ಸ್ನೇಹಿತನಿಂದ ಸ್ನೇಹಿತನಿಗಾಗಿ ನಿರ್ಮಾಣವಾಗಿರುವ ಈ ಚಿತ್ರ ಅಕ್ಟೋಬರ್ 14 ರಂದು ಬಿಡುಗಡೆ. ಸಚಿನ್ ಧನಪಾಲ್ ಹಾಗೂ ಅದಿತಿ ಪ್ರಭುದೇವ ನಾಯಕ, ನಾಯಕಿಯಾಗಿ ನಟಿಸಿರುವ “ಚಾಂಪಿಯನ್” ಚಿತ್ರದ ಟ್ರೇಲರ್ ಡೈನಾಮಿಕ್ ಸ್ಟಾರ್ ದೇವರಾಜ್ ಅವರಿಂದ ಇತ್ತೀಚಿಗೆ ಬಿಡುಗಡೆಯಾಯಿತು. ಚಿತ್ರ ಅಕ್ಟೋಬರ್ 14 ರಂದು ತೆರೆಗೆ ಬರುತ್ತಿದೆ. ನಾನು ಹದಿನಾಲ್ಕು ವರ್ಷಗಳ ಹಿಂದೆ ನನ್ನ ಸ್ನೇಹಿತ ಸಚಿನ್ ಧನಪಾಲ್ ಗೆ ಹೇಳಿದ್ದೆ. ನನಗೇನಾದರೂ ತುಂಬಾ ದುಡ್ಡು ಬಂದರೆ, ನಿನ್ನನ್ನು ಸಿನಿಮಾ ಹೀರೋ ಮಾಡುತ್ತೀನಿ ಎಂದು. ಈಗ ಆ ಮಾತು ನಿಜವಾಗಿದೆ. […]
ಭಾರತೀಯ ಚಿತ್ರರಂಗದಲ್ಲಿ ತಮಿಳು ನಟ ವಿಜಯ್ ಸೇತುಪತಿ ಬಿಟ್ಟರೆ ಬಹುಶಃ ಅತೀ ಹೆಚ್ಚು ಬ್ಯುಸೀ ಇರುವ ನಟ ಅಂದರೆ ಅದು ಡಾಲಿ ಧನಂಜಯ ಇರಬೇಕು! ಅದ್ಯಾವ ಘಳಿಗೆಯಲ್ಲಿ ದುನಿಯಾ ಸೂರಿ ಟಗರು ಅನ್ನೋ ಸಿನಿಮಾಗೆ ʻಡಾಲಿʼ ಎನ್ನುವ ಪಾತ್ರವನ್ನು ಬರೆದರೋ? ಅದಕ್ಕೆ ಧನಂಜಯಾನೇ ಬೇಕು ಅಂತಾ ಚಾಯ್ಸ್ ಮಾಡಿದರೋ ಗೊತ್ತಿಲ್ಲ. ನುಗ್ಗಿಬಂದ ʻಟಗರುʼ ಜೊತೆ ಡಾಲಿಯ ನಸೀಬೇ ಬದಲಾಗಿಹೋಯ್ತು. ಕನ್ನಡ ಮಾತ್ರವಲ್ಲದೆ, ನೆರೆಯ ತಮಿಳು, ತೆಲುಗು ಚಿತ್ರರಂಗದಿಂದಲೂ ಅವಕಾಶಗಳು ಅರಸಿಬಂದವು. ಟಗರು ಬರುವ ಮುಂಚೆ ಇದೇ ಧನಂಜಯ […]