ಸಲಾರ್ ಮೇಲೆ ಯಾಕೆ ಇವರಿಗೆ ಸೇಡು?
ಕಿತಾಪತಿ ಮಾಡಲು ಎಂತೆಂಥಾ ಕಿರಾತಕರು ಹೊಂಚು ಹಾಕಿ ಕಾದು ಕುಂತಿರುತ್ತಾರೆ ನೋಡಿ. ಹೊಂಬಾಳೆ ಫಿಲ್ಮ್ಸ್ ಕನ್ನಡ ಚಿತ್ರರಂಗವನ್ನು ಜಾಗತಿಕ ಮಟ್ಟದಲ್ಲಿ ಎತ್ತಿ ಹಿಡಿದ ಹೆಮ್ಮೆಯ ನಿರ್ಮಾಣ ಸಂಸ್ಥೆ ಅನ್ನೋದು ಪ್ರತಿಯೊಬ್ಬರಿಗೂ ಗೊತ್ತಿರುವ ವಿಚಾರ. ಕೆ.ಜಿ.ಎಫ್., ಕಾಂತಾರ ಎನ್ನುವ ಎರಡು ಸಿನಿಮಾಗಳು ಸಾಕು ಹೊಂಬಾಳೆಯ ಹಿರಿಮೆಯನ್ನು ಸಾರಲು. ಸಧ್ಯ ಹೊಂಬಾಳೆ ಭಾರತೀಯ ಚಿತ್ರರಂಗದ ಮುಂಚೂಣಿ ನಿರ್ಮಾಣ ಸಂಸ್ಥೆಯಾಗಿದೆ. ಪ್ರಬಾಸ್ ನಟನೆಯ ಸಲಾರ್ ಚಿತ್ರದ ಮೂಲಕ ಹೊಂಬಾಳೆ ಮತ್ತೊಂದು ಮೈಲಿಗಲ್ಲನ್ನು ಸೃಷ್ಟಿಸಲು ಸಿದ್ದವಾಗಿದೆ. ಇದೇ ಹೊತ್ತಿನಲ್ಲಿ ಯಾರೋ ನೀಚನೊಬ್ಬ ಹೊಂಬಾಳೆ […]
ಅತಿರೇಕವಿಲ್ಲದ ಅಥಿ… ಮೇರೆ ಸಾಥಿ!
ಎಲ್ಲೋ ಹುಟ್ಟಿ, ಎಲ್ಲೋ ಬೆಳೆದು, ದಿಢೀರಂತಾ ಮದುವೆಯಾಗಿ ಒಟ್ಟು ಸೇರಿದ ಎರಡು ಜೀವಗಳು ಇಡೀ ಜೀವನ ಒಂದಾಗಿ ಬಾಳಬೇಕು. ಪರಸ್ಪರರ ಇಷ್ಟ ಕಷ್ಟ, ನಡೆ, ನುಡಿ, ಮಾತು, ಮಂಥನಗಳು ಬೇರೆಬೇರೆಯಾಗಿರುತ್ತವೆ. ಇಬ್ಬರು ಬೆಳೆದ ವಾತಾವರಣ, ಸಂಸ್ಕೃತಿ, ರಿವಾಜುಗಳು ಕೂಡಾ ಭಿನ್ನವಾಗಿರುತ್ತವೆ. ಅಸಲಿಗೆ ಒಬ್ಬರಿಗೆ ಒಬ್ಬರ ಪರಿಚಯವೇ ಇರೋದಿಲ್ಲ. ಮದುವೆಗೆ ಮುಂಚೆ ಸಿಕ್ಕಾಪಟ್ಟೆ ಕನಸು ಕಂಡಿರುತ್ತಾರೆ. ಬದುಕು ಇನ್ನೇನೋ ಆಗಿಬಿಡಬಹುದು ಅಂತಾ ಭ್ರಮಿಸಿರುತ್ತಾರೆ. ಆದರೆ ಮದುವೆ ಅಂತಾದಮೇಲೆ ಆಗೋದೇ ಬೇರೆ. ಇಬ್ಬರೂ ನೀರಿಂದ ತೆಗೆದು ನೆಲಕ್ಕೆಸೆದ ಮೀನಂತಾಡಲು ಶುರು […]
ಪಾತಕ ಲೋಕದ ಕರಾಳ ಅಧ್ಯಾಯವನ್ನು ತೆರೆದಿಟ್ಟ ಕೈವ!
ಬೆಂಗಳೂರಿನ ದ್ರೌಪದಮ್ಮನ ಕರಗ ವಿಶ್ವಾದ್ಯಂತ ಹೆಸರುವಾಸಿ. ಜಾತಿ ಮತ ಮೀರಿ ಎಲ್ಲರೂ ಒಂದಾಗಿ ಸೇರಿ ಇದನ್ನು ಆಚರಿಸುತ್ತಾರೆ. ಈ ಧರ್ಮರಾಯನ ಗುಡಿಗೆ ಬರೋಬ್ಬರಿ ಎಂಟು ನೂರು ವರ್ಷಗಳ ಇತಿಹಾಸವಿದೆ. ನಾಡಪ್ರಭು ಕೆಂಪೇಗೌಡರು ಇದೇ ಗುಡಿಯನ್ನು ಕೇಂದ್ರವಾಗಿಟ್ಟುಕೊಂಡೇ ಬೆಂಗಳೂರನ್ನು ಕಟ್ಟಿದ್ದು ಎನ್ನುವ ಮಾತಿದೆ. ಇದೇ ಬೆಂಗಳೂರಿನ ಧರ್ಮರಾಯನ ದೇವಸ್ಥಾನದ ಆಸುಪಾಸಿನಲ್ಲಿರುವ ತಿಗಳರ ಪೇಟೆಯಲ್ಲಿ ಕಳೆದ ನಲವತ್ತು ವರ್ಷಗಳ ಅವಧಿಯಲ್ಲಿ ಹರಿದಿರೋ ನೆತ್ತರು ಒಬ್ಬಿಬ್ಬರದ್ದಲ್ಲ. ಅಂಥದ್ದೇ ಒಂದು ರಕ್ತ ಚರಿತ್ರೆ ʻಕೈವʼದ ಮೂಲಕ ತೆರೆದುಕೊಂಡಿದೆ.. ಪ್ರೀತಿಯೊಂದಕ್ಕೆ ಬಿಟ್ಟು ಅವನ ಹೃದಯದಲ್ಲಿ […]
ಪೂರ್ತಿ ಇಷ್ಟವಾಗುವ ಅರ್ದಂಬರ್ಧ ಪ್ರೇಮಕಥೆ!
ಈ ಹಿಂದೆ ನಮ್ ಏರಿಯಾಲ್ ಒಂದಿನ, ತುಘ್ಲಕ್, ಹುಲಿರಾಯ, ಶಾರ್ದೂಲ ಮುಂತಾದ ಚಿತ್ರಗಳನ್ನು ನೀಡಿದ್ದ ಅರವಿಂದ್ ಕೌಶಿಕ್ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ ಅರ್ದಂಬರ್ಧ ಪ್ರೇಮಕಥೆ. ನಿರ್ದೇಶಕ ಅರವಿಂದ್ ಕೌಶಿಕ್ ಆರಂಭದಿಂದಲೂ ಹೊಸತನದ ಕಥಾವಸ್ತುಗಳನ್ನು ಆಯ್ಕೆ ಮಾಡಿಕೊಳ್ಳುತ್ತಾ ಬಂದವರು. ಈ ಕಾರಣಕ್ಕೆ ಅರ್ಧಂಬರ್ಧ ಪ್ರೇಮಕಥೆ ಚಿತ್ರದ ಬಗ್ಗೆಯೂ ಹಲವು ರೀತಿಯ ಕುತೂಹಲಗಳು ಮೂಡಿದ್ದವು. ಈ ಸಲ ಅರವಿಂದ್ ಯಾವ ಬಗೆಯ ಕಥಾ ವಸ್ತುವನ್ನು ಆಯ್ಕೆ ಮಾಡಿಕೊಂಡಿರಬಹುದು ಎನ್ನುವ ಪ್ರಶ್ನೆ ಎಲ್ಲರದ್ದಾಗಿತ್ತು. ಈ ವಾರ ಚಿತ್ರ ತೆರೆಗೆ ಬಂದಿದೆ. ಈ […]
ದಿ ಗೋಟ್ ಲೈಫ್ ಸಿನಿಮಾ ಬಿಡುಗಡೆ ದಿನಾಂಕ ಇಲ್ಲಿದೆ!
ಪೃಥ್ವಿ ರಾಜ್ ಸುಕುಮಾರನ್ ಅಭಿನಯದ ದಿ ಗೋಟ್ ಲೈಫ್, ದಿ ಎಪಿಕ್ ಟೇಲ್ ಆಫ್ ದಿ ಗ್ರೇಟೆಸ್ಟ್ ಸರ್ವೈವಲ್ ಅಡ್ವೆಂಚರ್ ಸಿನಿಮಾಗೆ ರಿಲೀಸ್ ಡೇಟ್ ಫಿಕ್ಸ್ ಆಗಿದೆ. 2024ರ ಏಪ್ರಿಲ್ 10 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇದು ರಾಷ್ಟ ಪ್ರಶಸ್ತಿ ವಿಜೇತ ಬ್ಲೆಸ್ಸಿ ನಿರ್ದೇಶನದ ಸಿನಿಮಾ.ದಿ ಗೋಟ್ ಲೈಫ್ ಚಿತ್ರದಲ್ಲಿ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ. ಒಂದು ದಶಕದ ಪ್ರಯತ್ನದ […]
ಶಾರುಖ್ ಖಾನ್ ಹಾಗೂ ಸ್ನೇಹಿತರ ಎಮೋಷನಲ್ ಪಯಣದ ಹಾಡು ನೋಡಿ!
ಶಾರುಖ್ ಖಾನ್ ಹಾಗೂ ರಾಜ್ ಕುಮಾರ್ ಹಿರಾನಿ ಈ ಕ್ರೇಜಿ ಕಾಂಬಿನೇಷನ್ನ ಮೋಸ್ಟ್ ಎಕ್ಸ್ಪೆಕ್ಟೆಡ್ ಸಿನಿಮಾ ಡಂಕಿ..ಇದೇ 21ರಂದು ವರ್ಲ್ಡ್ ವೈಡ್ ಚಿತ್ರ ಬಿಡುಗಡೆಯಾಗ್ತಿದ್ದು, ಪ್ರಚಾರ ಭರಾಟೆ ಕೂಡ ಜೋರಾಗಿದೆ. ಡಂಕಿ ಡ್ರಾಪ್-1 ವಿಡಿಯೋ ಅನಾವರಣ ಮಾಡುವ ಮೂಲಕ ಪ್ರಮೋಷನ್ ಶುರು ಮಾಡಿದ್ದ ಚಿತ್ರತಂಡವೀಗ ಡಂಕಿ ಡ್ರಾಪ್-3 ಟೈಟಲ್ ನಡಿ ಎರಡನೇ ಹಾಡನ್ನು ರಿಲೀಸ್ ಮಾಡಿದೆ. ಡಂಕಿ ಸಿನಿಮಾದ ಲುಟ್ ಪುಟ್ ಗಯಾ ಹಾಡು ಮೋಡಿ ಮಾಡ್ತಿದೆ. ಶಾರುಖ್ ಹಾಗೂ ತಾಪ್ಸಿ ನಡುವಿನ ಪ್ರೇಮಗೀತೆ ಹಿಟ್ ಲೀಸ್ಟ್ […]
ಶೂಟಿಂಗ್ ಅಖಾಡದಲ್ಲಿ ‘ಅಧಿಪತ್ರ’…..ಖಾಕಿ ಖದರ್ ನಲ್ಲಿ ರೂಪೇಶ್ ಶೆಟ್ಟಿ
ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಬಂಡೆ ಮಹಾಕಾಳಿ ಆಶೀರ್ವಾದ ಪಡೆದು ಶೂಟಿಂಗ್ ಅಖಾಡಕ್ಕೆ ಧುಮುಕ್ಕಿದ್ದ ಚಿತ್ರತಂಡ ಕುಂದಾಪುರದ ಕೆರಾಡಿ ಭಾಗದಲ್ಲಿ ಚಿತ್ರೀಕರಣ ನಡೆಸ್ತಿದೆ. ಈಗಾಗಲೇ 10 ದಿನ ಶೂಟಿಂಗ್ ಕಂಪ್ಲೀಟ್ ಮಾಡಿದ್ದು, ನಾಯಕ ರೂಪೇಶ್ ಖಾಕಿ ಖದರ್ ನಲ್ಲಿ ಕಾಣಿಸಿಕೊಂಡಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿವೆ. ತುಳು ಸಿನಿಮಾರಂಗದಲ್ಲಿ ರೂಪೇಶ್ ಶೆಟ್ಟಿಗೆ ಸಾಕಷ್ಟು ಅನುಭವ ಇದೆ. ಸಿನಿಮಾದ ನಾನಾ ವಿಭಾಗಳಲ್ಲಿ ಕೆಲಸ ಮಾಡಿದ್ದಾರೆ. ನಟನಾಗಿ ಮತ್ತು […]
ಗುಂಡ ಏನೇನು ಮಾಡ್ತಾನೋ?
ನಾನು ಮತ್ತು ಗುಂಡ ೨ ಟೈಟಲ್ ಟೀಸರ್ ದ್ರುವಸರ್ಜಾ ಬಿಡುಗಡೆ ನಾಯಿ ಹಾಗೂ ಅದರ ಮಾಲೀಕ ಗೋವಿಂದೇಗೌಡನ ನಡುವಿನ ಅವಿನಾಭಾವ ಸಂಬಂಧದ ಕಥೆಯನ್ನು ಹೇಳುವ ‘ನಾನು ಮತ್ತು ಗುಂಡ’ ಚಿತ್ರವು ಎರಡು ವರ್ಷಗಳ ಹಿಂದೆ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡಿತ್ತು. ಶಿವರಾಜ್ ಕೆ.ಆರ್. ಪೇಟೆ ನಾಯಕನಾಗಿ ಅಭಿನಯಿಸಿದ್ದ ಆ ಚಿತ್ರಕ್ಕೆ ರಘುಹಾಸನ್ ಆಕ್ಷನ್ ಕಟ್ ಹೇಳಿದ್ದರು. ಈಗ ಅದರ ಮುಂದುವರೆದ ಭಾಗವಾಗಿ “ನಾನು ಮತ್ತು ಗುಂಡ -2” ತಯಾರಾಗುತ್ತಿದ್ದು, ಚಿತ್ರದಲ್ಲಿ ಬಹುತೇಕ ಹಳೆಯ ತಂಡವೇ ಕೆಲಸ ಮಾಡುತ್ತಿದೆ. […]
ಬ್ರಹ್ಮರಾಕ್ಷಸ ಟೀಸರ್ ಬಿಡುಗಡೆ…
ಸ್ಯಾಂಡಲ್ ವುಡ್ ಈಗೀಗ ಹೊಸಬರ ಕಾರಣದಿಂದಲೇ ಹೆಚ್ಚು ಸುದ್ದಿಯಾಗುತ್ತಿದೆ. ಹೊಸಬರ ಚಿತ್ರಗಳಲ್ಲಿ ಹೊಸತನದ ತಾಂತ್ರಿಕತೆಯ ಸ್ಪರ್ಶವಿರುತ್ತದೆ. ಅಂತಹ ಸಿನಿಮಾಗಳ ಸಾಲಿಗೆ ಸೇರಲಿರುವ ಮೊತ್ತೊಂದು ಚಿತ್ರವೇ ಬ್ರಹ್ಮರಾಕ್ಷಸ. ಒಬ್ಬ ಲೈಟ್ಮ್ಯಾನ್ ಆಗಿ ಫಿಲಂ ಇಂಡಸ್ಟ್ರಿಗೆ ಬಂದು ಹಲವಾರು ನಿರ್ದೇಶಕರ ಬಳಿ ಕೆಲಸ ಕಲಿತ ಶಂಕರ್.ವಿ. ಮೊದಲಬಾರಿಗೆ ಆ್ಯಕ್ಷನ್ಕಟ್ ಹೇಳಿರುವ ಚಿತ್ರ ಬ್ರಹ್ಮರಾಕ್ಷಸ. ಜ್ಯೋತಿ ಆರ್ಟ್ಸ್ ಮೂಲಕ ಕೆಎಂಪಿ. ಶ್ರೀನಿವಾಸ್ ನಿರ್ಮಿಸಿರುವ ಈ ಚಿತ್ರದಲ್ಲಿ ಅಂಕುಶ್ ಏಕಲವ್ಯ, ಪಲ್ಲವಿಗೌಡ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ಮತೊಂದು ವಿಶಿಷ್ಠ ಪಾತ್ರದಲ್ಲಿ ವೈಜನಾಥ್ ಬಿರಾದಾರ್ […]
ಪೃಥ್ವಿ ಅಂಬಾರ್ ನಟನೆಯ ‘ಜೂನಿ’ ಸಿನಿಮಾದ ಫಸ್ಟ್ ಲುಕ್ ರಿಲೀಸ್
ದಿಯಾ ಸಿನಿಮಾ ಮೂಲಕ ಕನ್ನಡಿಗರ ಹೃದಯ ಕದ್ದ ಕರಾವಳಿ ಕುವರ ಪೃಥ್ವಿ ಅಂಬಾರ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡದ ಜೊತೆಗೆ ತಮಿಳಿಗೂ ಪಾದರ್ಪಣೆ ಮಾಡಿರುವ ಪೃಥ್ವಿ, ಹೊಸ ಸಿನಿಮಾಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಯುವ ಪ್ರತಿಭೆ ವೈಭವ್ ಮಹಾದೇವ್ ಸಾರಥ್ಯ ‘ಜೂನಿ’ ಸಿನಿಮಾದಲ್ಲಿ ಪೃಥ್ವಿ ನಾಯಕನಾಗಿ ನಟಿಸುತ್ತಿದ್ದಾರೆ. ‘ಜನ್ನಿ’ ಎಂಬ ಕಿರುಚಿತ್ರ ನಿರ್ದೇಶಿಸಿದ್ದ ವೈಭವ್ ಮಹಾದೇವ್ ಜೂನಿ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಪ್ರಾಗ್ ಫಿಲ್ಮ್ ಸ್ಕೂಲ್ ನಲ್ಲಿ ನಿರ್ದೇಶಕರ ಕೋರ್ಸ್ ಮುಗಿಸಿರುವ […]