Category: ಟೀಸರ್ / ಟ್ರೇಲರ್ / ಆಡಿಯೋ ಲಾಂಚ್
-
ಲಾಕ್ ಡೌನ್ ಸಂಕಷ್ಟದ ಕಥೆಯನ್ನು ಪ್ರೆಸೆಂಟ್ ಮಾಡ್ತಿದ್ದಾರೆ ಪ್ರಕಾಶ್ ರಾಜ್
ಕನ್ನಡ ಸಿನಿಮಾರಂಗವೀಗ ಬೇರೆಯದ್ದೇ ದಿಕ್ಕಿಗೆ ಹೊರಳಿದೆ. ಸೋಲು ಗೆಲುವಿನಾಚೆ ಲೆಕ್ಕಚಾರ ಹಾಕಿದರೂ ಹೊಸ ಹುರುಪು, ಹೊಸ ಹರಿವು, ಹೊಸ ಆಲೋಚನೆಗಳಿಂದ ಬೇರೆಯದ್ದೇ ಆಯಾಮ ಪಡೆದಿದೆ. ಅದರ ಮುಂದುವರೆದ ಭಾಗವಾಗಿ ಗೋಚರಿಸುತ್ತಿರುವ ಚಿತ್ರ ಫೋಟೋ..ಕಳೆದ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿದಲ್ಲಿ ಪ್ರೇಕ್ಷಕರಿಂದ ಲೈಕ್ ಪಡೆದ ಫೋಟೋ ಸಿನಿಮಾ ಸದ್ಯದಲ್ಲೇ ತೆರೆಗೆ ಬರ್ತಿದೆ. ಕೋವಿಡ್ ಸಮಯದ ಕಥೆಗೀಗ ಜೊತೆಯಾಗಿದ್ದಾರೆ ಬಹುಭಾಷಾ ಕಲಾವಿದ ಪ್ರಕಾಶ್ ರಾಜ್. ಫೋಟೋ ಸಿನಿಮಾವನ್ನು ನಿರ್ದಿಗಂತದ ಮೂಲಕ ಪ್ರಕಾಶ್ ರಾಜ್ ಪ್ರೆಸೆಂಟ್ ಮಾಡುತ್ತಿದ್ದಾರೆ. ಈ ಮೂಲಕ ಹೈದ್ರಾಬಾದ್ ಕರ್ನಾಟಕದ…
-
ಹೊಂದಿಕೆ ಇಲ್ಲ ಅಂದರೆ ಮನುಷ್ಯ ಬದುಕುಬಹುದು. ಆದರೆ ಹೊಂದಾಣಿಕೆ ಇಲ್ಲ ಅಂದರೆ..
”ಫಾರ್ ರಿಜಿಸ್ಟ್ರೇಷನ್” ಸ್ಯಾಂಡಲ್ವುಡ್ನಲ್ಲಿ ಹಲವು ವಿಚಾರಗಳಿಂದ ಸದ್ದು ಮಾಡುತ್ತಿರುವ ಹೊಸ ಸಿನಿಮಾ. ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ್ ನಟಿಸಿರುವ ಬಹುನಿರೀಕ್ಷಿತ ಚಿತ್ರದ ಮೊದಲ ನೋಟ ಅನಾವರಣಗೊಂಡಿದೆ. ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದ ಸಂಘದಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು.. ವಾಲಗದ ಮೂಲಕ ಇಡೀ ಚಿತ್ರತಂಡ ಸುದ್ದಿಗೋಷ್ಠಿಗೆ ಎಂಟ್ರಿ ಕೊಟ್ಟಿದ್ದು, ವಿಶೇಷವಾಗಿತ್ತು. ನಿರ್ದೇಶಕರಾದ ಶಶಾಂಕ್ ಹಾಗೂ ಚೇತನ್ ಕುಮಾರ್ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಟ್ರೇಲರ್ ಬಿಡುಗಡೆ ಬಳಿಕ ಮಾತನಾಡಿ ನಟ ಪೃಥ್ವಿ ಅಂಬಾರ್ ಮಾತನಾಡಿ,…
-
ಕಿಕ್ಕೇರಿಸೋ ಶೈಲಿಯ `ಕೈಲಾಸ’ ಟ್ರಾನ್ಸ್ ಸಾಂಗ್!
ಈ ಹಿಂದೆ ತಾರಕಾಸುರ ಚಿತ್ರದ ಮೂಲಕ ಅಬ್ಬರದ ಎಂಟ್ರಿ ಕೊಟ್ಟಿದ್ದವರು ರವಿ. ಇದೀಗ ಅವರು ಕೈಲಾಸ ಎಂಬ ಚಿತ್ರದ ಮೂಲಕ ಮತ್ತೆ ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ. ನಾಗ್ ವೆಂಕಟ್ ನಿರ್ದೇಶನದ ಕೈಲಾಸ ಚಿತ್ರಕ್ಕೆ ಕಾಸಿದ್ರೆ ಎಂಬ ಅಡಿ ಬರಹವಿದೆ. ಈಗಾಗಲೇ ಟೀಸರ್ ಮೂಲಕ ಝಲಕ್ಕುಗಳನ್ನು ಅನಾವರಣಗೊಳಿಸಿದ್ದ ಚಿತ್ರತಂಡವೀಗ ಕನ್ನಡದ ಮಟ್ಟಿಗೆ ಹೊಸತೆನ್ನಿಸುವಂಥಾ ಟ್ರಾನ್ಸ್ ಸಾಂಗ್ ವೊಪಂದನ್ನು ಬಿಡುಗಡೆಗೊಳಿಸಿದೆ. ದೃಷ್ಯಗಳ ಮೂಲಕವೇ ಕಿಕ್ಕೇರಿಸೋ ಶೈಲಿಯ ಈ ಟ್ರಾನ್ಸ್ ವೀಡಿಯೋ ಸಾಂಗ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ನೋಡುಗರ ಕಡೆಯಿಂದ…
-
ವಿಷ್ಣುಪ್ರಿಯನ ರೊಮ್ಯಾಂಟಿಕ್ ಹಾಡಿಗೆ ಪ್ರೇಕ್ಷಕರು ಫಿದಾ!
ತೊಂಬತ್ತರ ದಶಕದ ಸಮ್ಮೋಹಕ ಪ್ರೇಮ ಕಥಾನಕ ಹೊಂದಿರುವ ಚಿತ್ರ `ವಿಷ್ಣುಪ್ರಿಯ’. ಈ ಹಿಂದೆ ಪಡ್ಡೆಹುಲಿಯಾಗಿ ಭರವಸೆ ಮೂಡಿಸಿದ್ದ ಶ್ರೇಯಸ್ ಮಂಜು ವಿಷ್ಣುಪ್ರಿಯನಾಗಿ, ವಿಶಿಷ್ಟವಾದ ಪಾತ್ರದ ಮೂಲಕ ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ. ಈ ಚಿತ್ರದ ಚೆಂದದ ಹಾಡೊಂದು ವಾರಗಳ ಹಿಂದೆ ಬಿಡುಗಡೆಗೊಂಡಿತ್ತು. ಇದೀಗ ದಿನದಿಂದ ದಿನಕ್ಕೆ ಆ ಹಾಡು ಟ್ರೆಂಡಿಂಗಿನತ್ತ ದಾಪುಗಾಲಿಡುತ್ತಿದೆ. ಕೇಳಿದಾಕ್ಷಣವೇ ಪ್ರೇಮದೂರಿಗೆ ಕೈ ಹಿಡಿದು ಕರೆದೊಯ್ಯುವ ಛಾತಿ ಹೊಂದಿರುವ ಆ ಪ್ರೇಮಗೀತೆ ಹೆಚ್ಚೆಚ್ಚು ವೀಕ್ಷಣೆ ಪಡೆದುಕೊಳ್ಳುತ್ತಾ, ಮೆಚ್ಚುಗೆ ಗಳಿಸುತ್ತಾ ಮುಂದುವರೆಯುತ್ತಿದೆ. ಚಿಗುರು ಚಿಗುರು ಸಮಯ ಹಿತವಾದ…
-
ಸಾರಾಂಶ: ತೀರದಾಚೆ ತೆರೆದುಕೊಂಡ ಲಿರಿಕಲ್ ವೀಡಿಯೋ ಸಾಂಗ್!
ತೀರಾ ಅಪರೂಪವೆಂಬಂಥಾ ಭಾವವೊಂದನ್ನು ಕೇಳುಗರೆಲ್ಲರಲ್ಲಿ ಮೂಡಿಸುವ ನಿಟ್ಟಿನಲ್ಲಿ `ಸಾರಾಂಶ’ ಚಿತ್ರದ ಹಾಡುಗಳು ಈಗಾಗಲೇ ಗೆದ್ದಿವೆ. ಇಂಥಾ ಹಾಡಿನ ಮೂಲಕವೇ ಒಂದಿಡೀ ಸಿನಿಮಾದ ಆಂತರ್ಯದ ಬಗ್ಗೆ ಕುತೂಹಲವೂ ಮೂಡಿಕೊಂಡಿದೆ. ಮೆಲುವಾಗಿ ತೇಲಿ ಬಂದು ನಾನಾ ಭಾವನೆಗಳನ್ನು ಮೊಗೆದು ತಂದು ಮನಸಿಗೆ ತುಂಬುವ ಶೈಲಿಯಲ್ಲಿ ಸಂಗೀತ ನಿರ್ದೇಶಕ ಉದಿತ್ ಹರಿತಾಸ್ ಅಕ್ಷರಶಃ ಮೋಡಿ ಮಾಡಿದ್ದಾರೆ. ಇದೀಗ ನಿರ್ದೇಶಕ ಸೂರ್ಯ ವಸಿಷ್ಠ ಹಾಗೂ ಉದಿತ್ ಸಹಯೋಗದ ಮತ್ತೊಂದು ಮೆಲೋಡಿಯಸ್ ಹಾಡು ಬಿಡುಗಡೆಗೊಂಡಿದೆ. ತೀರದಾಚೆಗೆ ಹಾರಿ ಹೋಗುವಾಸೆ ಅಂತ ಶುರುವಾಗುವ ಈ ಹಾಡು…
-
ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಫೆಬ್ರವರಿ 16 ರಂದು ತೆರೆಗೆ
ವಿಭಿನ್ನ ಕಥಾಹಂದರ ಹೊಂದಿರುವ “ರವಿಕೆ ಪ್ರಸಂಗ” ಚಿತ್ರ ಫೆಬ್ರವರಿ 16 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದ್ದು, ಪ್ರಚಾರ ಕಾರ್ಯ ಭರ್ಜರಿಯಾಗಿ ನಡೆಯುತ್ತಿದ್ದು, ಇತ್ತೀಚೆಗೆ ಚಿತ್ರದ ಪ್ರೀ ರಿಲೀಸ್ ಇವೆಂಟನ್ನು ಕನಕಪುರ ರಸ್ತೆಯ ಫೋರಮ್ ಮಾಲ್ ನಲ್ಲಿ ಆಯೋಜಿಸಿತ್ತು. ಸಾವಿರಾರು ಜನರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ಅಲ್ಲಿಗೆ ಬಂದಿದ್ದ ಜನರೆಲ್ಲರೂ ರವಿಕೆ ಪ್ರಸಂಗ ಚಿತ್ರದ ಪೋಸ್ಟರ್ ಹಿಡಿದು ಶುಭಕೋರಿದರು. ಇಡೀ ಚಿತ್ರತಂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿತ್ತು. ನಿರ್ದೇಶಕರಾದ ಸಂತೋಷ್ ಕೊಡೆಂಕೇರಿ ಅವರು, ಕಥೆಗಾರ್ತಿ ಮತ್ತು ಸಂಭಾಷಣಾಗಾರ್ತಿ ಪಾವನ ಸಂತೋಷ್, ಚಿತ್ರದ ನಾಯಕಿಯಾದ…
-
16ಕ್ಕೆ ಪರದೆ ಮೇಲೆ ತೆರೆದುಕೊಳ್ಳಲಿರುವ ರವಿಕೆ!
ದೃಷ್ಟಿ ಮೀಡಿಯಾ ಪ್ರೊಡಕ್ಷನ್ ನಡಿ ತಯಾರಾದ ಸಂತೋಷ್ ಕೊಡೆಂಕೇರಿ ನಿರ್ದೇಶನದ ರವಿಕೆ ಪ್ರಸಂಗ ಸಿನಿಮಾವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಿ ಯು-ಎ ಸರ್ಟಿಫಿಕೇಟ್ ನೀಡಿದೆ. ರವಿಕೆ ಪ್ರಸಂಗ ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆಗೊಂಡು ಜನರಿಂದ ಮೆಚ್ಚುಗೆ ಗಳಿಸಿದೆ. ಸಿನಿಮಾ ಫೆಬ್ರವರಿ 16 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್‌ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ ‘ರವಿಕೆ ಪ್ರಸಂಗ’. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸರ್ ಮತ್ತು ಟ್ರೈಲರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ರವಿಕೆ…
-
3 ಯುಗದ ಕಥೆ ಹೇಳಲಿರುವ ARM…
ಮಲಯಾಳಂ ಚಿತ್ರರಂಗದಲ್ಲಿ ಹೀರೋಗಿರಿಯ ಸಿನಿಮಾಗಳಿಗೆ ಕಟ್ಟು ಬೀಳದೆ ತಮ್ಮದೇ ಆದ ಮಾದರಿಯಲ್ಲಿ ಸಿನಿಮಾಗಳನ್ನು ಮಾಡುತ್ತಿರುವ ಸ್ಟಾರ್ ನಟ ಟೋವಿನೊ ಥಾಮಸ್.. ಒಂದರ ಮೇಲೊಂದು ಹಿಟ್ ಸಿನಿಮಾ ನೀಡುವ ಜೊತೆಗೆ ಅಭಿಮಾನಿಗಳನ್ನೂ ಸಹ ಸಂಪಾದಿಸುತ್ತಾ ಸಾಗುತ್ತಿರುವ ಈ ತಾರೆಗಿಂದು ಜನ್ಮದಿನದ ಸಂಭ್ರಮ. ಟೋವಿನೋ ಥಾಮಸ್ ಹುಟ್ಟಹಬ್ಬಕ್ಕೆ ARM ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಲಾಗಿದೆ. AMR ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಜಿತಿಲ್ ಲಾಲ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮ್ಯಾಜಿಕ್ ಫ್ರೇಮ್ಸ್ ಮತ್ತು…
-
ಕಿಚ್ಚು ಹಾಯಿಸುತ್ತಾ ಬಂದ ದೇವನಾಂಪ್ರಿಯ!
ಮುಗಿಲ್ ಪೇಟೆ ಡೈರೆಕ್ಷರ್ ಹೊಸ ಸಿನಿಮಾಗೆ ಟೈಟಲ್ ಫಿಕ್ಸ್..ಸಂಕ್ರಾಂತಿ ಹಬ್ಬಕ್ಕೆ ‘ದೇವನಾಂಪ್ರಿಯ’ ಫಸ್ಟ್ ಲುಕ್ ರಿಲೀಸ್. ಜೋಡಿಹಕ್ಕಿ ಹೀರೋ ತಾಂಡವ್ ಈಗ ‘ದೇವನಾಂಪ್ರಿಯ’..ಸಂಕ್ರಾಂತಿ ಹಬ್ಬಕ್ಕೆ ಮುಗಿಲ್ ಪೇಟೆ ಡೈರೆಕ್ಟರ್ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್. ‘ಅಡಚಣೆಗಾಗಿ ಕ್ಷಮಿಸಿ’ ಮತ್ತು ‘ಮುಗಿಲ್ ಪೇಟೆ’ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ಭರತ್ ಎಸ್. ನಾವುಂದ ಈಗ 3ನೇ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾದ ಮೂಲಕ ‘ಜೋಡಿಹಕ್ಕಿ’ ಧಾರಾವಾಹಿ ಖ್ಯಾತಿಯ ನಟ ತಾಂಡವ್ ರಾಮ್ ಅವರು ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ…
-
ಶಭ್ಬಾಷ್: ಶಿಷ್ಯನ ಮೊದಲ ಹೆಜ್ಜೆಗೆ ಕ್ಲಾಪ್ ಮಾಡಿ ಚಾಲನೆ ನೀಡಿದರು ಓಂ ಸಾಯಿಪ್ರಕಾಶ್!
ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ರುದ್ರಶಿವ ನಿರ್ದೇಶನದ `ಶಭ್ಬಾಷ್’ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಅವರು, ತಮ್ಮ ಶಿಷ್ಯನ ಚಿತ್ರಕ್ಕೆ ಕ್ಲಾಪ್ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಿದ್ದಾರೆ. ಶ್ರೀ ಬಂಡೆ ಮಹಾಕಾಳಿ ಅಮ್ಮನವರ ಸನ್ನಿಧಾನದಲ್ಲಿ ಈ ಮುಹೂರ್ತ ಸಮಾರಂಭ ಅರ್ಥವತ್ತಾಗಿ ನೆರವೇರಿದೆ. ಇದೇ ಸಂದರ್ಭದಲ್ಲಿ ` ಶಭ್ಬಾಷ್’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಕೂಡಾ ಅನಾವರಣಗೊಂಡಿದೆ. ಹೀಗೆ ಮುಹೂರ್ತ ಸಮಾರಂಭ ಸಾಂಘವಾಗಿ ನೆರವೇರಿದ…