ತಮಿಳು ಚಿತ್ರರಂಗದಲ್ಲಿ ಮಿಂಚುತ್ತಿರುವ ಕನ್ನಡತಿ ಸಂಹಿತಾ ವಿನ್ಯಾ!

Picture of Cinibuzz

Cinibuzz

Bureau Report

ಇದೀಗ ಕನ್ನಡ ಅಲ್ಲದೆ ಪಕ್ಕದ ತಮಿಳು, ತೆಲುಗು ಚಿತ್ರರಂಗದಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ನಟಿ ಎಂದರೆ ಸಂಹಿತಾ ವಿನ್ಯಾ.
75ಕ್ಕೂ ಹೆಚ್ಚು ರಾಷ್ಟ್ರೀಯ, ಅಂತಾರಾಷ್ಟ್ರೀಯ ಫ್ಯಾಷನ್ ಷೋಗಳಲ್ಲಿ ಭಾಗವಹಿಸಿ, ಸೂಪರ್ ಮಾಡೆಲ್ ಎನಿಸಿಕೊಂಡಿರುವ ಸಂಹಿತಾ ವಿನ್ಯಾ ಇದೀಗ ತಮಿಳಲ್ಲಿ ಜೀವಾ ಸಹೋದರ ಜತಿನ್ ರಮೇಶ್ ಜತೆಗೂ ನಟಿಸುತ್ತಿದ್ದಾರೆ.


ಇದಲ್ಲದೆ ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿರುವ ತಮಿಳಿನ ಹಿಡನ್ ಕ್ಯಾಮೆರಾ ಚಿತ್ರದಲ್ಲಿ ಸಂಹಿತಾ ನಾಯಕಿಯಾಗಿ ನಟಿಸುತ್ತಿದ್ದು, ಆ ಚಿತ್ರದ ಕೆಲಸ ಕೇರಳದಲ್ಲಿ ನಡೆಯುತ್ತಿದೆ.


ಕಳೆದ ಹಲವಾರು ವರ್ಷಗಳಿಂದ ಸಾಕಷ್ಟು ಚಿತ್ರಗಳಲ್ಲಿ ನಟಿಸುತ್ತ ಬಂದಿರುವ ಸಂಹಿತಾ ಅಭಿನಯದ ‘ಸೀತಮ್ಮ ಬಂದಳು ಸಿರಿಮಲ್ಲಿಗೆ ತೊಟ್ಟು’ ಚಿತ್ರ ಬಿಡುಗಡೆಯಾದಾಗ ಅಭಿಮಾನಿಗಳು ಕಟೌಟ್ ನಿಲ್ಲಿಸುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು.


ಸಂಹಿತಾ ವಿನ್ಯಾ ಅಭಿನಯದ ಅಭಿನಯದ ಮಿಕ್ಸಿಂಗ್ ಪ್ರೀತಿ,’ಮೆಜೆಸ್ಟಿಕ್ -2′, ಆಯುಧ, ಜಿಎಸ್ ಟಿ. ಸ್ವಾಭಿಮಾನಿ, ಯಾಕೋ ಬೇಜಾರು, ವಿದೂಷಕ ಮುಂತಾದ ಚಿತ್ರಗಳು ರಿಲೀಸ್ಗೆ ರೆಡಿ ಇವೆ‌.ಮತ್ತೊಂದು ತಮಿಳು ಚಿತ್ರ ಮಿಕ್ಸಿಂಗ್ ಕಾದಲ್ ಬಿಡುಗಡೆಗೆ ರೆಡಿಯಿದೆ.


ಅಮೃತಘಳಿಗೆ, ಲಂಗೋಟಿ ಮ್ಯಾನ್ ಅಲ್ಲದೆ ತೆಲುಗಿನ ಯು ಆರ್ ಮೈ ಹೀರೋ ಚಿತ್ರದಲ್ಲೂ ಸಂಹಿತಾ ವಿನ್ಯಾ ನಾಯಕಿಯಾಗಿ ನಟಿಸಿದ್ದಾರೆ.
ಹಾಲು ತುಪ್ಪ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಸಂಹಿತಾ ವಿನ್ಯಾ,‌ಅಮೃತ ಘಳಿಗೆ, ವಿಷ್ಣು ಸರ್ಕಲ್, ನಸಾಬ್, ಮಿಕ್ಸಿಂಗ್ ಪ್ರೀತಿ, ಸ್ವಾಭಿಮಾನಿ ಅಲ್ಲದೆ ತೆಲುಗು, ತಮಿಳು ಸೇರಿದಂತೆ 18ಕ್ಕೂ ಹೆಚ್ಚು ಚಿತ್ರಗಳಲ್ಲಿ ವಿಭಿನ್ನ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಇದೀಗ ಪಕ್ಕದ ತಮಿಳು, ತೆಲುಗು ಚಿತ್ರರಂಗದಲ್ಲೂ ಸಹ ಸಖತ್ ಮಿಂಚುತ್ತಿದ್ದಾರೆ.


ಅಚ್ಚಕನ್ನಡದ ಪ್ರತಿಭೆಯಾದ ಸಂಹಿತಾ ವಿನ್ಯಾ, ಇದೀಗ. ಸೌತ್ ಫಿಲಂ ಇಂಡಸ್ಟ್ರಿಯಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದಾರೆ.

ಇನ್ನಷ್ಟು ಓದಿರಿ

Scroll to Top