ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, “ಕರ್ವ” ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಗೆದ್ದಿರುವ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಛೂ ಮಂತರ್” ಚಿತ್ರ ಇದೇ ಮೇ 10 ರಂದು ರಾಜ್ಯಾದ್ಯಂತ. ಬಿಡುಗಡೆಯಾಗುತ್ತಿದೆ. ಈಗಾಗಲೇ ಟೀಸರ್ ಹಾಗೂ ಪೋಸ್ಟರ್ ಗಳ ಮೂಲಕ “ಛೂ ಮಂತರ್” ಚಿತ್ರ ಜನರ ಮನ ತಲುಪಿದೆ. ಏಪ್ರಿಲ್ 19(ಶುಕ್ರವಾರ) ರಂದು ಟ್ರೇಲರ್ ಬರಲಿದ್ದು, ಚಿತ್ರ ಮೇ 10 […]
ಹಾರರ್ ಹಿನ್ನೆಲೆಯಲ್ಲಿ ನಡೆಯೋ ಕಥಾಹಂದರ ಒಳಗೊಂಡ ಚಿತ್ರ ಅಲೈಕ್ಯಾ. 21-21-21 ಎಂಬ ಅಡಿಬರಹ ಹೊಂದಿರುವ ಈ ಚಿತ್ರದ ಟ್ರೈಲರ್ ಹಾಡುಗಳು ಬಿಡುಗಡೆ ಸಮಾರಂಭ ರೇಣುಕಾಂಬ ಸ್ಟಯಡಿಯೋದಲ್ಲಿ ನೆರವೇರಿತು. ಹಿರಿಯನಟ ಸುಚೇಂದ್ರಪ್ರಸಾದ್ ಹಾಗೂ ನಟಿ ಸಂಜನಾ ನಾಯ್ಡು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ತಂಡಕ್ಕೆ ಶುಭ ಹಾರೈಸಿದರು.ಹಿತೇಶ್ ಮೂವೀಸ್ ಲಾಂಛನದಲ್ಲಿ ಎಂ.ಭೂಪತಿ ಅವರು ನಿರ್ಮಿಸಿರುವ, ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಅಲೈಕ್ಯಾ ಚಿತ್ರದ ಎಲ್ಲಾ ಕೆಲಸಗಳು ಮುಗಿದಿದ್ದು, ಚಿತ್ರವೀಗ ಬಿಡುಗಡೆಯ ಹಂತ ತಲುಪಿದೆ. ಈ ಹಿಂದೆ ಮಳೆಬಿಲ್ಲು ಚಿತ್ರದ […]
ಬಹು ಬೇಡಿಕೆಯ ಮತ್ತು ಬಹುನಿರೀಕ್ಷಿತ ಕನ್ನಡ ಚಿತ್ರ “ಉತ್ತರಕಾಂಡ” ಚಿತ್ರೀಕರಣವನ್ನು ಇಂದು ಆರಂಭಿಸಿದೆ. 15 ದಿನಗಳ ಪ್ರಥಮ schedule ವಿಜಯಪುರದಲ್ಲಿ ಚಿತ್ರೀಕರಣಗೊಳ್ಳಲಿದೆ. “ಉತ್ತರಕಾಂಡ”ದ ಮುಹೂರ್ತ 2022ರಲ್ಲಿ ಆಗಿದ್ದು, ಚಿತ್ರಕಥೆಯು ಬಯಲುಸೀಮೆಯ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದರಿಂದ, ಹಾಗೂ ಚಿತ್ರವು ಉತ್ತರಕರ್ನಾಟಕದ ಆಡುಭಾಷೆಯನ್ನು ಹೊಂದಿರುವುದರಿಂದ ಚಿತ್ರಕ್ಕೆ ನಿಖರವಾದ ಸಂಶೋಧನೆ ಮತ್ತು ಪ್ಲಾನಿಂಗ್ ಅಗತ್ಯವಿತ್ತು. ಈ ಕಾರಣದಿಂದ ಮತ್ತು ಕೆಲವು ಅನಿವಾರ್ಯ ಸಂದರ್ಭಗಳಿಂದಾಗಿ ಚಿತ್ರೀಕರಣ ವಿಳಂಬಗೊಂಡಿತು. ಆದರೇ, ಇದೀಗ ಸರ್ವ ಸಿದ್ಧತೆಗಳೊಂದಿಗೆ ಇಂದು ಚಿತ್ರೀಕರಣ ಆರಂಭಗೊಂಡಿದ್ದು, ಚಿತ್ರ ತಂಡದವರು ಉತ್ಸುಕರಾಗಿದ್ದಾರೆ. […]
ಮಾರ್ಚ್ 8ರಂದು ತೆರೆಕಂಡಿರುವ ವಿಶ್ವಕ್ ಸೇನ್ ನಟನೆಯ ತೆಲುಗು ಚಿತ್ರ “ಗಾಮಿ’ ಓಟಿಟಿಯತ್ತ ಹೆಜ್ಜೆ ಹಾಕಿದ್ದು, ಏ.12ರಂದು ಜೀ5ನಲ್ಲಿ ಸ್ಟ್ರೀಮಿಂಗ್ ಆಗಿದೆ. ಗಾಮಿ ಸಿನಿಮಾಗೆ ವಿದ್ಯಾರ್ಧ ಕಾಗಿತಾ ನಿರ್ದೇಶನವಿದೆ. ವಿದ್ಯಾರ್ಧ ಕಾಗಿತಾ ಇವರ ಚೊಚ್ಚಲ ಪ್ರಯತ್ನ. ವಿಶ್ವಕ್ ಸೇನ್ಗೆ ನಾಯಕಿಯಾಗಿ ಚಾಂದಿನಿ ಚೌದರಿ ನಟಿಸಿದ್ದಾರೆ. ಎಂಜಿ ಅಭಿನಯ, ಮೊಹಮ್ಮದ್ ಸಮದ್, ಹರಿಕಾ ಪೇಡಾಡ, ಶಾಂತಿ ರಾವ್, ಮಯಾಂಕ್ ಪರಾಕ್ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ಸಿನಿಮಾಗೆ ವಿಶ್ವನಾಥ ರೆಡ್ಡಿ ಚೆಲುಮಲ್ಲ ಛಾಯಾಗ್ರಹಣ, ರಾಘವೇಂದ್ರ ತಿರುನ್ ಸಂಕಲನ, ನರೇಶ್ ಕುಮಾರನ್ ಸಂಗೀತ […]
ರೂಪಾ ರಾವ್ ನಿರ್ಮಾಣ ಮತ್ತು ಸಹದೇವ್ ಕೆಲವಡಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ `ಕೆಂಡ’. ಆರಂಭದಿಂದ ಇಲ್ಲಿಯವರೆಗೂ ಒಂದಷ್ಟು ಕುತೂಹಲಕರ ವಿಚಾರಗಳೊಂದಿಗೇ ಈ ಸಿನಿಮಾ ಪ್ರೇಕ್ಷಕರನ್ನು ತಲುಪುತ್ತಾ ಬಂದಿದೆ. ಇದೀಗ ಸಂಪೂರ್ಣವಾಗಿ ಚಿತರ್ರೀಕರಣ ಮುಗಿಸಿಕೊಂಡು ಬಿಡುಗಡೆಗೆ ಸಜ್ಜುಗೊಂಡಿರುವ `ಕೆಂಡ’ದ ಕಡೆಯಿಂದೀಗ ಸಮ್ಮೋಹಕ ಹಾಡುಗಳ ಹಂಗಾಮಾ ಶುರುವಾಗಿದೆ. ಈಚೆಗಷ್ಟೇ ಚೆಂದದ್ದೊಂದು ಹಾಡು ಬಿಡುಗಡೆಗೊಂಡಿತ್ತು. ಇದೀಗ ಮತ್ತೊಂದು ಲಿರಿಕಲ್ ವೀಡಿಯೋ ಸಾಂಗ್ ಅನಾವರಣಗೊಂಡಿದೆ. ದಾರಿಯಲ್ಲಿ ಧೂಳು… ದೂರ ಎಲ್ಲೋ ಊರು… ಅಂತ ತೆರೆದುಕೊಳ್ಳೋ ಈ ಹಾಡು ನವಿರು ಸಾಹಿತ್ಯ, ಅದಕ್ಕೊಪ್ಪುವ […]
ಕರಾವಳಿ ಸೀಮೆಯಿಂದ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಅನೇಕರು ಆಗಮಿಸಿದ್ದಾರೆ. ಒಂದಷ್ಟು ಗೆಲುವನ್ನೂ ದಾಖಲಿಸಿದ್ದಾರೆ. ಇದೀಗ `ಕಲ್ಜಿಗ’ ಎಂಬ ಚಿತ್ರದ ಮೂಲಕ ಮತ್ತೊಂದು ತಂಡ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಶೀರ್ಷಿಕೆಯಲ್ಲಿಯೇ ಕೌತುಕ ಬೆರೆತ ಸೆಳೆತವೊಂದನ್ನು ಬಚ್ಚಿಟ್ಟುಕೊಂಡಂತಿರುವ ಈ ಚಿತ್ರದ ಟೈಟಲ್ ಹಾಗೂ ಪೋಸ್ಟರ್ ಇದೀಗ ಅನಾವಣಗೊಂಡಿದೆ. ಚಿತ್ರತಂಡ, ನಾನಾ ಕ್ಷೇತ್ರದ ಗಣ್ಯರು ಮತ್ತು ನಾದಬ್ರಹ್ಮ ಹಂಸಲೇಖ ಸಮ್ಮುಖದಲ್ಲಿ ಕಲ್ಜಿಗದ ಟೈಟಲ್ ಹಾಗೂ ಪೋಸ್ಟರ್ ಬಿಡುಗಡೆಗೊಂಡಿದೆ. ಹಿಮಾನಿ ಫಿಲಂಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ ಕಲ್ಜಿಗ ಚಿತ್ರವನ್ನು ಸುಮನ್ ಸುವರ್ಣ ನಿರ್ದೇಶನ […]
ಸವ್ಯಸಾಚಿ ಸಿನಿಮಾದ ಮುಖಾಂತರ ಬಣ್ಣದ ಬದುಕಿನಲ್ಲಿ ʻಓಂʼಕಾರ ಹಾಕಿದವರು ನಟಿ ಪ್ರೇಮ. ಸರಿಸುಮಾರು ಒಂದೂವರೆ ದಶಕಗಳಿಗೂ ಹೆಚ್ಚು ಕಾಲ ಕನ್ನಡ ಚಿತ್ರರಂಗವನ್ನು ಅನಾಯಾಸವಾಗಿ ಆಳುತ್ತಾ ತೆಲುಗಲ್ಲೂ ಮೆರೆದ ನಾಯಕನಟಿ ಈಕೆ. ಒಂದು ಕಾಲದಲ್ಲಿ ಉಪೇಂದ್ರ ಹೆಸರಿನ ಜೊತೆಗೆ ಪ್ರೇಮಾ ನಾಮಧೇಯ ನಾನಾ ರೀತಿಯಲ್ಲಿ ತಳುಕು ಹಾಕಿಕೊಂಡಿತ್ತು. ಗಾಸಿಪ್ಪುಗಳಿಗೆಲ್ಲಾ ಉಫ್ ಅಂದು ಮತ್ತಷ್ಟು ಬೆಳೆಯುತ್ತಲೇ ಹೋದಳು ಲಂಬೂ ಹುಡುಗಿ. ಹೀಗೆ ವೃತ್ತಿ ಬದುಕಿನಲ್ಲಿ ಉತ್ತುಂಗಕ್ಕೇರಿದ ಪ್ರೇಮಾ, ಖಾಸಗೀ ಬದುಕನ್ನು ಬಹುಪಾಲು ಸಂಕಟದಲ್ಲೇ ಕಳೆದವರು. ಚಿತ್ರರಂಗದಲ್ಲಿ ಕೈತುಂಬಾ ಅವಕಾಶಗಳಿದ್ದ ಹೊತ್ತಲ್ಲೇ […]
ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಹ ಕೆ.ಜಿ.ಎಫ್, ಕಾಂತಾರ, ರಾಜಕುಮಾರ ದಂತಹ ಯಶಸ್ವಿ ಚಿತ್ರಗಳ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಲಾಂಛದಡಿಯಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಮೊದಲ ಚಿತ್ರ “ಯುವ” ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಮೂಲಕ ಹೊಂಬಾಳೆ ಫಿಲಂಸ್ ನ ಗೆಲುವಿನ ಓಟಕ್ಕೆ ಮತ್ತೊಂದು ಚಿತ್ರ ಸೇರ್ಪಡೆಯಾಗಿದೆ. ಈ ಯಶಸ್ಸಿನ ಸಂಭ್ರಮವನ್ನು ಸಂಭ್ರಮಿಸಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ರಾಜ್ಯದ ಜನತೆ “ಯುವ” ಚಿತ್ರವನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. […]
ಕಮಲ್ ಹಾಸನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಇಂಡಿಯನ್ -2. ಜೂನ್ ನಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ. ಹೀಗಾಗಿ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿದೆ. ಸದ್ಯ ಇಂಡಿಯನ್ 2 ಶೂಟಿಂಗ್ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಾರಂಭವಾಗಿವೆ. ಇಂಡಿಯನ್ ಸೀಕ್ವೆಲ್ ಗೆ ಎಸ್ ಶಂಕರ್ ಆಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರವು 1996 ರ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗವಾಗಿದೆ. ಚಿತ್ರವನ್ನು ಥಿಯೇಟರ್ಗಳಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ […]