ದಿ. ಡಿ.ವಿ. ಸುಧೀಂದ್ರ ಅವರು ಸ್ಥಾಪಿಸಿ ಬೆಳೆಸಿದ, ಕನ್ನಡ ಸಿನಿಮಾರಂಗದ ಹೆಸರಾಂತ ಪ್ರಚಾರ ಸಂಸ್ಥೆ ಶ್ರೀ ರಾಘವೇಂದ್ರ ಚಿತ್ರವಾಣಿ. ಸದ್ಯ ಈ ಸಂಸ್ಥೆಯನ್ನು ಸುಧೀಂದ್ರ ವೆಂಕಟೇಶ್ ಯಶಸ್ವಿಯಾಗಿ ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಇವರ ಮಗ ಪವನ್ ವೆಂಕಟೇಶ್. ಸಿನಿಮಾ ಪ್ರಚಾರಕರ್ತ ಡಿವಿ. ಸುಧೀಂದ್ರ ಅವರ ಬದುಕಿನ ಹಾದಿಯನ್ನು ತೆರೆದಿಡುವ ’ಸುಧೀಂದ್ರ ಸಿನಿ ಪಯಣ’ಎನ್ನುವ ಸಾಕ್ಷ್ಯ ಚಿತ್ರವನ್ನು ನಿರ್ದೇಶಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದವರು ಪವನ್. ನಂತರ ‘ಕರೋನಾ – ಕರಾಳ ರೋಗ ನಾಶʼ ಎಂಬ ಕಿರುಚಿತ್ರವೊಂದನ್ನು ರೂಪಿಸಿ ಕೋವಿಡ್-19ನ ವಿವಿಧ ಮಜಲುಗಳನ್ನು ಒಂದೊಳ್ಳೆ ಸಂದೇಶದ ಜೊತೆ ಅನಾವರಣಗೊಳಿದ್ದರು. ಈಗ ʻಶ್ರೀ ರಾಮಜನ್ಮ ಭೂಮಿʼಯ ವಿಚಾರದ ಹಿನ್ನೆಲೆಯನ್ನು ತಿಳಿಸಿಕೊಡುವ ʻಅಯೋಧ್ಯಾʼ ಎನ್ನುವ ವಿಡಿಯೋ ರೂಪಿಸಿದ್ದಾರೆ.
ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಪವನ್ ಕ್ರಿಯಾಶೀಲ ಯುವಕ. ಚಿಕ್ಕಂದಿನಿಂದಲೂ ಸಿನಿಮಾ ವಾತಾವರಣದಲ್ಲಿಯೇ ಬೆಳೆದಿರುವುದು ಮತ್ತು ತಾನೊಬ್ಬ ಸಿನಿಮಾ ನಿರ್ದೇಶಕನಾಗಬೇಕೆಂಬ ಆಸಕ್ತಿ ಹೊಂದಿರುವ ಕಾರಣಕ್ಕೆ ಪವನ್ ಸಣ್ಣಸಣ್ಣ ಪ್ರಯತ್ನ ಮಾಡುತ್ತಾ ಬರುತ್ತಿದ್ದಾರೆ. ತನ್ನ ಸಹೋದರಿ ಚಂದನಾ ವೆಂಕಟೇಶ್, ಸ್ನೇಹಿತರಾದ ಮನೋಜ್ ಹೆಚ್.ಎನ್., ಮಲ್ಲೇಶ್, ರಕ್ಷಿತ್ ರನ್ನು ಒಳಗೊಂಡ ತಂಡವನ್ನು ಕಟ್ಟಿಕೊಂಡು ಪವನ್ ಒಂದಾದ ಮೇಲೊಂದು ಪ್ರಯತ್ನ ಮುಂದುವರೆಸಿದ್ದಾರೆ.
ಸಾಕ್ಷ್ಯ ಚಿತ್ರ, ಕಿರುಚಿತ್ರದ ನಂತರ ಅಯೋಧ್ಯೆಯ ಕುರಿತಾಗಿ ಪವನ್ ರೂಪಿಸಿರುವ ಮೂರು ನಿಮಿಷಗಳ ವಿಡಿಯೋದಲ್ಲಿ, ಶ್ರೀ ರಾಮಜನ್ಮ ಭೂಮಿಯ ಹಿನ್ನೆಲೆ ಮತ್ತು ಮಹತ್ವವನ್ನು ತಿಳಿಸಲಾಗಿದೆ. ಪತ್ರಿಕಾವರದಿಯೊಂದನ್ನು ಆಧಾರವಾಗಿಟ್ಟುಕೊಂಡು ರೂಪಿಸಿರುವ ಈ ವಿಡಿಯೋದಲ್ಲಿ ಗ್ರಾಫಿಕ್ಸ್, ವಿ ಎಫ್ ಎಕ್ಸ್ ಕಲೆಯನ್ನು ಪ್ರಧಾನವಾಗಿ ಬಳಸಲಾಗಿದೆ. ಹಿನ್ನೆಲೆ ಧ್ವನಿಯ ಮೂಲಕ ಪುಣ್ಯಭೂಮಿಯ ಪರಿಚಯ ಮಾಡಿಕೊಡಲಾಗಿದೆ. ಪವನ್ ವೆಂಕಟೇಶ್ ಸಿನಿಮಾಗೆ ಬೇಕಿರುವ ಒಂದೊಂದೇ ವಿಭಾಗಗಳ ಬಗ್ಗೆ ತಿಳಿದುಕೊಳ್ಳುತ್ತಲೇ, ಅದನ್ನು ತನ್ನ ಕ್ರಿಯಾಶೀಲತೆಗೆ ಒಗ್ಗಿಸಿಕೊಳ್ಳುತ್ತಿದ್ದಾರೆ. ಈಗ ರೂಪಿಸಿರುವ ವಿಡಿಯೋವನ್ನು ತಮ್ಮದೇ ಆದ ಪವನ್ ಎಂಟರ್ಟೈನ್ಮೆಂಟ್ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಿದ್ದಾರೆ.
ARUN KUMAR G
ARUN KUMAR G Senior Film Journalist GAURI LANKESH PATRIKE, KARMAVEERA and others

ಇದು ಪೊಲೀಸ್‌ ಅಧಿಕಾರಿ ಎಸ್.ಕೆ. ಉಮೇಶ್‌ ಕಂಡ ಕತೆ…

Previous article

ಶರಯೂ ರಾಕಿಂಗ್!

Next article

You may also like

Comments

Leave a reply

Your email address will not be published. Required fields are marked *