ಈಗೆಲ್ಲಾ ಒಂದು ಅಥವಾ ಎರಡು ಹಿಟ್ ಚಿತ್ರಗಳನ್ನು ಕೊಡುತ್ತಿದ್ದಂತೇ ತಮಗೆ ತಾವೇ ʻಸ್ಟಾರ್ ಡೈರೆಕ್ಟರ್ʼ ಅಂತಾ ಸ್ವಯಂ ಘೋಷಿಸಿಕೊಳ್ಳುತ್ತಾರೆ. ಹಾಗೆ ನೋಡಿದರೆ, ಕನ್ನಡ ಚಿತ್ರರಂಗದ ನಿಜವಾದ ಸ್ಟಾರ್ ಡೈರೆಕ್ಟರ್ಗಳು ಕೆಲವೇ ಮಂದಿ. ಅಂಥವರ ನಡುವೆ ಮುಂಚೂಣಿಯಲ್ಲಿದ್ದವರು ಕೆ.ವಿ. ರಾಜು. ಒಂದು ಕಾಲದಲ್ಲಿ ಸೂಪರ್ ಸ್ಟಾರ್ಗಳು ಕೆ.ವಿ. ರಾಜು ಅವರಿಗಾಗಿ ಕಾದು ಕೂರುತ್ತಿದ್ದರು. ಎಂಭತ್ತು ಮತ್ತು ತೊಂಭತ್ತರ ದಶಕದಲ್ಲಿ ಕನ್ನಡ ಚಿತ್ರರಂಗದ ಟಾಪ್ ನಿರ್ದೇಶಕರಲ್ಲೊಬ್ಬರಾಗಿದ್ದವರು ಕೆ.ವಿ. ರಾಜು. ಇವರ ಬಳಿ ಸಹಾಯಕ ನಿರ್ದೇಶಕರಾಗಿದ್ದುಕೊಂಡು, ಬರವಣಿಗೆ ನಿರ್ದೇಶನ ಕಲಿತವರು ಸಾಕಷ್ಟು […]
ಪರ್ಪಲ್ ಪ್ಯಾಚ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಾಯಿಪ್ರೀತಿ ಎನ್. ಅವರು ನಿರ್ಮಿಸಿರುವ, ಮರ್ಡರ್ ಮಿಸ್ಟ್ರಿ ಜೊತೆಗೆ ಇನ್ ವೆಸ್ಟಿಗೇಷನ್ ಥ್ರಿಲ್ಲರ್ ಕಾನ್ಸೆಪ್ಟ್ ಹೊಂದಿರುವ ಚಿತ್ರ ‘4 ಎನ್ 6’ ಮೇ 10 ರಂದು ಶುಕ್ರವಾರ ರಾಜ್ಯಾದ್ಯಂತ ತೆರೆಗೆ ಬರಲಿದೆ. ಕೊಲೆಯೊಂದರ ತನಿಖೆಯ ಸುತ್ತ ನಡೆಯುವ ಕಥಾಹಂದರ ಚಿತ್ರದಲ್ಲಿದ್ದು, ಇಂಥ ಪ್ರಕರಣ ಪತ್ತೆಹಚ್ಚುವಲ್ಲಿ ಫೋರೆನ್ಸಿಕ್ ರಿಪೋರ್ಟ್ ತುಂಬಾ ಪ್ರಮುಖವಾಗಿರುತ್ತದೆ. ಇದು ಬರೀ ಮರ್ಡರ್ ಇನ್ವೆಸ್ಟಿಗೇಶನ್ ಸುತ್ತ ನಡೆವ ಕಥೆಯಲ್ಲ, ಸೈಕಲಾಜಿಕಲ್ ಚಿತ್ರವೂ ಹೌದು, ಲವ್ ಮಾಕ್ಟೇಲ್ ಹಾಗೂ ಲವ್ […]
ರೂಪಾ ರಾವ್ ನಿರ್ಮಾಣ ಮತ್ತು ಸಹದೇವ್ ಕೆಲವಡಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ `ಕೆಂಡ’. ಆರಂಭದಿಂದ ಇಲ್ಲಿಯವರೆಗೂ ಒಂದಷ್ಟು ಕುತೂಹಲಕರ ವಿಚಾರಗಳೊಂದಿಗೇ ಈ ಸಿನಿಮಾ ಪ್ರೇಕ್ಷಕರನ್ನು ತಲುಪುತ್ತಾ ಬಂದಿದೆ. ಇದೀಗ ಸಂಪೂರ್ಣವಾಗಿ ಚಿತರ್ರೀಕರಣ ಮುಗಿಸಿಕೊಂಡು ಬಿಡುಗಡೆಗೆ ಸಜ್ಜುಗೊಂಡಿರುವ `ಕೆಂಡ’ದ ಕಡೆಯಿಂದೀಗ ಸಮ್ಮೋಹಕ ಹಾಡುಗಳ ಹಂಗಾಮಾ ಶುರುವಾಗಿದೆ. ಈಚೆಗಷ್ಟೇ ಚೆಂದದ್ದೊಂದು ಹಾಡು ಬಿಡುಗಡೆಗೊಂಡಿತ್ತು. ಇದೀಗ ಮತ್ತೊಂದು ಲಿರಿಕಲ್ ವೀಡಿಯೋ ಸಾಂಗ್ ಅನಾವರಣಗೊಂಡಿದೆ. ದಾರಿಯಲ್ಲಿ ಧೂಳು… ದೂರ ಎಲ್ಲೋ ಊರು… ಅಂತ ತೆರೆದುಕೊಳ್ಳೋ ಈ ಹಾಡು ನವಿರು ಸಾಹಿತ್ಯ, ಅದಕ್ಕೊಪ್ಪುವ […]
ಕರಾವಳಿ ಸೀಮೆಯಿಂದ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಅನೇಕರು ಆಗಮಿಸಿದ್ದಾರೆ. ಒಂದಷ್ಟು ಗೆಲುವನ್ನೂ ದಾಖಲಿಸಿದ್ದಾರೆ. ಇದೀಗ `ಕಲ್ಜಿಗ’ ಎಂಬ ಚಿತ್ರದ ಮೂಲಕ ಮತ್ತೊಂದು ತಂಡ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಶೀರ್ಷಿಕೆಯಲ್ಲಿಯೇ ಕೌತುಕ ಬೆರೆತ ಸೆಳೆತವೊಂದನ್ನು ಬಚ್ಚಿಟ್ಟುಕೊಂಡಂತಿರುವ ಈ ಚಿತ್ರದ ಟೈಟಲ್ ಹಾಗೂ ಪೋಸ್ಟರ್ ಇದೀಗ ಅನಾವಣಗೊಂಡಿದೆ. ಚಿತ್ರತಂಡ, ನಾನಾ ಕ್ಷೇತ್ರದ ಗಣ್ಯರು ಮತ್ತು ನಾದಬ್ರಹ್ಮ ಹಂಸಲೇಖ ಸಮ್ಮುಖದಲ್ಲಿ ಕಲ್ಜಿಗದ ಟೈಟಲ್ ಹಾಗೂ ಪೋಸ್ಟರ್ ಬಿಡುಗಡೆಗೊಂಡಿದೆ. ಹಿಮಾನಿ ಫಿಲಂಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ ಕಲ್ಜಿಗ ಚಿತ್ರವನ್ನು ಸುಮನ್ ಸುವರ್ಣ ನಿರ್ದೇಶನ […]
ತೆಲುಗು ನಟ ನಿಖಿಲ್ ಸಿದ್ದಾರ್ಥ್ ನಟಿಸುತ್ತಿರುವ ಕ್ರೇಜಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಸ್ವಯಂಭು ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಸಹಸ್ರಮಾನಗಳ ಹಿಂದಿನ ಕಥೆಯನ್ನೊಳಗೊಂಡಿರುವ ಈ ಚಿತ್ರದ ಮೂಲಕ ವಜ್ರಕಾಯದ ಪಟಾಕ ಕಂಬ್ಯಾಕ್ ಮಾಡುತ್ತಿದ್ದಾರೆ. ಕನ್ನಡತಿ ನಭಾ ನಟೇಶ್ಗೆ 2023ರಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ವೇಳೆ ಅವರು ಸರ್ಜರಿಗೂ ಒಳಗಾಗಬೇಕಾಯಿತು. ಈಗ ಸಂಪೂರ್ಣ ಚೇತರಿಕೆ ಕಂಡಿರುವ ಶೃಂಗೇರಿ ಸುಂದರಿ ಸ್ವಯಂಭು ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡುತ್ತಿದ್ದಾರೆ. ಸ್ವಯಂಭು ಶೂಟಿಂಗ್ ಅಖಾಡಕ್ಕೆ ನಭಾ […]
ತಮ್ಮ ಕಾಮಿಡಿ ಟೈಮಿಂಗ್ನಿಂದಲೇ ಹೆಸರಾದ ಪ್ರತಿಭಾನ್ವಿತ ನಟ ರಿಷಿ. ಹಾಗಂತ ಅವರು ಬರೀ ಕಾಮಿಡಿಯನ್ನಷ್ಟೇ ಮಾಡುವುದಿಲ್ಲ. ‘ಕವಲುದಾರಿ’ಯಂತಹ ಗಂಭೀರ ಸಿನಿಮಾದಲ್ಲೂ ಮನಮುಟ್ಟುವಂತೆ ನಟಿಸಿದ್ದಾರೆ. ಅಂದಹಾಗೆ, ರಿಷಿ ಈಗ ‘ರಾಮನ ಅವತಾರದಲ್ಲಿ ದರ್ಶನ ಕೊಡೋದಿಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ರಿಷಿ ನಟನೆಯ ರಾಮನ ಅವತಾರ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಮೇ 10ಕ್ಕೆ ಚಿತ್ರ ರಾಜ್ಯಾದ್ಯಂತ ತೆರೆ ಕಾಣಲಿದೆ. ಏಪ್ರಿಲ್ ತಿಂಗಳಲ್ಲಿ ಸಿನಿಮಾವನ್ನು ಬೆಳ್ಳಿಭೂಮಿ ಅಖಾಡಕ್ಕೆ ಇಳಿಸೋದಿಕ್ಕೆ ಚಿತ್ರತಂಡ ಪ್ಲಾನ್ ಹಾಕಿಕೊಂಡಿತ್ತು. ಆದ್ರೆ ಲೋಕಸಭಾ ಚುನಾವಣೆ ಹಿನ್ನೆಲೆ ಚಿತ್ರ […]
ಪಾರು ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರ ಮನೆ ಮನ ಗೆದ್ದಿರುವ ಆದಿ ಊರೂಫ್ ಶರತ್ ಪದ್ಮನಾಭ್ ನಾಯಕನಾಗಿ ಸ್ಯಾಂಡಲ್ ವುಡ್ ಅಂಗಳದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಶರತ್ ನಾಯಕನಾಗಿ ಬಣ್ಣ ಹಚ್ಚಿರುವ ಚೊಚ್ಚಲ ಸಿನಿಮಾಗೆ ಅನಿಮಾ ಎಂಬ ಶೀರ್ಷಿಕೆ ಇಡಲಾಗಿದೆ. ಅನಿಮಾ ಎಂದರೆ ಪ್ರತಿಬಿಂಬ ಕಾಣದ ಕನ್ನಡಿ ಎಂದರ್ಥ. ಅನಿಮಾಗೆ ವರ್ಧನ್ ಎಂ ಎಚ್ ಆಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ರೈತರ ಕುರಿತ ಹೊನ್ನು ಬಿತ್ಯಾರು ಎಂಬ ಕಿರುಚಿತ್ರ ಮಾಡಿದ್ದ ವರ್ಧನ್ ಈ ಸಿನಿಮಾ ಮೂಲಕ ಡೈರೆಕ್ಟರ್ […]
ಸಹಜ ಅಭಿನಯ, ಸರಳ ಸೌಂದರ್ಯದಿಂದಲೇ ಸ್ಯಾಂಡಲ್ ವುಡ್ ನ್ಯೂ ಕ್ರಶ್ ಎನಿಸಿಕೊಂಡಿರುವ ಸಂಜನಾ ಆನಂದ್ ಈಗ ಮುಧೋಳ್ ಬಳಗ ಸೇರಿಕೊಂಡಿದ್ದಾರೆ. ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪರಿಚಯವಾದ ಸಂಜನಾ ಕಡಿಮೆ ಅವಧಿಯಲ್ಲಿ ಸ್ಟಾರ್ ಹೀರೋ ಜೊತೆ ತೆರೆಹಂಚಿಕೊಳ್ಳುವ ಅವಕಾಶಗಿಟ್ಟಿಸಿಕೊಂಡರು. ದುನಿಯಾ ವಿಜಯ್ ಸಾರಥ್ಯದ ಸಲಗ ಮೂಲಕ ಸೆನ್ಸೇಷನ್ ಸೃಷ್ಟಿಸಿದ್ದ ಈ ಬ್ಯೂಟಿ ಟಾಲಿವುಡ್ ಕೂಡ ಪ್ರವೇಶಿಸಿದ್ದಾರೆ. ಕನ್ನಡದ ಜೊತೆಗೆ ತೆಲುಗು ಅಂಗಳದಲ್ಲಿಯೂ ಬ್ಯುಸಿಯಾಗಿರುವ ಸಂಜನಾ ಆನಂದ್ ಈಗ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಜೊತೆ […]
ಚಂದನ್ ಶೆಟ್ಟಿ ನಟನೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರೇ: ಚಿತ್ರೀಕರಣ ಮುಗಿಸಿಕೊಂಡು ಮಾಧ್ಯಮ ಮುಖಾಮುಖಿ! ಅರುಣ್ ಅಮುಕ್ತ ನಿರ್ದೇಶನದ, ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರವೀಗ ಯಶಸ್ವಿಯಾಗಿ ಚಿತ್ರೀಕರಣ ಮುಗಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಒಂದು ಅಚ್ಚುಕಟ್ಟಾದ ಪತ್ರಿಕಾಗೋಷ್ಠಿಯ ಮೂಲಕ ಮಾಧ್ಯಮಗಳನ್ನು ಮುಖಾಮುಖಿಯಾಗಿರುವ ಚಿತ್ರತಂಡ ಖುಷಿಯನ್ನು ಹಂಚಿಕೊಂಡಿದೆ. ಒಟ್ಟಾರೆ ಸಿನಿಮಾ ಬಗ್ಗೆ, ಮುಂದಿನ ಕಾರ್ಯವೈಖರಿಗಳ ಬಗ್ಗೆ ಒಂದಷ್ಟು ವಿಚಾರಗಳನ್ನು ವಿನಿಮಯ ಮಾಡಿಕೊಂಡಿದೆ. ಚಿತ್ರೀಕರಣ ಶುರುವಾದಲ್ಲಿಂದ ಮೊದಲ್ಗೊಂಡು, ಇಲ್ಲಿಯವರೆಗೂ ನಿರ್ದೇಶಕರು ಅತ್ಯಂತ ಕ್ರಿಯಾಶೀಲವಾಗಿ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡು ಬಂದಿದ್ದಾರೆ. ಈ ಪತ್ರಿಕಾ […]
ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣದ, ಸಿಂಪಲ್ ಸುನಿ ನಿರ್ದೇಶನದ ಹಾಗೂ ಶರಣ್ ನಾಯಕರಾಗಿ ನಟಿಸಿರುವ “ಅವತಾರ ಪುರುಷ 2” ಚಿತ್ರದಿಂದ “ಇವನೇ ಅವತಾರ ಪುರುಷ” ಎಂಬ ಭರ್ಜರಿ ರಾಪ್ ಸಾಂಗ್ ಬಿಡುಗಡೆಯಾಗಿದೆ. ರಾಪ್ ಸಾಂಗ್ ನಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ಎಂ.ಸಿ.ಬಿಜ್ಜು ಈ ಹಾಡನ್ನು ಹಾಡಿದ್ದಾರೆ. ಔರಾ ಹಾಗೂ ಅಭಿನಂದನ್ ಕಶ್ಯಪ್ ಕೂಡ ಗಾಯನಕ್ಕೆ ಬಿಜ್ಜು ಅವರ ಜೊತೆಯಾಗಿದ್ದಾರೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಅದ್ದೂರಿಯಾಗಿ ನೆರವೇರಿತು. ಅಭಿನಂದನ್ ಕಶ್ಯಪ್ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆ ನಂತರ […]