ಈ ಹಿಂದೆ ಪಾರು ಐ ಲವ್ ಯೂ ಸೇರಿದಂತೆ ಕೆಲವಾರು ಸಿನಿಮಾಗಳಲ್ಲಿ ನಟಿಸಿರುವ ಉದಯೋನ್ಮುಖ ಕಲಾವಿದ ರಂಜನ್ ಹಾಸನ್. ನಟನಾಗಿ ಮಾತ್ರವಲ್ಲದೆ, ನಿರ್ಮಾಣ ಸೇರಿದಂತೆ ಇತರೆ ವಲಯಗಳಲ್ಲೂ ಕಾರ್ಯ ನಿರ್ವಹಿಸುತ್ತಾ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ರಂಜನ್ ನಟನೆಯ ಸಿನಿಮಾವೊಂದು ಈ ವಾರ ತೆರೆಗೆ ಬರುತ್ತಿದೆ. ಅದು ಚೆಕೆ ಮೇಟ್! ಜಗಜ್ಯೋತಿ ಮೂವೀ ಮೇಕರ್ಸ್ ಲಾಂಛನದಲ್ಲಿ ರಂಜನ್ ಹಾಸನ್ ಅವರ ನಿರ್ಮಾಣದ ದಿ ಚೆಕ್ಮೇಟ್ ಚಿತ್ರ ಈ ಶುಕ್ರವಾರ (ಅ.7) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಸ್ನೇಹ, ಪ್ರೀತಿ, ಬದುಕು ಈ […]
ಸ್ನೇಹಿತನಿಂದ ಸ್ನೇಹಿತನಿಗಾಗಿ ನಿರ್ಮಾಣವಾಗಿರುವ ಈ ಚಿತ್ರ ಅಕ್ಟೋಬರ್ 14 ರಂದು ಬಿಡುಗಡೆ. ಸಚಿನ್ ಧನಪಾಲ್ ಹಾಗೂ ಅದಿತಿ ಪ್ರಭುದೇವ ನಾಯಕ, ನಾಯಕಿಯಾಗಿ ನಟಿಸಿರುವ “ಚಾಂಪಿಯನ್” ಚಿತ್ರದ ಟ್ರೇಲರ್ ಡೈನಾಮಿಕ್ ಸ್ಟಾರ್ ದೇವರಾಜ್ ಅವರಿಂದ ಇತ್ತೀಚಿಗೆ ಬಿಡುಗಡೆಯಾಯಿತು. ಚಿತ್ರ ಅಕ್ಟೋಬರ್ 14 ರಂದು ತೆರೆಗೆ ಬರುತ್ತಿದೆ. ನಾನು ಹದಿನಾಲ್ಕು ವರ್ಷಗಳ ಹಿಂದೆ ನನ್ನ ಸ್ನೇಹಿತ ಸಚಿನ್ ಧನಪಾಲ್ ಗೆ ಹೇಳಿದ್ದೆ. ನನಗೇನಾದರೂ ತುಂಬಾ ದುಡ್ಡು ಬಂದರೆ, ನಿನ್ನನ್ನು ಸಿನಿಮಾ ಹೀರೋ ಮಾಡುತ್ತೀನಿ ಎಂದು. ಈಗ ಆ ಮಾತು ನಿಜವಾಗಿದೆ. […]
ಇಪ್ಪತ್ತೈದು ವರ್ಷಗಳ ಹಿಂದೆಅಪಾರ ಜನಪ್ರಿಯತೆ ಪಡೆದ ಧಾರಾವಾಹಿ ‘ಮಾಯಾಮೃಗ’.ಟಿ.ಎನ್.ಸೀತಾರಾಮ್ ನಿರ್ದೇಶನದ ಈ ಧಾರಾವಾಹಿಯ ಮುಂದುವರೆದ ಭಾಗ “ಮತ್ತೆ ಮಾಯಾಮೃಗ” ಎಂಬ ಹೆಸರಿನಿಂದ ಸಿರಿಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈ ಕುರಿತು ಧಾರಾವಾಹಿ ತಂಡ ಕೆಲವು ವಿಷಯಗಳನ್ನು ಹಂಚಿಕೊಂಡಿತ್ತು. ಸಿನಿಮಾಗಳಿಗೆ ಸೀಕ್ವೆಲ್ ಬರುವುದು ಸಾಮಾನ್ಯ. ಹಿರಿತೆರೆಗೆ ಹೋಲಿಸಿದರೆ ಕಿರುತೆರೆಯಲ್ಲಿ ಸೀಕ್ವೆಲ್ಗಳು ಬರುವುದು ಬಹಳ ಕಡಿಮೆ. ಆದರೆ, ಈ ರೀತಿಯ ಪ್ರಯತ್ನವನ್ನು ಮಾಡಲು ಸೀತಾರಾಮ್ ಅವರು ಮುಂದಾಗಿದ್ದಾರೆ. ಬರೋಬ್ಬರಿ 25 ವರ್ಷಗಳ ಬಳಿಕ ‘ಮಾಯಾಮೃಗ’ ಧಾರಾವಾಹಿಯ ಸೀಕ್ವೆಲ್ ಬರುತ್ತಿದೆ. ಇಷ್ಟೊಂದು ವರ್ಷಗಳ […]