ಕರಾವಳಿ ಸೀಮೆಯಿಂದ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಅನೇಕರು ಆಗಮಿಸಿದ್ದಾರೆ. ಒಂದಷ್ಟು ಗೆಲುವನ್ನೂ ದಾಖಲಿಸಿದ್ದಾರೆ. ಇದೀಗ `ಕಲ್ಜಿಗ’ ಎಂಬ ಚಿತ್ರದ ಮೂಲಕ ಮತ್ತೊಂದು ತಂಡ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಶೀರ್ಷಿಕೆಯಲ್ಲಿಯೇ ಕೌತುಕ ಬೆರೆತ ಸೆಳೆತವೊಂದನ್ನು ಬಚ್ಚಿಟ್ಟುಕೊಂಡಂತಿರುವ ಈ ಚಿತ್ರದ ಟೈಟಲ್ ಹಾಗೂ ಪೋಸ್ಟರ್ ಇದೀಗ ಅನಾವಣಗೊಂಡಿದೆ. ಚಿತ್ರತಂಡ, ನಾನಾ ಕ್ಷೇತ್ರದ ಗಣ್ಯರು ಮತ್ತು ನಾದಬ್ರಹ್ಮ ಹಂಸಲೇಖ ಸಮ್ಮುಖದಲ್ಲಿ ಕಲ್ಜಿಗದ ಟೈಟಲ್ ಹಾಗೂ ಪೋಸ್ಟರ್ ಬಿಡುಗಡೆಗೊಂಡಿದೆ. ಹಿಮಾನಿ ಫಿಲಂಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿರುವ ಕಲ್ಜಿಗ ಚಿತ್ರವನ್ನು ಸುಮನ್ ಸುವರ್ಣ ನಿರ್ದೇಶನ […]
ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಹ ಕೆ.ಜಿ.ಎಫ್, ಕಾಂತಾರ, ರಾಜಕುಮಾರ ದಂತಹ ಯಶಸ್ವಿ ಚಿತ್ರಗಳ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಲಾಂಛದಡಿಯಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಮೊದಲ ಚಿತ್ರ “ಯುವ” ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಮೂಲಕ ಹೊಂಬಾಳೆ ಫಿಲಂಸ್ ನ ಗೆಲುವಿನ ಓಟಕ್ಕೆ ಮತ್ತೊಂದು ಚಿತ್ರ ಸೇರ್ಪಡೆಯಾಗಿದೆ. ಈ ಯಶಸ್ಸಿನ ಸಂಭ್ರಮವನ್ನು ಸಂಭ್ರಮಿಸಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ರಾಜ್ಯದ ಜನತೆ “ಯುವ” ಚಿತ್ರವನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. […]
ಕಮಲ್ ಹಾಸನ್ ನಟನೆಯ ಬಹುನಿರೀಕ್ಷಿತ ಸಿನಿಮಾ ಇಂಡಿಯನ್ -2. ಜೂನ್ ನಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ. ಹೀಗಾಗಿ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿದೆ. ಸದ್ಯ ಇಂಡಿಯನ್ 2 ಶೂಟಿಂಗ್ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಾರಂಭವಾಗಿವೆ. ಇಂಡಿಯನ್ ಸೀಕ್ವೆಲ್ ಗೆ ಎಸ್ ಶಂಕರ್ ಆಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರವು 1996 ರ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗವಾಗಿದೆ. ಚಿತ್ರವನ್ನು ಥಿಯೇಟರ್ಗಳಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ […]
ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ‘ಪುಕ್ಸಟ್ಟೆ ಪೈಸ’ ಸಿನಿಮಾ ಇದೇ ಏ. 19 ರಂದು ತೆರೆಗೆ ಬರುತ್ತಿದೆ. ಸಿನಿಮಾ ಪ್ರಚಾರದ ಭಾಗವಾಗಿ ಈಗಾಗಲೇ ‘ಪುಕ್ಸಟ್ಟೆ ಪೈಸ’ ಸಿನಿಮಾದ ಟ್ರೇಲರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡಿರುವ ಚಿತ್ರತಂಡ, ಇತ್ತೀಚೆಗೆ ಮಾಧ್ಯಮಗಳ ಮುಂದೆ ಬಂದಿದ್ದು, ಈ ವೇಳೆ ಸಿನಿಮಾದ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿ ನೀಡಿತು. ‘ಇಂಚರ ಪಿಕ್ಚರ್ಸ್’ ಬ್ಯಾನರಿನಲ್ಲಿ ಮಧುಸೂಧನ ಎ. ಎಸ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಿಸಿ, ನಿರ್ದೇಶಿಸಿರುವ ‘ಪುಕ್ಸಟ್ಟೆ ಪೈಸ’ ಸಿನಿಮಾದಲ್ಲಿ ಭರತ್ […]
ಯು ಟರ್ನ್ 2 ಖ್ಯಾತಿಯ ಚಂದ್ರು ಓಬಯ್ಯ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದಂಥ ಜನಪ್ರಿಯ ಹಾಡಿನ ಟೈಟಲ್ ಇಟ್ಟುಕೊಂಡು ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದಾರೆ. ತಮ್ಮ ಹೊಸ ಸಿನಿಮಾದ ಶೀರ್ಷಿಕೆಯನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಿಸಿದ್ದಾರೆ. ಅದರ ಹೆಸರು “ಕರಿಮಣಿ ಮಾಲಿಕ ನೀನಲ್ಲ”. ಮ್ಯೂಸಿಕ್ ಅಡ್ಡಾದ ಲೋಕೇಶ್ ಅವರು ಟೈಟಲ್ ಲಾಂಚ್ ಮಾಡಿದರು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಂದ್ರು ಓಬಯ್ಯ ‘ ಯುಟರ್ನ್ 2 ಆದ ನಂತರ ರಾಮು ಅಂಡ್ ರಾಮು ಚಿತ್ರ ಮಾಡಿದ್ದೆ. ಅದು ಸೆನ್ಸಾರ್ […]
ಕೆ.ವಿ.ಸತ್ಯಪ್ರಕಾಶ್ ನಿರ್ಮಾಣದ ಈ ಚಿತ್ರಕ್ಕೆ ಜಡೇಶ ಕೆ ಹಂಪಿ ನಿರ್ದೇಶನ . ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸಿದ್ದ “ಸಾರಥಿ” ಚಿತ್ರವನ್ನು ನಿರ್ಮಿಸಿದ್ದ ಕೆ.ವಿ.ಸತ್ಯಪ್ರಕಾಶ್ ಅವರು ಹನ್ನೆರಡು ವರ್ಷಗಳ ನಂತರ “ಸಾರಥಿ ಫಿಲಂಸ್” ಮೂಲಕ ನೂತನ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ನಿರ್ಮಾಣಕ್ಕೆ ಸತ್ಯಪ್ರಕಾಶ್ ಅವರ ಪುತ್ರ ಸೂರಜ್ ಗೌಡ ಅವರು ಸಾಥ್ ನೀಡುತ್ತಿದ್ದಾರೆ. “ಜಂಟಲ್ ಮ್ಯಾನ್”, ” ಗುರುಶಿಷ್ಯರು” ಚಿತ್ರಗಳ ನಿರ್ದೇಶಕ ಹಾಗೂ “ಕಾಟೇರ” ಚಿತ್ರದ ಲೇಖಕ ಜಡೇಶ ಕೆ ಹಂಪಿ ನಿರ್ದೇಶನದ ಹಾಗೂ ದುನಿಯಾ […]
ಶೀರ್ಷಿಕೆಯಿಂದಲೇ ಕುತೂಹಲ ಮೂಡಿಸಿದೆ ಅನಿಲ್ ಕುಮಾರ್ ನಿರ್ದೇಶನದ ಈ ಚಿತ್ರ . “ಬನಾರಸ್” ಚಿತ್ರದ ನಂತರ ಝೈದ್ ಖಾನ್ ಯಾವ ಚಿತ್ರದಲ್ಲಿ ನಟಿಸುತ್ತಾರೆ ಎಂಬ ಕಾತುರಕ್ಕೆ ಕೆಲವು ದಿನಗಳ ಹಿಂದಷ್ಟೇ ತೆರೆ ಬಿದ್ದಿತ್ತು. ಈ ವರ್ಷದ ಭರ್ಜರಿ ಹಿಟ್ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದಲ್ಲಿ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಸುದ್ದಿ ಅಧಿಕೃತವಾಗಿ ಹೊರಬಂತು. ಈ ವಿಷಯ ತಿಳಿಸುವ ಚಿತ್ರದ ಪೋಸ್ಟರ್ ಸಹ ಎಲ್ಲರ ಗಮನ ಸೆಳೆದಿತ್ತು. ಅಂದಿನಿಂದಲೂ ಚಿತ್ರದ ಶೀರ್ಷಿಕೆ ಏನಿರಬಹುದೆಂಬ? ಕುತೂಹಲ […]
https://cinibuzz.in/bademiyan-chotemiyan/
https://cinibuzz.in/family-pack-spec…om-the-film-team/
ತೆಲುಗು ನಟ ನಿಖಿಲ್ ಸಿದ್ದಾರ್ಥ್ ನಟಿಸುತ್ತಿರುವ ಕ್ರೇಜಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಸ್ವಯಂಭು ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಸಹಸ್ರಮಾನಗಳ ಹಿಂದಿನ ಕಥೆಯನ್ನೊಳಗೊಂಡಿರುವ ಈ ಚಿತ್ರದ ಮೂಲಕ ವಜ್ರಕಾಯದ ಪಟಾಕ ಕಂಬ್ಯಾಕ್ ಮಾಡುತ್ತಿದ್ದಾರೆ. ಕನ್ನಡತಿ ನಭಾ ನಟೇಶ್ಗೆ 2023ರಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ವೇಳೆ ಅವರು ಸರ್ಜರಿಗೂ ಒಳಗಾಗಬೇಕಾಯಿತು. ಈಗ ಸಂಪೂರ್ಣ ಚೇತರಿಕೆ ಕಂಡಿರುವ ಶೃಂಗೇರಿ ಸುಂದರಿ ಸ್ವಯಂಭು ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡುತ್ತಿದ್ದಾರೆ. ಸ್ವಯಂಭು ಶೂಟಿಂಗ್ ಅಖಾಡಕ್ಕೆ ನಭಾ […]