ರುದ್ರಶಿವ ನಿರ್ದೇಶನದ `ಶಭ್ಬಾಷ್’ ಚಿತ್ರ ಮೊದಲ ಹಂತದ ಚಿತ್ರೀಕರಣ ಮುಗಿಸಿಕೊಂಡ ಸುದ್ದಿ ಇತ್ತೀಚೆಗಷ್ಟೇ ಹೊರಬಿದ್ದಿತ್ತು. ಅದಾಗಲೇ ಚಿತ್ರತಂಡ ಎರಡನೇ ಹಂತದ ಚಿತ್ರೀಕರಣ ಸಹ ಸಾಂಘವಾಗಿ ಮುಕ್ತಾಯಗೊಂಡ ಖುಷಿಯ ಸಂಗತಿಯನ್ನು ಹಂಚಿಕೊಂಡಿದೆ. ಚನ್ನಗಿರಿಯಲ್ಲಿ ಮೊದಲನೇ ಹಂತದ ಚಿತ್ರೀಕರಣ ಮುಗಿಸಿಕೊಂಡಿದ್ದ ಚಿತ್ರತಂಡ ಮಡಿಕೇರಿ ಸುತ್ತಮುತ್ತಲ ಚೆಂದದ ಪರಿಸರದಲ್ಲಿ ಎರಡನೇ ಹಂತದ ಚಿತ್ರೀಕರಣವನ್ನು ಸಮಾಪ್ತಿಗೊಳಿಸಿಕೊಂಡಿದೆ. ಈ ಹಂತದಲ್ಲಾದ ಅಮೋಘ ಅನುಭವಗಳನ್ನೂ ಹಂಚಿಕೊಂಡಿದೆ! ನಿರ್ದೇಶಕ ರುದ್ರಶಿವ ಅತ್ಯಂತ ಅಚ್ಚುಕಟ್ಟಾಗಿ ಪ್ಲಾನು ಮಾಡಿಕೊಂಡು, ಅದಕ್ಕೆ ತಕ್ಕುದಾಗಿಯೇ ಮುಂದಡಿ ಇಡುತ್ತಿದ್ದಾರೆ. ಅದರ ಭಾಗವಾಗಿಯೇ ಮಡಿಕೇರಿಯ ಗೋಣಿಕೊಪ್ಪ, […]
ಪತ್ರಕರ್ತ, ನಟ, ನಿರ್ಮಾಪಕ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ “ಗೌರಿ” ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇಂದ್ರಜಿತ್ ಅವರೆ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮಾರ್ಚ್ 17, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ. ಪುನೀತ್ ಅವರ ಹುಟ್ಟುಹಬ್ಬಕ್ಕೆ “ಗೌರಿ” ತಂಡದಿಂದ ವಿಶೇಷ ಗೀತೆಯೊಂದು ಬರಲಿದೆ. ಈ ವಿಶೇಷ ಗೀತೆಗೆ ಸಮರ್ಜಿತ್ ಲಂಕೇಶ್ ಜೊತೆ ದಕ್ಷಿಣ ಭಾರತದ ಖ್ಯಾತ ನಟಿ ತಾನ್ಯ ಹೋಪ್ ಹೆಜ್ಜೆ ಹಾಕಲಿದ್ದಾರೆ. ಮೋಹನ್ ಈ ಹಾಡಿಗೆ […]
ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಗೆ ದಿನಗಣನೆಯಷ್ಟೇ ಬಾಕಿ ಉಳಿದಿದೆ. ಇದೇ ತಿಂಗಳ 23ರಿಂದ ತಾರೆಯರು ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಅಖಾಡಕ್ಕಿಳಿಯುತ್ತಿದ್ದಾರೆ. ಸ್ಯಾಂಡಲ್ ವುಡ್ ಟು ಬಾಲಿವುಡ್ ತನಕ ಎಲ್ಲಾ ಇಂಡಸ್ಟ್ರೀಯ ಸ್ಟಾರ್ ಗಳು ಸೆಲೆಬ್ರಿಟಿ ಕ್ರಿಕೆಟ್ ಲೀಗ್ 10 ಸೀಸನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಇತ್ತೀಚೆಗೆಷ್ಟೇ ದುಬೈನಲ್ಲಿ ಅದ್ಧೂರಿಯಾಗಿ ಸಿಸಿಎಲ್ ಗೆ ಚಾಲನೆ ಕೊಡಲಾಗಿತ್ತು. ಇದೀಗ ತಂಡಗಳು ಕ್ರಿಕೆಟ್ ಅಭ್ಯಾಸಕ್ಕಿಳಿದಿದ್ದಾರೆ. ಅದರಂತೆ ಕರ್ನಾಟಕ ಬುಲ್ಡೋಜರ್ಸ್ ತಂಡ ಅಭ್ಯಾಸಕ್ಕೂ ಮುನ್ನ ಮಾಧ್ಯಮದರೊಟ್ಟಿಗೆ ಒಂದಿಷ್ಟು ಮಾಹಿತಿ ಹಂಚಿಕೊಂಡಿದೆ. ಇತ್ತೀಚೆಗಷ್ಟೇ ಖಾಸಗಿ […]
ಕನ್ನಡ ಸಿನಿಮಾರಂಗವೀಗ ಬೇರೆಯದ್ದೇ ದಿಕ್ಕಿಗೆ ಹೊರಳಿದೆ. ಸೋಲು ಗೆಲುವಿನಾಚೆ ಲೆಕ್ಕಚಾರ ಹಾಕಿದರೂ ಹೊಸ ಹುರುಪು, ಹೊಸ ಹರಿವು, ಹೊಸ ಆಲೋಚನೆಗಳಿಂದ ಬೇರೆಯದ್ದೇ ಆಯಾಮ ಪಡೆದಿದೆ. ಅದರ ಮುಂದುವರೆದ ಭಾಗವಾಗಿ ಗೋಚರಿಸುತ್ತಿರುವ ಚಿತ್ರ ಫೋಟೋ..ಕಳೆದ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿದಲ್ಲಿ ಪ್ರೇಕ್ಷಕರಿಂದ ಲೈಕ್ ಪಡೆದ ಫೋಟೋ ಸಿನಿಮಾ ಸದ್ಯದಲ್ಲೇ ತೆರೆಗೆ ಬರ್ತಿದೆ. ಕೋವಿಡ್ ಸಮಯದ ಕಥೆಗೀಗ ಜೊತೆಯಾಗಿದ್ದಾರೆ ಬಹುಭಾಷಾ ಕಲಾವಿದ ಪ್ರಕಾಶ್ ರಾಜ್. ಫೋಟೋ ಸಿನಿಮಾವನ್ನು ನಿರ್ದಿಗಂತದ ಮೂಲಕ ಪ್ರಕಾಶ್ ರಾಜ್ ಪ್ರೆಸೆಂಟ್ ಮಾಡುತ್ತಿದ್ದಾರೆ. ಈ ಮೂಲಕ ಹೈದ್ರಾಬಾದ್ ಕರ್ನಾಟಕದ […]
ತೊಂಬತ್ತರ ದಶಕದ ಸಮ್ಮೋಹಕ ಪ್ರೇಮ ಕಥಾನಕ ಹೊಂದಿರುವ ಚಿತ್ರ `ವಿಷ್ಣುಪ್ರಿಯ’. ಈ ಹಿಂದೆ ಪಡ್ಡೆಹುಲಿಯಾಗಿ ಭರವಸೆ ಮೂಡಿಸಿದ್ದ ಶ್ರೇಯಸ್ ಮಂಜು ವಿಷ್ಣುಪ್ರಿಯನಾಗಿ, ವಿಶಿಷ್ಟವಾದ ಪಾತ್ರದ ಮೂಲಕ ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ. ಈ ಚಿತ್ರದ ಚೆಂದದ ಹಾಡೊಂದು ವಾರಗಳ ಹಿಂದೆ ಬಿಡುಗಡೆಗೊಂಡಿತ್ತು. ಇದೀಗ ದಿನದಿಂದ ದಿನಕ್ಕೆ ಆ ಹಾಡು ಟ್ರೆಂಡಿಂಗಿನತ್ತ ದಾಪುಗಾಲಿಡುತ್ತಿದೆ. ಕೇಳಿದಾಕ್ಷಣವೇ ಪ್ರೇಮದೂರಿಗೆ ಕೈ ಹಿಡಿದು ಕರೆದೊಯ್ಯುವ ಛಾತಿ ಹೊಂದಿರುವ ಆ ಪ್ರೇಮಗೀತೆ ಹೆಚ್ಚೆಚ್ಚು ವೀಕ್ಷಣೆ ಪಡೆದುಕೊಳ್ಳುತ್ತಾ, ಮೆಚ್ಚುಗೆ ಗಳಿಸುತ್ತಾ ಮುಂದುವರೆಯುತ್ತಿದೆ. ಚಿಗುರು ಚಿಗುರು ಸಮಯ ಹಿತವಾದ […]
ವಿಭಿನ್ನ ಕಥಾಹಂದರ ಹೊಂದಿರುವ “ರವಿಕೆ ಪ್ರಸಂಗ” ಚಿತ್ರ ಫೆಬ್ರವರಿ 16 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದ್ದು, ಪ್ರಚಾರ ಕಾರ್ಯ ಭರ್ಜರಿಯಾಗಿ ನಡೆಯುತ್ತಿದ್ದು, ಇತ್ತೀಚೆಗೆ ಚಿತ್ರದ ಪ್ರೀ ರಿಲೀಸ್ ಇವೆಂಟನ್ನು ಕನಕಪುರ ರಸ್ತೆಯ ಫೋರಮ್ ಮಾಲ್ ನಲ್ಲಿ ಆಯೋಜಿಸಿತ್ತು. ಸಾವಿರಾರು ಜನರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ಅಲ್ಲಿಗೆ ಬಂದಿದ್ದ ಜನರೆಲ್ಲರೂ ರವಿಕೆ ಪ್ರಸಂಗ ಚಿತ್ರದ ಪೋಸ್ಟರ್ ಹಿಡಿದು ಶುಭಕೋರಿದರು. ಇಡೀ ಚಿತ್ರತಂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿತ್ತು. ನಿರ್ದೇಶಕರಾದ ಸಂತೋಷ್ ಕೊಡೆಂಕೇರಿ ಅವರು, ಕಥೆಗಾರ್ತಿ ಮತ್ತು ಸಂಭಾಷಣಾಗಾರ್ತಿ ಪಾವನ ಸಂತೋಷ್, ಚಿತ್ರದ ನಾಯಕಿಯಾದ […]
ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ಸ್ಮರಿಸಿಕೊಳ್ಳುವ ಈ ವರ್ಷದ ಹಂಪಿ ಉತ್ಸವಕ್ಕೆ ರಾಜ್ಯ ಸರ್ಕಾರ ಮುಹೂರ್ತ ನಿಗಧಿ ಮಾಡಿದೆ. ಇದೇ ತಿಂಗಳ 4ರಂದು ಮೂರು ದಿನಗಳ ಹಂಪಿ ಉತ್ಸವಕ್ಕೆ ಚಾಲನೆ ಸಿಗಲಿದೆ. ನಾನಾ ಪ್ರಕಾರಗಳ ಕಲಾ ಪ್ರದರ್ಶನ, ಥರ ಥರದ ಕಾರ್ಯಕ್ರಮಗಳು ಈ ಉತ್ಸವದ ಪ್ರಧಾನ ಆಕರ್ಷಣೆ. ಇಷ್ಟೂ ವರ್ಷಗಳಲ್ಲಿ ಕನ್ನಡ ಚಿತ್ರರಂಗದ ಅನೇಕ ನಟ ನಟಿಯರು ಈ ಉತ್ಸವದಲ್ಲಿ ಭಾಗಿಯಾಗಿ ಮೆರುಗು ನೀಡಿದ್ದಾರೆ. ಈ ಬಾರಿ ಅಂಥಾದ್ದೊಂದು ಸುವರ್ಣಾವಕಾಶ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್ […]
ದೃಷ್ಟಿ ಮೀಡಿಯಾ ಪ್ರೊಡಕ್ಷನ್ ನಡಿ ತಯಾರಾದ ಸಂತೋಷ್ ಕೊಡೆಂಕೇರಿ ನಿರ್ದೇಶನದ ರವಿಕೆ ಪ್ರಸಂಗ ಸಿನಿಮಾವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಿ ಯು-ಎ ಸರ್ಟಿಫಿಕೇಟ್ ನೀಡಿದೆ. ರವಿಕೆ ಪ್ರಸಂಗ ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆಗೊಂಡು ಜನರಿಂದ ಮೆಚ್ಚುಗೆ ಗಳಿಸಿದೆ. ಸಿನಿಮಾ ಫೆಬ್ರವರಿ 16 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ ‘ರವಿಕೆ ಪ್ರಸಂಗ’. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸರ್ ಮತ್ತು ಟ್ರೈಲರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ರವಿಕೆ […]
ಸೂರ್ಯ ವಸಿಷ್ಠ ನಿರ್ದೇಶನದ `ಸಾರಾಂಶ’ ಚಿತ್ರದ ಮತ್ತೊಂದು ವೀಡಿಯೋ ಸಾಂಗ್ ಬಿಡುಗಡೆಗೊಂಡಿದೆ. ಸಾರಾಂಶ ಎಂಬುದು ವಿಶೇಷ ಕಥಾ ಹಂದರದೊಳಗೆ ನಾನಾ ಬೆರಗುಗಳನ್ನು ಬಚ್ಚಿಟ್ಟುಕೊಂಡಿರುವ ಸಿನಿಮಾ ಎಂಬ ಸೂಚನೆ ಈ ಹಿಂದೆಯೇ ಸಿಕ್ಕಿತ್ತು. ಅದೀಗ ಈ ಹಾಡಿನ ಮೂಲಕ ಸಮ್ಮೋಹಕವಾಗಿ ಸಾಬೀತಾಗಿ ಬಿಟ್ಟಿದೆ. ಒಟ್ಟಾರೆ ಸಿನಿಮಾದ ಇಂಚಿಂಚನ್ನೂ ಹೊಸತನದೊಂದಿಗೆ ಸಿಂಗರಿಸಬೇಕೆಂಬಂಥಾ ತಪನೆ ಹೊಂದಿರುವವರು ಸೂರ್ಯ ವಸಿಷ್ಠ. ಅದಕ್ಕೆ ಉದಿತ್ ಹರಿತಾಸ್ ರಂಥಾ ಸಂಗೀತ ನಿರ್ದೇಶಕರ ಸಾಥ್ ಸಿಕ್ಕಿರೋದರಿಂದಾಗಿ ಸಾರಾಂಶದ ನಶೆಯ ನಕಾಶೆ ಚೆಂದದ ಹಾಡಿನ ಮೂಲಕ ಪಸರಿಸುವಂತಾಗಿದೆ. ನಶೆಯೋ […]
ಅಯೋಧ್ಯೆಯಲ್ಲಿ ಶ್ರೀರಾಮಚಂದ್ರ ಮಹಾಪ್ರಭುಗಳ ಸಂಭ್ರಮವಾದರೆ ಬೆಂಗಳೂರಲ್ಲಿ ಪಟಾಲಂ ಸಂಭ್ರಮ… ಆ ದಿನ ಇಡೀ ಭಾರತೀಯರು ಸಂಭ್ರಮದಲ್ಲಿದ್ದರು. ಸುಮಾರು ವರ್ಷಗಳ ಸುಧೀರ್ಘ ಕಾಯುವಿಕೆಗೆ ಉತ್ತರ ಸಿಕ್ಕ ದಿನ. ಮರ್ಯಾದ ಪುರುಷೋತ್ತಮ ಶ್ರೀರಾಮಚಂದ್ರ ಮಹಾಪ್ರಭುಗಳಿಗೆ ಅಯೋಧ್ಯೆಯಲ್ಲಿ ಮಹಾ ಸಂಭ್ರಮವಾದರೆ, ಬೆಂಗಳೂರಲ್ಲೂ ಸಹ ಒಂದು ಸಂಭ್ರಮದ ವಾತಾವರಣ… ರಾಜಧಾನಿ ಎಂಬ ಚೆಂದದ ಸಿನಿಮಾವನ್ನು ನಿರ್ದೇಶನ ಮಾಡಿದ್ದ ರಘು ಈಗ ಎಸ್ ಎಲ್ ಭೈರವ್ ಆಗಿ ಹೆಸರು ಬದಲಿಸಿಕೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರ ರಾಜಧಾನಿ ಚಿತ್ರವನ್ನು ನಿರ್ದೇಶನ ಮಾಡಿದ್ದ ರಘು ಜಯ […]