ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿರುವ ಈ‌ ಚಿತ್ರಕ್ಕೆ ಸುಮಂತ್ ಕ್ರಾಂತಿ ನಿರ್ದೇಶನ.

ವಿಭಿನ್ನ ಕಥಾಹಂದರ ಹೊಂದಿರುವ  “ಬರ್ಕ್ಲಿ” ಚಿತ್ರದ ಲಿರಿಕಲ್ ಸಾಂಗ್ ಗೌರಿ – ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಬಹದ್ದೂರ್ ಚೇತನ್ ಅವರು ಬರೆದಿರುವ ಈ ಹಾಡನ್ನು ಸಂಜಿತ್ ಹೆಗ್ಡೆ ಸುಮಧುರವಾಗಿ ಹಾಡಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಸಂತೋಷ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆನೇಕಲ್ ಬಾಲರಾಜ್ ಅವರು ನಿರ್ಮಿಸಿರುವ ಬರ್ಕ್ಲಿ ಚಿತ್ರದ ಪ್ರಥಮಪ್ರತಿ‌ ಸದ್ಯದಲ್ಲೇ ಸಿದ್ದವಾಗಲಿದೆ.

ಕರಿಯ, ಗಣಪ, ಕರಿಯ ೨  ಚಿತ್ರಗಳನ್ನು ನಿರ್ಮಿಸಿರುವ ಆನೇಕಲ್ ಬಾಲರಾಜ್ ಅವರ ನಿರ್ಮಾಣದ ಮತ್ತೊಂದು ಅದ್ದೂರಿ ಚಿತ್ರ “ಬರ್ಕ್ಲಿ‌”. ಉತ್ತಮ‌ ಮನೋರಂಜನೆಯ ಈ ಚಿತ್ರಕ್ಕೆ ಸುಮಂತ್ ಕ್ರಾಂತಿ  ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಗಣಪ, ಕರಿಯ ೨ ಚಿತ್ರಗಳಲ್ಲಿ ನಟಿಸಿ ಖ್ಯಾತಿಗಳಿಸಿರುವ ಸಂತೋಷ್ ಬಾಲರಾಜ್ ಈ ಚಿತ್ರದ ನಾಯಕರಾಗಿ ಅಭಿನಯಿಸಿದ್ದಾರೆ.

ಬಾಲ್ಯದಲ್ಲಿ ಕೇಂದ್ರ ಸರ್ಕಾರದ ನೋ ಸ್ಮೋಕಿಂಗ್ ಜಾಹೀರಾತಿನ ಮೂಲಕ ಬಾಲನಟಿಯಾಗಿ ಖ್ಯಾತರಾಗಿದ್ದ, ಸಿಮ್ರಾನ್ ನಾಟೇಕರ್ ಈ ಚಿತ್ರದ ನಾಯಕಿ. ಹುಭಾಷ ನಟ ಚರಣರಾಜ್, ಖ್ಯಾತ ನಟಿ ಶೃತಿ, ಬಲ ರಾಜವಾಡಿ , ಬುಲೆಟ್ ಪ್ರಕಾಶ್ ಮುಂತಾದವರ ತಾರಾಬಳಗ ಈ ಚಿತ್ರದಲ್ಲಿದೆ.

ARUN KUMAR G
ARUN KUMAR G Senior Film Journalist GAURI LANKESH PATRIKE, KARMAVEERA and others

ಪ್ರತಿ ಕ್ಷಣ ಏನಾದ್ರೂ ಹೇಳ್ತಾನೇ ಇರತ್ತೆ…

Previous article

ಇದು ರೆಡ್ ಅಂಡ್‌ ವೈಟ್ ಸಿನಿಮಾ!

Next article

You may also like

Comments

Leave a reply

Your email address will not be published. Required fields are marked *