ವಿಜಯ್‌ ಸೇತುಪತಿ ಹಾಗೂ ಪುರಿ ಜಗನ್ನಾಥ್ ಕಾಂಬಿನೇಷನ್ ಸಿನಿಮಾದ ಶೂಟಿಂಗ್ ಮುಕ್ತಾಯ

Picture of Cinibuzz

Cinibuzz

Bureau Report

ನಿರ್ದೇಶಕ ಪುರಿ ಜಗನ್ನಾಥ್‌ ಹಾಗೂ ವಿಜಯ್ ಸೇತು ಪತಿ ಕಾಂಬೋದ ಹೊಸ ಸಿನಿಮಾದ ಶೂಟಿಂಗ್ ಮುಕ್ತಾಯಗೊಂಡಿದೆ. ಸ್ಪೆಷಲ್ ವಿಡಿಯೋ‌ ಮೂಲಕ ಚಿತ್ರತಂಡ ಚಿತ್ರೀಕರಣ ಮುಗಿಸಿರುವ ಬಗ್ಗೆ ಮಾಹಿತಿ ನೀಡಿದೆ.

ಮಾಸ್ ಆಕ್ಷನ್ ಎಂಟರ್ ಟೈನರ್ ಕಥಾಹಂದರ ಹೊಂದಿರುವ ಸಿನಿಮಾದಲ್ಲಿ ದೊಡ್ಡ ತಾರಾಬಳಗವಿದೆ. ಸಂಯುಕ್ತ ನಾಯಕಿಯಾಗಿ ನಟಿಸುತ್ತಿದ್ದು, ದುನಿಯಾ ವಿಜಯ್ ಕುಮಾರ್, ಟಬು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಬ್ರಹ್ಮನಂದ್ ಹಾಗೂ ವಿಟಿವಿ ಗಣೇಶ್ ಕೂಡ ತಾರಾಬಳಗದಲ್ಲಿದ್ದಾರೆ.

ಪುರಿ ಜಗನ್ನಾಥ್ ಅವರು ತಮ್ಮದೇ ಪುರಿ ಕನೆಕ್ಟ್ಸ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಿಸುತ್ತಿದ್ದಾರೆ. ಜೆಬಿ ನಾರಾಯಣ್ ರಾವ್ ಕೊಂಡ್ರೊಲ್ಲಾ ಅವರ ಜೆಬಿ ಮೋಷನ್ ಪಿಕ್ಚರ್ಸ್‌ ಬ್ಯಾನರ್‌ ಸಹಯೋಗದಲ್ಲಿ ಚಾರ್ಮಿ ಕೌರ್‌ ಈ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ. ಅರ್ಜುನ್ ರೆಡ್ಡಿ, ಅನಿಮಲ್ ಚಿತ್ರಗಳಿಗೆ ಸಂಗೀತ ಒದಗಿಸಿರುವ ಹರ್ಷವರ್ದನ್ ರಾಮೇಶ್ವರ್ ಈ ಚಿತ್ರಕ್ಕೂ ಮ್ಯೂಸಿಕ್ ನೀಡಿದ್ದಾರೆ.

ಸಿನಿಮಾಗೆ ಶೀರ್ಷಿಕೆ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಅದನ್ನು ತಿಳಿಯಲು ಕೂಡ ಅಭಿಮಾನಿಗಳಿಗೆ ಕುತೂಹಲ ಇದೆ. ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರತಂಡ ಪ್ರಚಾರ ಕಾರ್ಯ ನಡೆಸಲು ಯೋಜನೆ ಹಾಕಿಕೊಂಡಿದೆ. ಶೀಘ್ರದಲ್ಲೇ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆ ಮಾಡಲಿದೆ. . ಈ ಪ್ಯಾನ್-ಇಂಡಿಯಾ ಯೋಜನೆಯು ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಇನ್ನಷ್ಟು ಓದಿರಿ

Scroll to Top