಶೀರ್ವದಿಸಿದ್ದಾರೆ. ಅವರಿಗೆ ಅನಂತ ಧನ್ಯವಾದ. ಇನ್ನು, ನನ್ನ ಆತ್ಮೀಯ ಗೆಳೆಯರಾದ ವಿಷ್ಣುವರ್ಧನ್ ಹಾಗು ಅಂಬರೀಶ್ ಅವರ ಪತ್ನಿಯರಾದ ಭಾರತಿ ವಿಷ್ಣುವರ್ಧನ್ ಹಾಗೂ ಸುಮಲತ ಅಂಬರೀಶ್ ಅವರು ಬಂದಿರುವುದು ಬಹಳ ಖುಷಿಯಾಗಿದೆ. ರಾಕ್ ಲೈನ್ ವೆಂಕಟೇಶ್ ಅವರು ಕರ್ನಾಟಕದಲ್ಲಿ “ಕಣ್ಣಪ್ಪ” ಚಿತ್ರದ ವಿತರಣೆ ಹಕ್ಕನ್ನು ಪಡೆದುಕೊಂಡಿದ್ದಾರೆ. ಭಾರತೀಯ ಚಿತ್ರರಂಗದ ಪ್ರಸಿದ್ಧ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

ಸೋಮವಾರದ ದಿನ ನಮ್ಮ ಚಿತ್ರದ “ಶಿವಶಿವ ಶಂಕರ” ಹಾಡು ಬಿಡುಗಡೆಯಾಗಿದೆ. ಹಾಡು ಬಿಡುಗಡೆ ಮಾಡಿಕೊಟ್ಟ ಗುರೂಜಿ ಅವರಿಗೆ, ಭಾರತಿ ವಿಷ್ಣುವರ್ಧನ್, ಸುಮಲತ ಅಂಬರೀಶ್ ಹಾಗೂ ರಾಕ್ ಲೈನ್ ವೆಂಕಟೇಶ್ ಅವರಿಗೆ ಧನ್ಯವಾದ. ನಮ್ಮ ಚಿತ್ರ ಏಪ್ರಿಲ್ 25ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಎಲ್ಲರು ನೋಡಿ ಪ್ರೋತ್ಸಾಹ ನೀಡಿ ಎಂದರು ನಟ ವಿಷ್ಣು ಮಂಚು.

ಇಂದು ಬಿಡುಗಡೆಯಾದ ಹಾಡು ತುಂಬಾ ಚೆನ್ನಾಗಿದೆ. ಚಿತ್ರ ನೋಡುವ ಕಾತುರ ಹೆಚ್ಚಾಗಿದೆ. ನಮ್ಮ ಯಜಮಾನರಿಗೆ ಮೋಹನ್ ಬಾಬು ಎಂದರೆ ಬಹಳ ಪ್ರೀತಿ. ಅವರಿಗೂ ನಮ್ಮ ಯಜಮಾನರೆಂದರೆ ಅಷ್ಟೇ ಪ್ರೀತಿ. ಹಾಗಾಗಿ ಮೋಹನ್ ಬಾಬು, ಅವರ ಮಗನಿಗೆ ನಮ್ಮ ಯಜಮಾನರ ಹೆಸರನ್ನೇ (ವಿಷ್ಣು) ಇಟ್ಟಿದ್ದಾರೆ ಎಂದು ನಟಿ ಭಾರತಿ ವಿಷ್ಣುವರ್ಧನ್.

ಅಂಬರೀಶ್ ಅವರಿಗೆ ಮೋಹನ್ ಬಾಬು ಬಹಳ ಆತ್ಮೀಯರು. ಅವರ ಮಗ ವಿಷ್ಣು ಅವರನ್ನು ಸಹ ನಾವು ಚಿಕ್ಕವಯಸ್ಸಿನಿಂದ ನೋಡಿಕೊಂಡು ಬಂದಿದ್ದೇವೆ. ಮೋಹನ್ ಬಾಬು ನಿರ್ಮಾಣದ ಹಾಗೂ ವಿಷ್ಣು ಮಂಚು ಅಭಿನಯದ “ಕಣ್ಣಪ್ಪ” ಚಿತ್ರದ ಹಾಡನ್ನು ನೋಡಿ ಬಹಳ ಖುಷಿಯಾಯಿತು. ಚಿತ್ರ ಯಶಸ್ವಿಯಾಗಲೆಂದು ಸುಮಲತ ಅಂಬರೀಶ್ ಹಾರೈಸಿದರು.

“ಕಣ್ಣಪ್ಪ” ಚಿತ್ರವನ್ನು ನಾನು ಈಗಾಗಲೇ ನೋಡಿದ್ದೇನೆ. ಬಹಳ ಚೆನ್ನಾಗಿದೆ. ಈ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಸಂತೋಷವಾಗುತ್ತಿದೆ ಎಂದು ಕರ್ನಾಟಕದ ವಿತರಣೆ ಹಕ್ಕು ಪಡೆದುಕೊಂಡಿರುವ ರಾಕ್ ಲೈನ್ ವೆಂಕಟೇಶ್ ತಿಳಿಸಿದರು.

ನಿರ್ದೇಶಕ ಮುಖೇಶ್ ಕುಮಾರ್ ಸಿಂಗ್, ಹಾಡು ಬರೆದಿರುವ ರಾಮಜೋಗಿ ಶಾಸ್ತ್ರಿ ಹಾಗೂ ಸಂಗೀತ ನಿರ್ದೇಶಕ ಸ್ಟೀಫನ್ ದೇವಸ್ಸಿ “ಕಣ್ಣಪ್ಪ” ಚಿತ್ರದ ಕುರಿತು ಮಾತನಾಡಿದರು. ಹೆಸಾರಾಂತ ಗಾಯಕ ವಿಜಯ್ ಪ್ರಕಾಶ್ ಈ ಹಾಡನ್ನು ಹಾಡಿದ್ದಾರೆ.

ಇನ್ನಷ್ಟು ಓದಿರಿ

Scroll to Top