ರೆಬೆಲ್ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ನಾಯಕರಾಗಿ ನಟಿಸಿರುವ ‘ಅಮರ್’ ಚಿತ್ರÀ ಕಳೆದ ವರ್ಷ ಅಂಬರೀಶ್(ಮೇ 29) ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಆರಂಭವಾಗಿತ್ತು. ಪ್ರಸಕ್ತ ವರ್ಷ ಅಂಬರೀಶ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲೇ ಚಿತ್ರವನ್ನು ತೆರೆಗೆ ತರುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ಅಡಿಯಲ್ಲಿ ಸಂದೇಶ್ ಅವರು ನಿರ್ಮಾಣ ಮಾಡಿದ್ದಾರೆ. ಈ ಹಿಂದೆ ಅಂಬರೀಶ್ ಅಭಿನಯದ ಹಲವಾರು ಚಿತ್ರಗಳನ್ನು ನಿರ್ಮಿಸಿದ್ದ ಸಂದೇಶ ನಾಗರಾಜ್ ಅವರು ಈಗ ಅವರ ಪುತ್ರನ ಸಿನಿಮಾಗೆ ಹಣ ಹೂಡಿದ್ದಾರೆ.
ನಾಗಶೇಖರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನವಿದೆ. ಸತ್ಯ ಹೆಗಡೆ ಛಾಯಾಗ್ರಹಣ, ಹರ್ಷ ಸಂಕಲನ, ಧನಂಜಯ್, ಇಮ್ರಾನ್, ಕಲೈ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ಥ್ರಿಲ್ಲರ್ ಮಂಜು, ಅಂಬು ಅರಿವು ಅವರ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಅಭಿಷೇಕ್ ಅಂಬರೀಶ್, ತಾನ್ಯಾ ಹೋಪ್, ಸುಧಾರಾಣಿ, ದೇವರಾಜ್, ದೀಪಕ್ ಶೆಟ್ಟಿ, ಅರುಣ್ ಸಾಗರ್, ಚಿಕ್ಕಣ್ಣ, ಸಾಧುಕೋಕಿಲ, ನಿರೂಪ್ ಭಂಡಾರಿ ಮುಂತಾದವರಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಬೆಂಗಳೂರು, ಮೈಸೂರು, ಮಡಿಕೇರಿ, ಮಂಗಳೂರು, ಮಣಿಪಾಲ, ಊಟಿ, ಕೇರಳ, ಕೊಯಮತ್ತೂರು, ಸಿಂಗಾಪುರ ಹಾಗೂ ಸ್ವಿಜರ್ ಲ್ಯಾಂಡ್ನಲ್ಲೂ ಚಿತ್ರೀಕರಣವಾಗಿದೆ. ಅತೀಹೆಚ್ಚು ಲೊಕೇಶನ್ಗಳಲ್ಲಿ ಚಿತ್ರೀಕರಣಗೊಂಡಿರುವ ಚಿತ್ರ ಎಂಬ ಹೆಗ್ಗಳಿಕೆ ಪಡೆದಿದೆ.
No Comment! Be the first one.