ದಿವ್ಯ ಉರುಡುಗ ಬಿಟ್ಟಿರುವ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಕ್ಯೂರಿಯಾಸಿಟಿ ಹುಟ್ಟಿಸಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಒಬ್ಬೊಬ್ಬರು ಒಂದೊಂದು ಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
ಬಿಗ್ಬಾಸ್ ಖ್ಯಾತಿಯ ಯುವಜೋಡಿ ಅರವಿಂದ್ ಕೆಪಿ ಮತ್ತು ದಿವ್ಯಾ ಉರುಡುಗ ಈಗ ತೆರೆಯಮೇಲೂ ಒಟ್ಟಿಗೇ ಕಾಣಿಸಿಕೊಳ್ಳುತ್ತಿದ್ದಾರೆ. ಅರವಿಂದ್ ಕೌಶಿಕ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಆ ಚಿತ್ರದ ಹೆಸರು ಅರ್ಧಂಬರ್ಧ ಪ್ರೇಮಕಥೆ. ಹುಲಿರಾಯ, ತುಘ್ಲಕ್, ನಮ್ ಏರಿಯಾಲ್ ಒಂದಿನ ಸಿನಿಮಾಗಳಿಂದ ಗುರುತಿಸಿಕೊಂಡ ಅರವಿಂದ್ ಕೌಶಿಕ್, ರಕ್ಷಿತ್ಶೆಟ್ಟಿ, ರಿಶಬ್ಶೆಟ್ಟಿ, ರಚಿತಾರಾಮ್, ಅನೀಶ್, ಬಾಲು ನಾಗೇಂದ್ರ
ಸೇರಿದಂತೆ ಅನೇಕ ಕಲಾವಿದರನ್ನು ಪರಿಚಯಿಸಿದ್ದರು. ಈಗ ಬೈಕ್ ರೇಸರ್ ಅರವಿಂದ್ರನ್ನು ನಾಯಕನಾಗಿ ಇಂಟ್ರಡ್ಯೂಸ್ ಮಾಡುತ್ತಿದ್ದಾರೆ. ಅರ್ಜುನ್ ಜನ್ಯ ಅವರು ಅರ್ದಂಬರ್ಧ ಪ್ರೇಮಕಥೆಗೆ ಚೆಂದದ ಹಾಡುಗಳನ್ನು ಮಾಡಿಕೊಟ್ಟಿದ್ದಾರೆ. ಈ ಚಿತ್ರದ ಆಡಿಯೋ ರೈಟ್ಸ್ ಅನ್ನು ಎ2 ಚಾನೆಲ್ ಒಳ್ಳೇ ಬೆಲೆಗೆ ಖರೀದಿಸಿದೆ.
ಬಕ್ಸಸ್ ಮೀಡಿಯಾ, ಲೈಟ್ಹೌಸ್ ಮೀಡಿಯಾ ಮತ್ತು ಆರ್ಎಸಿ ವಿಷುವಲ್ಸ್ ಸೇರಿ ಅರ್ದಂಬರ್ಧ ಪ್ರೇಮ ಕಥೆ ಚಿತ್ರವನ್ನು ನಿರ್ಮಿಸಿದ್ದಾರೆ. ಸೂರ್ಯ ಅವರ ಛಾಯಾಗ್ರಹಣ, ಸಂತೋಷ್ ರಾಧಾಕೃಷ್ಣನ್ ಅವರು ಶೀರ್ಷಿಕೆ ವಿನ್ಯಾಸದ ಜೊತೆಗೆ ಗ್ರಾಫಿಕ್ಸ್ ಕೆಲಸವನ್ನೂ ನಿಭಾಯಿಸಿದ್ದಾರೆ. ರ್ಯಾಪರ್ ಆಲ್ಓಕೆ ಅಲೋಕ್, ಶ್ರೇಯಾ, ವೆಂಕಟ್ಶಾಸ್ತ್ರಿ, ಪ್ರದೀಪ್ರೋಷನ್, ಸೂರಜ್ ಹೂಗಾರ್, ಸುಜಿತ್ಶೆಟ್ಟಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಶಿವರಾಜ್ ಮೇಹು ಅವರ ಸಂಕಲನ, ಸತೀಶ್ ಬ್ರಹ್ಮಾವರ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ. ಒಂದು ವಿಶೇಷ ಹಾಡನ್ನು ನವೀನ್ ಸಜ್ಜು ಹಾಡಿದ್ದಾರೆ.
ಪ್ರೀತಿ ಎನ್ನುವುದು ನಮ್ಮ ಕನಸುಗಳ ಜೊತೆಗೇ ಬೆಳೆಯುತ್ತೆ, ಆದರೆ ಅದೇ ಪ್ರೀತಿ ಸಂಬಂಧವಾಗಿ ಬದಲಾದಾಗ ಅದು ಉಳಿಯೋದು ಕಷ್ಟ. ಏಕೆಂದರೆ ಅದು ನಮ್ಮ ಸುತ್ತಲಿನ ಸಮಾಜದ ಚೌಕಟ್ಟಿನಲ್ಲಿ ಬದುಕಬೇಕಾಗಿರುತ್ತೆ, ಇಂಥ ಒಂದು ಲವ್ಸ್ಟೋರಿಯೇ ಅರ್ಧಂಬರ್ಧ ಪ್ರೇಮಕಥೆ. ಅಂತಾ ನಿರ್ದೇಶಕ ಅರವಿಂದ್ ಕೌಶಿಕ್ ಮಾಹಿತಿ ನೀಡಿದ್ದರು. ಈ ಸಿನಿಮಾದ ಬಗೆಗಿನ ವಿಚಾರಗಳು ಆಗಾಗ ಕುತೂಹಲ ಮೂಡಿಸುತ್ತಲೇ ಇವೆ.
ಸದ್ಯ ದಿವ್ಯ ಉರುಡುಗ ಬಿಟ್ಟಿರುವ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಕ್ಯೂರಿಯಾಸಿಟಿ ಹುಟ್ಟಿಸಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಒಬ್ಬೊಬ್ಬರು ಒಂದೊಂದು ಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಮೇಲ್ನೋಟಕ್ಕೆ ನೋಡಿದರೆ ದಿವ್ಯಾ ಮತ್ತು ಅರವಿಂದ್ ಮದುವೆಯ ವಿಚಾರವಾಗಿ ಏನಾದರೂ ಅನೌನ್ಸ್ ಮಾಡುತ್ತಾರಾ ಎನ್ನುವ ಅನುಮಾನ ಹುಟ್ಟಿಸಿದೆ. ತೆರೆಮೇಲೆ ಜೋಡಿಯಾಗಿರುವ ದಿವ್ಯಾ-ಅರವಿಂದ್ ನಿಜಜೀವನದಲ್ಲೂ ಒಂದಾಗುತ್ತಾರೆ ಎನ್ನುವ ಮಾಹಿತಿ ಇರೋದು ಬಹುಶಃ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಅಂತಿಮವಾಗಿ ದಿವ್ಯಾ ಉರುಡುಗ ಯಾವ ವಿಚಾರವನ್ನು ಘೋಷಿಸುತ್ತಾರೆ ಅನ್ನೋದು ಅತಿ ಶೀಘ್ರದಲ್ಲಿ ಗೊತ್ತಾಗಲಿದೆ!
No Comment! Be the first one.