ದಕ್ಷಿಣ ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳಲ್ಲಿ ಒಂದು ಡ್ರೀಮ್ ವಾರಿಯರ್ ಪಿಕ್ಚರ್ಸ್. ಈ ಸಂಸ್ಥೆಯಡಿ ಧೀರನ್, ಅರುವಿ, ಎನ್ಜಿಕೆ, ರಾಕ್ಷಸಿ, ಖೈದಿ, ಭೋಲಾ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳು ನಿರ್ಮಾಣಗೊಂಡಿವೆ. ಇದೀಗ ಡ್ರೀಮ್ ವಾರಿಯರ್ ಪಿಕ್ಚರ್ಸ್ ತಮಿಳಿನ ಸೂಪರ್ ಸ್ಟಾರ್ ಸೂರ್ಯ ಜೊತೆ ಕೈ ಜೋಡಿಸಿದೆ. ಈ ಸಂಸ್ಥೆಯಡಿ ಸೂರ್ಯ ಅವರ 45ನೇ ಚಿತ್ರ ನಿರ್ಮಾಣವಾಗಲಿದೆ. ಮೂಕುತಿ ಅಮ್ಮನ್ ಮತ್ತು ವೀಟ್ಲ ವಿಶೇಷಂನಂತಹ ಸಾಮಾಜಿಕ ಜವಾಬ್ದಾರಿಯುತ ಚಿತ್ರಗಳನ್ನು ನಿರ್ದೇಶಿಸಲು ಹೆಸರುವಾಸಿಯಾಗಿರುವ ಆರ್ಜೆ ಬಾಲಾಜಿ ಸೂರ್ಯ […]
ದೇವರಾಜ್ ಎರಡನೇ ಪುತ್ರ ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಪೈಕಿ ಇತ್ತೀಚೆಗೆ ಅನೌನ್ಸ್ ಆದ, ಪ್ರಣಂ ನಟನೆಯ ‘s/o ಮುತ್ತಣ್ಣ’ ಸಿನಿಮಾ ನಿರೀಕ್ಷೆ ಹುಟ್ಟುಹಾಕಿದೆ. ಪ್ರಣಂ ಈ ಸಿನಿಮಾ ಮೂಲಕ ಹಿಟ್ ಕೊಡ್ತಾರೆ ಅನ್ನೋ ಭರವಸೆ ಕೂಡ ಹೆಚ್ಚಾಗಿದೆ. ಇದೇ ಸಮಯದಲ್ಲಿ ‘s/o ಮುತ್ತಣ್ಣ’ ಆಡಿಯೋ ದಾಖಲೆ ಬೆಲೆಗೆ A2 ಸಂಸ್ಥೆಗೆ ಮಾರಾಟವಾಗಿದ್ದು, ಸಿನಿಮಾದ ಮೇಲಿರೋ ನಿರೀಕ್ಷೆ ದುಪ್ಪಟ್ಟಾಗಿದೆ. ‘s/o ಮುತ್ತಣ್ಣ’ ಸಿನಿಮಾ ಸೆಟ್ಟೇರಿದಾಗಿನಿಂದಲೂ ಎಲ್ಲರ ಗಮನ ಸೆಳೀತಿದೆ. […]
ಕನ್ನಡ ಚಿತ್ರರಂಗದ ದಂತಕಥೆ ಕಾಶಿನಾಥ್ ಸುಪುತ್ರ ಅಭಿಮನ್ಯು ಕಾಶಿನಾಥ್ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಎಲ್ಲಿಗೆ ಪಯಣ ಯಾವುದೋ ದಾರಿ ಚಿತ್ರ ಬಿಡುಗಡೆಗೆ ಎದುರು ನೋಡುತ್ತಿರುವ ಅಭಿಮನ್ಯು ಈಗ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಮುಹೂರ್ತ ಸಮಾರಂಭ ನಿನ್ನೆ ನೆರವೇರಿದೆ. ಬೆಂಗಳೂರಿನ ಸಹಕಾರ ನಗರದ ಛೇರ್ಮನ್ ಕ್ಲಬ್ ನಲ್ಲಿ ನಡೆದ ಮುಹೂರ್ತಕ್ಕೆ ವಿಶೇಷ ಅತಿಥಿಯಾಗಿ ಕೋಮಲ್ ಕುಮಾರ್ ಆಗಮಿಸಿದ್ದರು. ಅಭಿಮನ್ಯು ಹೊಸ ಚಿತ್ರಕ್ಕೆ ಕೋಮಲ್ ಕ್ಲ್ಯಾಪ್ ಮಾಡಿ ಶುಭ ಹಾರೈಸಿದರು. ಕೋಮಲ್ ಕುಮಾರ್ ಮಾತನಾಡಿ, ನಾನು […]
ಹನುಮಾನ್ ಸಿನಿಮಾ ನಿರ್ದೇಶಿಸಿ ಸೈ ಎನಿಸಿಕೊಂಡಿರುವ ಪ್ರಶಾಂತ್ ವರ್ಮಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಹನುಮಾನ್ 2 ಜೊತೆಗೆ ಬಾಲಯ್ಯನ ಸುಪುತ್ರ ಮೋಕ್ಷಜ್ಞರನ್ನು ಚಿತ್ರರಂಗಕ್ಕೆ ಪರಿಚಯಿಸುವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಇದರ ಬೆನ್ನಲ್ಲೇ ಪ್ರಶಾಂತ್ ಭಾರತದ ಮೊದಲ ಮಹಿಳಾ ಸೂಪರ್ ಹೀರೋ ಮಹಾಕಾಳಿ ಕಥೆಯನ್ನು ಹೇಳೋದಿಕ್ಕೆ ಹೊರಟಿದ್ದಾರೆ. ಪ್ರಶಾಂತ್ ವರ್ಮಾ ತಮ್ಮದೇ ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ನಡಿ ಮೂರನೇ ಚಿತ್ರ ಘೋಷಣೆ ಮಾಡಿದ್ದಾರೆ. ಮಹಾಕಾಳಿ ಸಿನಿಮಾಗೆ ಪ್ರಶಾಂತ್ ಕಥೆ ಬರೆದಿದ್ದು, ಆದ್ರೆ ಮಹಿಳಾ ನಿರ್ದೇಶಕಿ ಈ ಚಿತ್ರಕ್ಕೆ […]
ಎಸ್ಜಿಎಸ್ ಕ್ರಿಯೇಶನ್ಸ್ ಅಡಿಯಲ್ಲಿ, ಎಸ್.ಜಿ.ಸತೀಶ್ ನಿರ್ಮಾಣ, ಗುರುಮೂರ್ತಿ ರಚನೆ ಮತ್ತು ನಿರ್ದೇಶನದ ’ಉಗ್ರಾವತಾರ’ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಎಂಎಂಬಿ ಲೆಗೆಸಿದಲ್ಲಿ ಅದ್ದೂರಿಯಾಗಿ ನಡೆಯಿತು. ರಿಯಲ್ ಸ್ಟಾರ್ ಉಪೇಂದ್ರ ತುಣುಕುಗಳನ್ನು ನೋಡಿ ಮೆಚ್ಚುಗೆ ವ್ಯಕ್ತ ಪಡಿಸಿದರು. ನಂತರ ಮಾತನಾಡಿ ನಿರ್ದೇಶಕರ ಶ್ರಮ ಇದರಲ್ಲಿ ಕಾಣಿಸುತ್ತದೆ. ಆದರೂ ಅವರು ದುಗಡದಿಂದ ಇದ್ದಾರೆ. ಮೊದಲಬಾರಿ ನನಗೂ ಅದೇ ಆಗಿತ್ತು. ಭವಿಷ್ಯದಲ್ಲಿ ನೀವು ಸ್ಟಾರ್ ನಿರ್ದೇಶಕರಾಗುತ್ತಿರಾ. ಮನೆಯಲ್ಲಿ ಉಗ್ರಾವತಾರ ಅವತಾರವನ್ನು ನೋಡಿದ್ದೇನೆ. ಮುಂದೆ ನೀವುಗಳು ನೋಡುತ್ತಿರಾ. ಆದರೆ ಪೋಲೀಸ್ರು ಗ್ಲಾಮರಸ್ ಆಗಿ […]
ಆರಂಭದಿಂದಲೂ ರೋಮಾಂಚಕ ವಾತಾವರಣ ಸೃಷ್ಟಿಸಿಕೊಂಡು ಬಂದಿರುವ ಸಿನಿಮಾ ಮರ್ಫಿ. ಮನಮೋಹಕ ಹಾಡುಗಳು ಮೂಲಕ ಪ್ರೇಕ್ಷಕರಿಗೆ ಆಮಂತ್ರಣ ಕೊಟ್ಟಿರುವ ಚಿತ್ರತಂಡವೀಗ ಟ್ರೇಲರ್ ಮೂಲಕ ನಿರೀಕ್ಷೆ ಹೆಚ್ಚು ಮಾಡಿದೆ. ಬೆಂಗಳೂರಿನ ಒರಿಯನ್ ಮಾಲ್ ನಲ್ಲಿ ಮರ್ಫಿ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಡೀ ಚಿತ್ರತಂಡ ಕಾರ್ಯಕ್ರಮದಲ್ಲಿ ಭಾಗಿಯಾಗಿತ್ತು. ಮರ್ಫಿ ಟ್ರೇಲರ್ ಲಾಂಚ್ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದು, ಚಿತ್ರರಂಗದ 9 ನಟಿಮಣಿಯರು. ನವರಾತ್ರಿ ಹಬ್ಬದ ಸುಂದರ್ಭದಲ್ಲಿ ಚಿತ್ರತಂಡ ಸ್ಯಾಂಡಲ್ ವುಡ್ ನ 9 ಬ್ಯೂಟಿಗಳಾದ ಪ್ರಿಯಾಂಕ ಉಪೇಂದ್ರ, ಅಮೃತಾ ಅಯ್ಯಂಗಾರ್, […]
ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿರುವ, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಯಶ್ ನಾಯಕರಾಗಿ ನಟಿಸಿದ್ದ ಜಗತ್ತೇ ಮೆಚ್ಚಿದ ಜನಪ್ರಿಯ ಚಿತ್ರ “ಕೆ.ಜಿ.ಎಫ್ ೨”. 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಈ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ ಹಾಗೂ ಈ ಚಿತ್ರದ ಸಾಹಸ ನಿರ್ದೇಶಕ ಅನ್ವರಿವು ಅವರಿಗೆ ಅತ್ಯುತ್ತಮ ಸಾಹಸ ಸಂಯೋಜನೆಗಾಗಿ ರಾಷ್ಟ್ರ ಪ್ರಶಸ್ತಿ ಬಂದಿದೆ. ದೆಹಲಿಯಲ್ಲಿ ನಡೆದ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಹೊಂಬಾಳೆ ಫಿಲಂಸ್ ನ […]
ಪವಿತ್ರಾ ಇಂಟರ್ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ಅವರು ನಿರ್ಮಿಸಿರುವ ಕನ್ನಡದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-೨ ಚಿತ್ರದ ಹಾಡಿನ ಬಿಡುಗಡೆ ಸಮಾರಂಭ ಅಂಬೇಡ್ಕರ್ ಭವನದ ಸುಂದರ ವೇದಿಕೆಯಲ್ಲಿ ನೆರವೇರಿತು. ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಅಭಿನಯದ ಈ ಹಾಡನ್ನು ಛಲವಾದಿ ಮಹಾಸಭಾದ ಜ್ಞಾನಪ್ರಕಾಶ ಸ್ವಾಮೀಜಿ ಅವರು ಬಿಡುಗಡೆ ಮಾಡಿದರು. ಜೊತೆಗೆ ಬಸನಾಗಿ ಸ್ವಾಮೀಜಿ ಕೂಡ ಉಪಸ್ಥಿತರಿದ್ದರು, ಇದೇ ವೇದಿಕೆಯಲ್ಲಿ ಉಪಸ್ಥಿತರಿದ್ದ ಛಲವಾದಿ ಮಹಾಸಭಾದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡುತ್ತ ‘ನಮ್ಮ ಸಹೋದರ ಕುಮಾರ್ […]
ಪ್ರತಿ ದಿನ ಹೊಸ ಸಿನಿಮಾ ಸೆಟ್ಟೇರೋದು ಟ್ರೇಲರ್ ಟೀಸರ್ ಬಿಡುಗಡೆ ಆಗೋದು ಹೊಸತೇನಲ್ಲ… ಆದರೆ ಬಿಡುಗಡೆ ಆದ ಕೆಲವೇ ಕೆಲವು ಸಿನಿಮಾ ಟೀಸರ್ ಗಳು ಪ್ರೇಕ್ಷಕರ ಗಮನ ಸೆಳೆಯುತ್ತವೆ..ಸದ್ಯ ಈಗ ಸಿನಿ ಪ್ರೇಮಿಗಳ ಗಮನ ಸೆಳೆದಿರುವ ಟೀಸರ್ ವೃತ್ತ . ವೃತ್ತ ಅಂದ ತಕ್ಷಣ ಒಂದು ಸರ್ಕಲ್ ನಲ್ಲಿ ನಡೆಯೋ ಸ್ಟೋರಿ ಇರಬೇಕು ಅನ್ನೋದು ಮೊದಲಿಗೆ ಅನ್ನಿಸುತ್ತೆ ಆದ್ರೆ ಈ ವೃತ್ತ ಸಿನಿಮಾದ ಕಾನ್ಸೆಪ್ಟ್ ಬೇರೆ .. ಸಿನಿಮಾ ಕಂಪ್ಲೀಟ್ ಮಾಡಿ ಟೀಸರ್ ಬಿಡುಗಡೆ ಮಾಡಿರೋ ವೃತ್ತ […]
ಕಳೆದ ವರ್ಷ ಅದ್ದೂರಿಯಾಗಿ ಆರಂಭವಾದ ಜಾಲಿವುಡ್ ಸ್ಟುಡಿಯೋ ಮತ್ತು ಅಡ್ವೆಂಚರ್ಸ್ ಯಶಸ್ವಿಯಾಗಿ ಒಂದು ವರ್ಷ ಪೂರೈಸಿ, ಎರಡನೇ ವರ್ಷಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಜಾಲಿವುಡ್ ನಲ್ಲಿ ಮೊದಲ ವಾರ್ಷಿಕೋತ್ಸವ ಮತ್ತು ದಸರಾ ಸಂಭ್ರಮ ಅದ್ದೂರಿಯಾಗಿ ನೆರವೇರಿತು. ವೇಲ್ಸ್ ಗ್ರೂಪ್ ಆಫ್ ಕಂಪನಿ ಮಾಲೀಕತ್ವದಲ್ಲಿ ಜಾಲಿವುಡ್ ಸ್ಟುಡಿಯೋ ತಮಿಳಿನಲ್ಲಿ 15 ಸಿನಿಮಾ ನಿರ್ಮಾಣ ಮಾಡಿದೆ. ಶಿಕ್ಷಣ ಮತ್ತು ಮನರಂಜನೆಯ ಕಡೆಗೆ ಹೆಚ್ಚಿನ ಆದ್ಯತೆ ನೀಡಿದೆ. ಹಲವು ಕ್ಷೇತ್ರಗಳಲ್ಲಿ ಗಮನ ಹರಿಸಿದೆ. ಡಾ. ಐಸಿರಿ ಕೆ ಗಣೇಶ್ ಅವರು ಜಾಲಿವುಡ್ […]