ಮಲಯಾಳಂ ಚಿತ್ರರಂಗದಲ್ಲಿ ಹೀರೋಗಿರಿಯ ಸಿನಿಮಾಗಳಿಗೆ ಕಟ್ಟು ಬೀಳದೆ ತಮ್ಮದೇ ಆದ ಮಾದರಿಯಲ್ಲಿ ಸಿನಿಮಾಗಳನ್ನು ಮಾಡುತ್ತಿರುವ ಸ್ಟಾರ್ ನಟ ಟೋವಿನೊ ಥಾಮಸ್.. ಒಂದರ ಮೇಲೊಂದು ಹಿಟ್ ಸಿನಿಮಾ ನೀಡುವ ಜೊತೆಗೆ ಅಭಿಮಾನಿಗಳನ್ನೂ ಸಹ ಸಂಪಾದಿಸುತ್ತಾ ಸಾಗುತ್ತಿರುವ ಈ ತಾರೆಗಿಂದು ಜನ್ಮದಿನದ ಸಂಭ್ರಮ. ಟೋವಿನೋ ಥಾಮಸ್ ಹುಟ್ಟಹಬ್ಬಕ್ಕೆ ARM ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಲಾಗಿದೆ. AMR ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಜಿತಿಲ್ ಲಾಲ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮ್ಯಾಜಿಕ್ ಫ್ರೇಮ್ಸ್ ಮತ್ತು […]
ಮುಗಿಲ್ ಪೇಟೆ ಡೈರೆಕ್ಷರ್ ಹೊಸ ಸಿನಿಮಾಗೆ ಟೈಟಲ್ ಫಿಕ್ಸ್..ಸಂಕ್ರಾಂತಿ ಹಬ್ಬಕ್ಕೆ ‘ದೇವನಾಂಪ್ರಿಯ’ ಫಸ್ಟ್ ಲುಕ್ ರಿಲೀಸ್. ಜೋಡಿಹಕ್ಕಿ ಹೀರೋ ತಾಂಡವ್ ಈಗ ‘ದೇವನಾಂಪ್ರಿಯ’..ಸಂಕ್ರಾಂತಿ ಹಬ್ಬಕ್ಕೆ ಮುಗಿಲ್ ಪೇಟೆ ಡೈರೆಕ್ಟರ್ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್. ‘ಅಡಚಣೆಗಾಗಿ ಕ್ಷಮಿಸಿ’ ಮತ್ತು ‘ಮುಗಿಲ್ ಪೇಟೆ’ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ಭರತ್ ಎಸ್. ನಾವುಂದ ಈಗ 3ನೇ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾದ ಮೂಲಕ ‘ಜೋಡಿಹಕ್ಕಿ’ ಧಾರಾವಾಹಿ ಖ್ಯಾತಿಯ ನಟ ತಾಂಡವ್ ರಾಮ್ ಅವರು ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ […]
ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ರುದ್ರಶಿವ ನಿರ್ದೇಶನದ `ಶಭ್ಬಾಷ್’ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಅವರು, ತಮ್ಮ ಶಿಷ್ಯನ ಚಿತ್ರಕ್ಕೆ ಕ್ಲಾಪ್ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಿದ್ದಾರೆ. ಶ್ರೀ ಬಂಡೆ ಮಹಾಕಾಳಿ ಅಮ್ಮನವರ ಸನ್ನಿಧಾನದಲ್ಲಿ ಈ ಮುಹೂರ್ತ ಸಮಾರಂಭ ಅರ್ಥವತ್ತಾಗಿ ನೆರವೇರಿದೆ. ಇದೇ ಸಂದರ್ಭದಲ್ಲಿ ` ಶಭ್ಬಾಷ್’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಕೂಡಾ ಅನಾವರಣಗೊಂಡಿದೆ. ಹೀಗೆ ಮುಹೂರ್ತ ಸಮಾರಂಭ ಸಾಂಘವಾಗಿ ನೆರವೇರಿದ […]
ರಾಷ್ಟ್ರ ಪ್ರಶಸ್ತಿ ವಿಜೇತ (National award winning) ನಿರ್ದೇಶಕ ಬ್ಲೆಸ್ಸಿ (Director blessy) ಸಾರಥ್ಯದ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಮತ್ತು ಅಮಲಾ ಪಾಲ್ (Amala Paul) ನಟನೆಯ ವಿಭಿನ್ನ ಮತ್ತು ಬಹು ನಿರೀಕ್ಷೆಯ ಚಿತ್ರ ಆಡು ಜೀವಿತಂ (Aadujeevitham Movie ) `ದಿ ಗೋಟ್ ಲೈಫ್’ ಸಿನಿಮಾ 2024ರ ಏಪ್ರಿಲ್ 10ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇದೀಗ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನ್ನು ಪ್ರಭಾಸ್ ಅನಾವರಣಗೊಳಿಸಿದ್ದಾರೆ. ಪ್ರಭಾಸ್ ಹಂಚಿಕೊಂಡಿರುವ ಫಸ್ಟ್ ಲುಕ್ನಲ್ಲಿ ಪೃಥ್ವಿರಾಜ್ ಉದ್ದ […]
ಆರ್.ಎಸ್.ಪಿ. ಪ್ರೊಡಕ್ಷನ್ಸ್ ಮೂಲಕ ಲಕ್ಷ್ಮಿ ಹರೀಶ್ ಅವರು ನಿರ್ಮಿಸುತ್ತಿರುವ ಉಸಿರು ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ನಟ ತಿಲಕ್, ಪ್ರಿಯಾ ಹೆಗ್ಡೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರಕ್ಕೆ ಪ್ರಭಾಕರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಆರ್ಎಸ್ಪಿ ಗ್ರೂಪ್ ಆಫ್ ಕಂಪನೀಸ್ ನಡೆಸುತ್ತಿರುವ, ಲಕ್ಷ್ಮಿ ಹರೀಶ್ ಅವರು ನೂತನ ಪ್ರೊಡಕ್ಷನ್ ಹೌಸ್ ಆರಂಭಿಸಿ ಆ ಮೂಲಕ ಉಸಿರು ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸದ್ಯದಲ್ಲೇ ಚಿತ್ರೀಕರಣ ಆರಂಭಿಸುತ್ತಿರುವ ಈ ಚಿತ್ರದ ಪೋಸ್ಟರ್ ಅನಾವರಣ ಹಾಗೂ ಪತ್ರಿಕಾಗೋಷ್ಠಿ ಕಾರ್ಯಕ್ರಮ […]
ರೇಣು ಮೂವೀಸ್ ಮೂಲಕ ಒಂದಷ್ಟು ಸ್ನೇಹಿತರೇ ಸೇರಿ ನಿರ್ಮಿಸಿರುವ ಚಿತ್ರ ಜೊತೆಯಾಗಿರು. ಅಜರಾಮರ, ನಾನೊಬ್ನೆ ಒಳ್ಳೇವ್ನು ಸೇರಿದಂತೆ ಹಲವಾರು ಸಿನಿಮಾಗಳಿಗೆ ಸಹಾಯಕ ನಿರ್ದೇಶಕ, ಸಹ ನಿರ್ದೇಶಕನಾಗಿಯೂ ಕೆಲಸ ಮಾಡಿದ ಸತೀಶ್ ಕುಮಾರ್ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಹಾಗೂ ೩ ಹಾಡುಗಳ ಪ್ರದರ್ಶನ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ೨೦೦೯ರಲ್ಲಿ ನಡೆದ ನೈಜ ಘಟನೆಯಿಂದ ಪ್ರೇರಿತವಾದ ಕಥೆ ಈ ಚಿತ್ರದಲ್ಲಿದೆ. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಸತೀಶ್ ಕುಮಾರ್, ಆಗ […]
ಸ್ಯಾಂಡಲ್ವುಡ್ನಲ್ಲಿ ವಿಭಿನ್ನ ಸಿನಿಮಾಗಳಿಗೇನು ಬರವಿಲ್ಲ. ಸಾಕಷ್ಟು ಸಿನಿಮಾಗಳು ಅಭಿಮಾನಿಗಳನ್ನು ರಂಜಿಸುತ್ತಿವೆ. ಇದೀಗ ಮತ್ತೊಂದು ವಿನೂತನ ಸಿನಿಮಾ ಕನ್ನಡ ಅಭಿಮಾನಿಗಳ ಗಮನ ಸೆಳೆಯುತ್ತಿದೆ, ಅದೇ ‘ಕೆರೆಬೇಟೆ’. ಈಗಾಗಲೇ ಫಸ್ಟ್ ಲುಕ್ ಮತ್ತು ಮೋಷನ್ ಪೋಸ್ಟರ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ‘ಕೆರೆಬೇಟೆ’, ಇದೀಗ ಟೀಸರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಇದು ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ. ಕೆರೆಬೇಟೆ, ಗೌರಿ ಶಂಕರ್ ನಾಯಕನಾಗಿ ನಟಿಸಿದ್ದಾರೆ. ರಾಜ್ಗುರು ಆಕ್ಷನ್ ಕಟ್ ಹೇಳಿದ್ದಾರೆ. ಈ ಮೊದಲು ಜೋಕಾಲಿ ಮತ್ತು ರಾಜಹಂಸ ಸಿನಿಮಾಗಳಲ್ಲಿ […]
ನಡೆದುಹೋದ ಘಟನೆ ಮತ್ತೆ ಮರುಕಳಿಸಲ್ಲ. ಆದರೆ, ಅಲ್ಲಿ ಏನು ನಡೆಯಿತು ಅಂತಾ ತಿಳಿದುಕೊಳ್ಳೋಕೆ ಎವಿಡೆನ್ಸ್ ಇಂದ ಮಾತ್ರ ಸಾಧ್ಯ…. ನಾಲೆ ನಿರ್ಮಾಣದ ಕಾಮಗಾರಿ ಮಾಡಲು ಹೋದ ಕಾರ್ಮಿಕರ ಕಣ್ಣಿಗೆ ಬಿದ್ದ ಅಸ್ತಿಪಂಜರಗಳ ಬಗ್ಗೆ ತನಿಖೆ ಮಾಡಲು ಬಂದ ಫೊರೆನ್ಸಿಕ್ ತಂಡ ಅಗೆದು ತೆಗೆಯೋದು ಬರೋಬ್ಬರಿ ನೂರಾ ಎಂಟು ಜನರ ಕಳೇಬರ. ಅವರೆಲ್ಲಾ ಸತ್ತಿದ್ದು ಯಾಕೆ? ಅವರನ್ನೆಲ್ಲಾ ಅಷ್ಟು ನಿರ್ದಯಿಯಾಗಿ ಕೊಂದು ಒಂದೇ ಕಡೆ ಹೂತವನು ಯಾರು? ಅದಕ್ಕೆ ಕಾರಣ ಏನಿರಬಹುದು…? ಇಂಥದ್ದೊಂದು ಕೌತುಕದ ಪ್ರಶ್ನೆಯೊಂದಿಗೆ ಆರಂಭವಾಗುವ ಕತೆ […]
”ಭಾವನೆಗಳ ಭಾಷೆಗೆ ಮೌನವೆಂಬ ಲಿಪಿಯೇ ಪ್ರೇಮಿ” ಎಂಬ ಆಶಯದೊಟ್ಟಿಗೆ ಪ್ರೀತಿ ಪ್ರೇಮಗಳೆಂಬ ಜಗತ್ತಿನ ಅತೀ ಶ್ರೇಷ್ಠವಾದ, ಎಲ್ಲರೊಳಗೂ ಹುಟ್ಟಿ ಸಾಯುವ ಭಾವಕೋಶಗಳಿಗೆ ಹೊಸಬಗೆಯ ರೂಪ ನೀಡಿ ನಿರೂಪಿಸಲು ಹೊರಟಿದ್ದಾರೆ ನಿರ್ದೇಶಕ ವಿಜಯಾಪ್ರಿಯ ಅವರು. ಕನ್ನಡ ಚಿತ್ರರಂಗದ ಭವಿಷ್ಯದ ಭರವಸೆಯ ತಮ್ಮ ‘ವಿಜಯದೀಪ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ ಚೊಚ್ಚಲ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬೀಚಗೊಂಡನಹಳ್ಳಿ ಗ್ರಾಮ, ವಳಗೇರಳ್ಳಿ ಅಂಚೆ, ಬಾಗೂರು ಹೋಬಳಿ, ಚನ್ನರಾಯಪಟ್ಟಣ ತಾಲ್ಲೂಕು, ಹಾಸನ ಜಿಲ್ಲೆಯ ಶ್ರೀ ಮಾರುತಿ ದೇವಸ್ಥಾನದಲ್ಲಿ ದಿನಾಂಕ 24-12-2023 […]
ತಮಿಳಿನ ಖ್ಯಾತ ಕಾಮಿಡಿ ನಟ ಯೋಗಿ ಬಾಬು ಮತ್ತೆ ಹೀರೋ ಆಗಿ ಎಂಟ್ರಿ ಕೊಟ್ಟಿದ್ದಾರೆ. ಕಾಮಿಡಿ ಸ್ಟಾರ್ ಆಗಿ ಮಿಂಚುತ್ತಿದ್ದ ಯೋಗಿ ಬಾಬು ಎರಡನೇ ಬಾರಿ ಹೀರೋ ಆಗಿ ತೆರೆಮೇಲೆ ಮಿಂಚಲು ಸಜ್ಜಾಗಿದ್ದಾರೆ. ಯೋಗಿ ಬಾಬು ನಟನೆಯ ‘ಬೋಟ್’ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ‘ಬೋಟ್’ ಸಿನಿಮಾ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ಭಾಷೆಯಲ್ಲೂ ತೆರೆಗೆ ಬರುತ್ತಿದೆ. ವಿಶೇಷ ಎಂದರೆ ಕನ್ನಡದಲ್ಲೂ ಸಿನಿಮಾ ತೆರೆಗೆ ಬರುತ್ತಿದ್ದು ಈ ಮೂಲಕ ಯೋಗಿ ಸ್ಯಾಂಡಲ್ […]