ಝೈದ್ ಖಾನ್ ಮತ್ತು ಸೋನಲ್ ಮೊಂತೆರೋ ಅಭಿನಯದ ‘ಬನಾರಸ್’ ಚಿತ್ರ ನವೆಂಬರ್ 04ರಂದು ದೇಶಾದ್ಯಂತ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾ ಆಗಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಕೇರಳ ರಾಜ್ಯಕ್ಕೆ ಚಿತ್ರದ ಮಲಯಾಳಂ ಅವತರಣಿಕೆಯ ವಿತರಣೆಯ ಹಕ್ಕುಗಳನ್ನು ಮುಲಕುಪ್ಪಡಮ್ ಫಿಲಂಸ್ ಸಂಸ್ಥೆಯು ಪಡೆದುಕೊಂಡಿತ್ತು. ಈಗ ಕರ್ನಾಟಕ ವಿತರಣಾ ಹಕ್ಕನ್ನು ಖ್ಯಾತ ವಿತರಣಾ ಸಂಸ್ಥೆ ಡಿ ಬೀಟ್ಸ್ ಪಡೆದುಕೊಂಡಿದೆ. ವಿ. ಹರಿಕೃಷ್ಣ ಒಡೆತನದ ಡಿ ಬೀಟ್ಸ್ ಸಂಸ್ಥೆಯು ಮೊದಲು ಆಡಿಯೋ ಕಂಪನಿಯಾಗಿತ್ತು. ನಿರ್ಮಾಪಕಿ ಶೈಲಜಾ ನಾಗ್ ಅವರು ಹರಿಕೃಷ್ಣ ಜೊತೆಗೆ ಕೈಜೋಡಿಸಿದ ನಂತರ ಕ್ರಮೇಣ ಚಿತ್ರರಂಗದ ಬೇರೆಬೇರೆ ವಲಯಗಳತ್ತಲೂ ಡಿ […]
’ಲಾಫಿಂಗ್ ಬುದ್ದ’ ’ಕಾಶಿಯಾತ್ರೆ’ ಚಿತ್ರಗಳಲ್ಲಿ ನಾಯಕನಾಗಿ ನಟಿಸಿರುವ ಪ್ರಮೋದ್ಶೆಟ್ಟಿ ಮೂರನೇ ಚಿತ್ರ ’ಶಭಾಷ್ ಬಡ್ಡಿಮಗ್ನೆ’ ಸಿನಿಮಾದ ಮಹೂರ್ತ ಕಂಠೀರವ ಸ್ಟುಡಿಯೋದಲ್ಲಿ ವಿಜಯದಶಮಿ ಹಬ್ಬದಂದು ಅದ್ದೂರಿಯಾಗಿ ನಡೆಯಿತು. ನಟ ಅಜಯ್ರಾವ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭಹಾರೈಸಿದರು. ಸಹಾಯಕ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದ ಹರೀಶ್.ಸಾ.ರಾ ನಿರ್ದೇಶಕರಾಗಿ ಬಡ್ತಿಗೊಂಡು ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಕಥೆ ಬರೆದಿರುವ ಬಿ.ಎಸ್.ರಾಜಶೇಖರ್ ಸಿನಿಮಾಗೆ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಚಿತ್ರರಂಗದಲ್ಲಿ ಪ್ರೊಡಕ್ಷನ್ ಮ್ಯಾನೇಜರ್ ಆಗಿ ಕೆಲಸ ಮಾಡಿರುವ ಪ್ರಕಾಶ್ ಅವರು ಪ್ರಥಮ ಅನುಭವ ಎನ್ನುವಂತೆ ಪುತ್ರ […]
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಸಕಲಕಲಾವಲ್ಲಭ ಅಂತಾನೇ ಪ್ರಖ್ಯಾತಿ ಪಡೆದಿರುವ ಡಾಲಿ ಧನಂಜಯ್ ಅಭಿನಯದ ಹೆಡ್ ಬುಷ್ ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ. ಸಿನಿಮಾತಂಡ ಭರ್ಜರಿ ಪ್ರಚಾರದಲ್ಲಿ ಬ್ಯುಸಿ ಆಗಿದೆ. ಸದ್ಯ ಪ್ರೇಕ್ಷಕರ ಹಾಗೂ ಪಡ್ಡೆ ಹುಡುಗರ ಹಾರ್ಟ್ ಬೀಟ್ ಹೆಚ್ಚು ಮಾಡೋ ಹೊಸ ಸಾಂಗ್ ರಿಲೀಸ್ ಆಗಿದೆ…. ಹೆಡ್ ಬುಷ್ ಚಿತ್ರದ ಪಾಯಲ್ ರಜಪೂತ್ ಹೆಜ್ಜೆ ಹಾಕಿರೋ ಹಬೀಬಿ ಸಾಂಗ್ ರಿಲೀಸ್ ಆಗಿದೆ ..ಪಂಜಾಬಿ ಬೆಡಗಿ ಪಾಯಲ್ ಮೈಮಾಟಕ್ಕೆ ಹುಡುಗರು ಪಾಗಲ್ ಆಗೋದು ಗ್ಯಾರೆಂಟಿ…ಟಾಲಿವುಡ್ ನಲ್ಲಿ ಮಿಂಚಿನ […]
ಬಿಗ್ಬಾಸ್ ಖ್ಯಾತಿಯ ಯುವಜೋಡಿ ಅರವಿಂದ್ ಕೆಪಿ ಮತ್ತು ದಿವ್ಯಾ ಉರುಡುಗ ಈಗ ತೆರೆಯಮೇಲೂ ಒಟ್ಟಿಗೇ ಕಾಣಿಸಿಕೊಳ್ಳುತ್ತಿದ್ದಾರೆ. ಅರವಿಂದ್ ಕೌಶಿಕ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಆ ಚಿತ್ರದ ಹೆಸರು ಅರ್ಧಂಬರ್ಧ ಪ್ರೇಮಕಥೆ. ಹುಲಿರಾಯ, ತುಘ್ಲಕ್, ನಮ್ ಏರಿಯಾಲ್ ಒಂದಿನ ಸಿನಿಮಾಗಳಿಂದ ಗುರುತಿಸಿಕೊಂಡ ಅರವಿಂದ್ ಕೌಶಿಕ್, ರಕ್ಷಿತ್ಶೆಟ್ಟಿ, ರಿಶಬ್ಶೆಟ್ಟಿ, ರಚಿತಾರಾಮ್, ಅನೀಶ್, ಬಾಲು ನಾಗೇಂದ್ರ ಸೇರಿದಂತೆ ಅನೇಕ ಕಲಾವಿದರನ್ನು ಪರಿಚಯಿಸಿದ್ದರು. ಈಗ ಬೈಕ್ ರೇಸರ್ ಅರವಿಂದ್ರನ್ನು ನಾಯಕನಾಗಿ ಇಂಟ್ರಡ್ಯೂಸ್ ಮಾಡುತ್ತಿದ್ದಾರೆ. ಅರ್ಜುನ್ ಜನ್ಯ ಅವರು ಅರ್ದಂಬರ್ಧ ಪ್ರೇಮಕಥೆಗೆ ಚೆಂದದ ಹಾಡುಗಳನ್ನು […]
ಬಹಳ ಪಸಂದಾಗಿದೆ “ದಿಲ್ ಪಸಂದ್” ಟೀಸರ್. ಡಾರ್ಲಿಂಗ್ ಕೃಷ್ಣ ಅವರು ನಾಯಕನಾಗಿ ನಟಿಸಿರುವ “ದಿಲ್ ಪಸಂದ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಟೀಸರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ. ಕಳೆದ ಹನ್ನೊಂದು ತಿಂಗಳ ಹಿಂದೆ ನಮ್ಮ ಚಿತ್ರ ಆರಂಭವಾಗಿತ್ತು. ಇದೇ ನವೆಂಬರ್ 11 ರಂದು ಚಿತ್ರ ತೆರೆಗೆ ಬರುತ್ತಿದೆ. ಕುಟುಂಬ ಸಮೇತ ನೋಡಬಹುದಾದ ನಮ್ಮ ಚಿತ್ರ “ದಿಲ್ ಪಸಂದ್” ನಷ್ಟೇ ಸಿಹಿಯಾಗಿದೆ . ನನ್ನ ಕಥೆ ಮೆಚ್ಚಿಕೊಂಡು ನಿರ್ಮಾಣಕ್ಕೆ ಮುಂದಾದ ನಿರ್ಮಾಪಕ ಸುಮಂತ್ […]
ನವರಸ ನಾಯಕ ಜಗ್ಗೇಶ್ ಅಭಿನಯದ ‘ತೋತಾಪುರಿ’ ಮೊದಲ ಭಾಗ ಸೆಪ್ಟೆಂಬರ್ 30 ರಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಜನರಿಗೆ ವಿಷಯ ತಲುಪಿಸಲು ವಿಭಿನ್ನ ಪ್ರಚಾರ ಕಾರ್ಯ ಹಮ್ಮಿಕೊಂಡಿರುವ ಚಿತ್ರತಂಡ, ಬಸ್ಸು, ಆಟೋ, ಮೆಟ್ರೋ ಹಾಗೂ ಮಾಲ್ ಮುಂತಾದೆಡೆ ಭರ್ಜರಿಯಾಗಿ ಸದ್ದು ಮಾಡಿದೆ. ಇದೀಗ ಒಂದು ಹೆಜ್ಜೆ ಮುಂದಕ್ಕೆ ಇಟ್ಟು ಗಮನ ಸೆಳೆದಿದೆ ಟೀಂ ತೋತಾಪುರಿ. ರೈಲಿನಲ್ಲಿ ಪ್ರಚಾರ ಕಾರ್ಯ ಹಮ್ಮಿಕೊಂಡ ಚಿತ್ರತಂಡ, ವಿನೂತನವಾಗಿ ಎಲ್ಲರ ಗಮನ ಸೆಳೆದಿದೆ. ರೈಲಿನ ಭೋಗಿಗಳಿಗೆಲ್ಲಾ ತೋತಾಪುರಿ ಥರೇವಾರಿ ಪೋಸ್ಟರ್ […]
ಜಮೀರ್ ಅಹ್ಮದ್ ಅವರ ಪುತ್ರ ಝೈದ್ ಖಾನ್ ನಾಯಕನಾಗಿ ಎಂಟ್ರಿ ಕೊಡುತ್ತಿರುವ ಬಹುನಿರೀಕ್ಷಿತ ಚಿತ್ರ ಬನಾರಸ್. ಜಯತೀರ್ಥ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾ ಈಗಾಗಲೇ ಹಲವು ಕಾರಣಕ್ಕೆ ಪ್ರೇಕ್ಷಕರನ್ನು ಸಳೆದಿದೆ. ಬಗೆಬಗೆಯಲ್ಲಿ ಕುತೂಹಲ ಹುಟ್ಟು ಹಾಕಿದೆ. ಅದನ್ನೆಲ್ಲ ಮತ್ತಷ್ಟು ತೀವ್ರವಾಗಿಸಿದ ಕ್ರೆಡಿಟ್ ಸಲ್ಲುವುದು ಮುದ್ದಾಗಿ ಮೂಡಿಬಂದು, ಹಂತ ಹಂತವಾಗಿ ಬಿಡುಗಡೆಯಾದ ಹಾಡುಗಳಿಗೆ. ಮೊದಲು ಬಿಡುಗಡೆಗೊಂಡಿದ್ದ ವಿ. ನಾಗೇಂದ್ರ ಪ್ರಸಾದ್ ಬರೆದಿರುವ ಮಾಯಗಂಗೆ ಮಾಯಗಂಗೆ ಎಂಥವರೂ ಮುದ್ದು ಮಾಡುವಂತಿದೆ. ಸಾಹಿತ್ಯ, ಸಂಗೀತ, ದೃಶ್ಯವನ್ನು ಸೆರೆ ಹಿಡಿದಿರುವ ಬಗೆಗೆ […]
ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ, ಬಹು ನಿರೀಕ್ಷಿತ ” ದಿಲ್ ಪಸಂದ್” ಚಿತ್ರ ನವೆಂಬರ್ 11ರಂದು ಬಿಡುಗಡೆಯಾಗುತ್ತಿದೆ. ಚಿತ್ರ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಇತ್ತೀಚೆಗೆ ಘೋಷಣೆ ಮಾಡಿದೆ. ರಶ್ಮಿ ಫಿಲಂಸ್ ಲಾಂಛನದಲ್ಲಿ ಸುಮಂತ್ ಕ್ರಾಂತಿ ಅವರು ನಿರ್ಮಿಸಿರುವ ಈ ಚಿತ್ರವನ್ನು ಶಿವತೇಜಸ್ ನಿರ್ದೇಶಿಸಿದ್ದಾರೆ. ಪ್ರೇಮಕಥೆಯೊಂದಿಗೆ, ಕೌಟುಂಬಿಕ ಕಥಾಹಂದರವನ್ನು ಈ ಚಿತ್ರ ಹೊಂದಿದೆ. ಬೆಂಗಳೂರಿನಲ್ಲಿ ಬಹುತೇಕ ಚಿತ್ರೀಕರಣ ನಡೆದಿದೆ. ಚಿತ್ರೀಕರಣ ನಂತರದ ಚಟುವಟಿಕೆಗಳು ಬಿರುಸಿನಿಂದ ಸಾಗುತ್ತಿದ್ದು, ಮಾಸಾಂತ್ಯಕ್ಕೆ ಟೀಸರ್ ಬಿಡುಗಡೆಯಾಗುವ ಸಾಧ್ಯತೆಯಿದೆ. ನಾಲ್ಕು ಸುಮಧುರ ಹಾಡುಗಳಿಗೆ ಮ್ಯೂಸಿಕ್ ಮಾಂತ್ರಿಕ […]
ಇಪ್ಪತ್ತೈದು ವರ್ಷಗಳ ಹಿಂದೆಅಪಾರ ಜನಪ್ರಿಯತೆ ಪಡೆದ ಧಾರಾವಾಹಿ ‘ಮಾಯಾಮೃಗ’.ಟಿ.ಎನ್.ಸೀತಾರಾಮ್ ನಿರ್ದೇಶನದ ಈ ಧಾರಾವಾಹಿಯ ಮುಂದುವರೆದ ಭಾಗ “ಮತ್ತೆ ಮಾಯಾಮೃಗ” ಎಂಬ ಹೆಸರಿನಿಂದ ಸಿರಿಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈ ಕುರಿತು ಧಾರಾವಾಹಿ ತಂಡ ಕೆಲವು ವಿಷಯಗಳನ್ನು ಹಂಚಿಕೊಂಡಿತ್ತು. ಸಿನಿಮಾಗಳಿಗೆ ಸೀಕ್ವೆಲ್ ಬರುವುದು ಸಾಮಾನ್ಯ. ಹಿರಿತೆರೆಗೆ ಹೋಲಿಸಿದರೆ ಕಿರುತೆರೆಯಲ್ಲಿ ಸೀಕ್ವೆಲ್ಗಳು ಬರುವುದು ಬಹಳ ಕಡಿಮೆ. ಆದರೆ, ಈ ರೀತಿಯ ಪ್ರಯತ್ನವನ್ನು ಮಾಡಲು ಸೀತಾರಾಮ್ ಅವರು ಮುಂದಾಗಿದ್ದಾರೆ. ಬರೋಬ್ಬರಿ 25 ವರ್ಷಗಳ ಬಳಿಕ ‘ಮಾಯಾಮೃಗ’ ಧಾರಾವಾಹಿಯ ಸೀಕ್ವೆಲ್ ಬರುತ್ತಿದೆ. ಇಷ್ಟೊಂದು ವರ್ಷಗಳ […]
ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆ ಶುಭದಿನದಂದು “ರಿಯಾ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಆಂದ್ರಪ್ರದೇಶದವರಾದ ವಿಜಯ ನರೇಶ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ವಿಜಯ ನರೇಶ್ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಪತಿ ಕಣಿಗೊಂಡ ನರೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಒಳ್ಳೆಯ ಹುಡುಗ ಪ್ರಥಮ್ ಹಾಗೂ “ಸ್ತಬ್ಧ” ಚಿತ್ರದ ನಾಯಕ ಪ್ರತಾಪ್ ಸಿಂಹ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಇದು ಒಂದು ಹಾರಾರ್ ಸಿನಿಮಾ. ಹದಿನಾಲ್ಕು ಪಾತ್ರಗಳ ಜೊತೆಗೆ ಒಂದೇ ಮನೆಯಲ್ಲಿ ಈ […]