ತೆರೆಗೆ ಬರಲು ಸಿದ್ದವಾಗಿದೆ ತಿಲಕ್ ಶೇಖರ್ ಅಭಿನಯದ, ಗಿರೀಶ್ ಕುಮಾರ್ ನಿರ್ದೇಶನದ “ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್” .

Picture of Cinibuzz

Cinibuzz

Bureau Report

ವುಡ್ ಕ್ರೀಪರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ತಿಲಕ್ ಶೇಖರ್(ಉಗ್ರಂ ಖ್ಯಾತಿ) ನಾಯಕರಾಗಿ ನಟಿಸಿರುವ ಹಾಗೂ ಗಿರೀಶ್ ಕುಮಾರ್ ನಿರ್ದೇಶನದೊಂದಿಗೆ ಪ್ರಮುಖಪಾತ್ರದಲ್ಲೂ ನಟಿಸಿರುವ “ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ.

‌ಈ ಹಿಂದೆ ನಾನು “ಭಾವಚಿತ್ರ” ಎಂಬ ಚಿತ್ರವನ್ನು ನಿರ್ದೇಶಿಸಿದ್ದೆ. ಇದು ನನ್ನ ಮೂರನೇ ನಿರ್ದೇಶನದ ಚಿತ್ರ. ಈ ಚಿತ್ರದಲ್ಲಿ ನಿರ್ದೇಶನದ ಜೊತೆಗೆ ಪ್ರಮುಖಪಾತ್ರದಲ್ಲಿ ನಟನೆಯನ್ನು ಮಾಡಿದ್ದೇನೆ.‌ ತಿಲಕ್ ಶೇಖರ್ ಅವರು “ಗ್ಯಾಂಗ್ ಸ್ಟರ್” ಆಗಿ, ನಾನು “ಫ್ರಾಂಕ್ ಸ್ಟರ್” ಆಗಿ ನಟಿಸಿದ್ದೇವೆ. ಇದು ಯೂಟ್ಯೂಬರ್ ಒಬ್ಬನ ಸುತ್ತ ನಡೆಯುವ ಕಥೆಯಾಗಿದೆ. ತಿಲಕ್ ಅವರು ಬಹಳ ದಿನಗಳ ನಂತರ ಗ್ಯಾಂಗ್ ಸ್ಟರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್ ಸಹ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ಅತೀ ಶೀಘ್ರದಲ್ಲೇ ಚಿತ್ರ ತೆರೆಗೆ ಬರಲಿದೆ ಎಂದು ನಟ, ನಿರ್ದೇಶಕ ಗಿರೀಶ್ ಕುಮಾರ್ ತಿಳಿಸಿದ್ದಾರೆ.

ತಿಲಕ್ ಶೇಖರ್ , ಗಿರೀಶ್ ಕುಮಾರ್, ವಿರಾನಿಕ ಶೆಟ್ಟಿ, ಬಾಲ ರಾಜವಾಡಿ, ಗಿರೀಶ್ ಬಿಜ್ಜಳ್, ಹೊನವಳ್ಳಿ ಕೃಷ್ಣ, ಸಂಗೀತ ಅನಿಲ್, ಸುಂದರ್, ರತೀಶ್ ಕುಮಾರ್ , ಮಜಾಟಾಕೀಸ್ ಪವನ್, ಹನುಮಂತೇಗೌಡ, ಭವಾನಿ ಪ್ರಕಾಶ್ ಮುಂತಾದವರು “ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್” ತಾರಾಬಳಗದಲ್ಲಿದ್ದಾರೆ.

ಜಾನ್ ಕೆನಡಿ ಸಂಗೀತ ಸಂಯೋಜಿಸಿರುವ ನಾಲ್ಕು ಹಾಡುಗಳು ಈ ಚಿತ್ರದಲ್ಲಿದೆ. ಅಜಯ್ ಕುಮಾರ್ ಛಾಯಾಗ್ರಹಣ ಹಾಗೂ ರತೀಶ್ ಕುಮಾರ್ ಸಂಕಲನ ಈ ಚಿತ್ರಕ್ಕಿದೆ.

ಇನ್ನಷ್ಟು ಓದಿರಿ

Scroll to Top