ತೀರಾ ಅಪರೂಪವೆಂಬಂಥಾ ಭಾವವೊಂದನ್ನು ಕೇಳುಗರೆಲ್ಲರಲ್ಲಿ ಮೂಡಿಸುವ ನಿಟ್ಟಿನಲ್ಲಿ `ಸಾರಾಂಶ’ ಚಿತ್ರದ ಹಾಡುಗಳು ಈಗಾಗಲೇ ಗೆದ್ದಿವೆ. ಇಂಥಾ ಹಾಡಿನ ಮೂಲಕವೇ ಒಂದಿಡೀ ಸಿನಿಮಾದ ಆಂತರ್ಯದ ಬಗ್ಗೆ ಕುತೂಹಲವೂ ಮೂಡಿಕೊಂಡಿದೆ. ಮೆಲುವಾಗಿ ತೇಲಿ ಬಂದು ನಾನಾ ಭಾವನೆಗಳನ್ನು ಮೊಗೆದು ತಂದು ಮನಸಿಗೆ ತುಂಬುವ ಶೈಲಿಯಲ್ಲಿ ಸಂಗೀತ ನಿರ್ದೇಶಕ ಉದಿತ್ ಹರಿತಾಸ್ ಅಕ್ಷರಶಃ ಮೋಡಿ ಮಾಡಿದ್ದಾರೆ. ಇದೀಗ ನಿರ್ದೇಶಕ ಸೂರ್ಯ ವಸಿಷ್ಠ ಹಾಗೂ ಉದಿತ್ ಸಹಯೋಗದ ಮತ್ತೊಂದು ಮೆಲೋಡಿಯಸ್ ಹಾಡು ಬಿಡುಗಡೆಗೊಂಡಿದೆ. ತೀರದಾಚೆಗೆ ಹಾರಿ ಹೋಗುವಾಸೆ ಅಂತ ಶುರುವಾಗುವ ಈ ಹಾಡು […]
ವಿಭಿನ್ನ ಕಥಾಹಂದರ ಹೊಂದಿರುವ “ರವಿಕೆ ಪ್ರಸಂಗ” ಚಿತ್ರ ಫೆಬ್ರವರಿ 16 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದ್ದು, ಪ್ರಚಾರ ಕಾರ್ಯ ಭರ್ಜರಿಯಾಗಿ ನಡೆಯುತ್ತಿದ್ದು, ಇತ್ತೀಚೆಗೆ ಚಿತ್ರದ ಪ್ರೀ ರಿಲೀಸ್ ಇವೆಂಟನ್ನು ಕನಕಪುರ ರಸ್ತೆಯ ಫೋರಮ್ ಮಾಲ್ ನಲ್ಲಿ ಆಯೋಜಿಸಿತ್ತು. ಸಾವಿರಾರು ಜನರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ಅಲ್ಲಿಗೆ ಬಂದಿದ್ದ ಜನರೆಲ್ಲರೂ ರವಿಕೆ ಪ್ರಸಂಗ ಚಿತ್ರದ ಪೋಸ್ಟರ್ ಹಿಡಿದು ಶುಭಕೋರಿದರು. ಇಡೀ ಚಿತ್ರತಂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿತ್ತು. ನಿರ್ದೇಶಕರಾದ ಸಂತೋಷ್ ಕೊಡೆಂಕೇರಿ ಅವರು, ಕಥೆಗಾರ್ತಿ ಮತ್ತು ಸಂಭಾಷಣಾಗಾರ್ತಿ ಪಾವನ ಸಂತೋಷ್, ಚಿತ್ರದ ನಾಯಕಿಯಾದ […]
ದೃಷ್ಟಿ ಮೀಡಿಯಾ ಪ್ರೊಡಕ್ಷನ್ ನಡಿ ತಯಾರಾದ ಸಂತೋಷ್ ಕೊಡೆಂಕೇರಿ ನಿರ್ದೇಶನದ ರವಿಕೆ ಪ್ರಸಂಗ ಸಿನಿಮಾವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಿ ಯು-ಎ ಸರ್ಟಿಫಿಕೇಟ್ ನೀಡಿದೆ. ರವಿಕೆ ಪ್ರಸಂಗ ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆಗೊಂಡು ಜನರಿಂದ ಮೆಚ್ಚುಗೆ ಗಳಿಸಿದೆ. ಸಿನಿಮಾ ಫೆಬ್ರವರಿ 16 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ ‘ರವಿಕೆ ಪ್ರಸಂಗ’. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸರ್ ಮತ್ತು ಟ್ರೈಲರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ರವಿಕೆ […]
ಮಲಯಾಳಂ ಚಿತ್ರರಂಗದಲ್ಲಿ ಹೀರೋಗಿರಿಯ ಸಿನಿಮಾಗಳಿಗೆ ಕಟ್ಟು ಬೀಳದೆ ತಮ್ಮದೇ ಆದ ಮಾದರಿಯಲ್ಲಿ ಸಿನಿಮಾಗಳನ್ನು ಮಾಡುತ್ತಿರುವ ಸ್ಟಾರ್ ನಟ ಟೋವಿನೊ ಥಾಮಸ್.. ಒಂದರ ಮೇಲೊಂದು ಹಿಟ್ ಸಿನಿಮಾ ನೀಡುವ ಜೊತೆಗೆ ಅಭಿಮಾನಿಗಳನ್ನೂ ಸಹ ಸಂಪಾದಿಸುತ್ತಾ ಸಾಗುತ್ತಿರುವ ಈ ತಾರೆಗಿಂದು ಜನ್ಮದಿನದ ಸಂಭ್ರಮ. ಟೋವಿನೋ ಥಾಮಸ್ ಹುಟ್ಟಹಬ್ಬಕ್ಕೆ ARM ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಲಾಗಿದೆ. AMR ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಜಿತಿಲ್ ಲಾಲ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮ್ಯಾಜಿಕ್ ಫ್ರೇಮ್ಸ್ ಮತ್ತು […]
ಮುಗಿಲ್ ಪೇಟೆ ಡೈರೆಕ್ಷರ್ ಹೊಸ ಸಿನಿಮಾಗೆ ಟೈಟಲ್ ಫಿಕ್ಸ್..ಸಂಕ್ರಾಂತಿ ಹಬ್ಬಕ್ಕೆ ‘ದೇವನಾಂಪ್ರಿಯ’ ಫಸ್ಟ್ ಲುಕ್ ರಿಲೀಸ್. ಜೋಡಿಹಕ್ಕಿ ಹೀರೋ ತಾಂಡವ್ ಈಗ ‘ದೇವನಾಂಪ್ರಿಯ’..ಸಂಕ್ರಾಂತಿ ಹಬ್ಬಕ್ಕೆ ಮುಗಿಲ್ ಪೇಟೆ ಡೈರೆಕ್ಟರ್ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್. ‘ಅಡಚಣೆಗಾಗಿ ಕ್ಷಮಿಸಿ’ ಮತ್ತು ‘ಮುಗಿಲ್ ಪೇಟೆ’ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ಭರತ್ ಎಸ್. ನಾವುಂದ ಈಗ 3ನೇ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾದ ಮೂಲಕ ‘ಜೋಡಿಹಕ್ಕಿ’ ಧಾರಾವಾಹಿ ಖ್ಯಾತಿಯ ನಟ ತಾಂಡವ್ ರಾಮ್ ಅವರು ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ […]
ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ರುದ್ರಶಿವ ನಿರ್ದೇಶನದ `ಶಭ್ಬಾಷ್’ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಅವರು, ತಮ್ಮ ಶಿಷ್ಯನ ಚಿತ್ರಕ್ಕೆ ಕ್ಲಾಪ್ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಿದ್ದಾರೆ. ಶ್ರೀ ಬಂಡೆ ಮಹಾಕಾಳಿ ಅಮ್ಮನವರ ಸನ್ನಿಧಾನದಲ್ಲಿ ಈ ಮುಹೂರ್ತ ಸಮಾರಂಭ ಅರ್ಥವತ್ತಾಗಿ ನೆರವೇರಿದೆ. ಇದೇ ಸಂದರ್ಭದಲ್ಲಿ ` ಶಭ್ಬಾಷ್’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಕೂಡಾ ಅನಾವರಣಗೊಂಡಿದೆ. ಹೀಗೆ ಮುಹೂರ್ತ ಸಮಾರಂಭ ಸಾಂಘವಾಗಿ ನೆರವೇರಿದ […]
ರಾಷ್ಟ್ರ ಪ್ರಶಸ್ತಿ ವಿಜೇತ (National award winning) ನಿರ್ದೇಶಕ ಬ್ಲೆಸ್ಸಿ (Director blessy) ಸಾರಥ್ಯದ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಮತ್ತು ಅಮಲಾ ಪಾಲ್ (Amala Paul) ನಟನೆಯ ವಿಭಿನ್ನ ಮತ್ತು ಬಹು ನಿರೀಕ್ಷೆಯ ಚಿತ್ರ ಆಡು ಜೀವಿತಂ (Aadujeevitham Movie ) `ದಿ ಗೋಟ್ ಲೈಫ್’ ಸಿನಿಮಾ 2024ರ ಏಪ್ರಿಲ್ 10ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇದೀಗ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನ್ನು ಪ್ರಭಾಸ್ ಅನಾವರಣಗೊಳಿಸಿದ್ದಾರೆ. ಪ್ರಭಾಸ್ ಹಂಚಿಕೊಂಡಿರುವ ಫಸ್ಟ್ ಲುಕ್ನಲ್ಲಿ ಪೃಥ್ವಿರಾಜ್ ಉದ್ದ […]
ನಾನು ಮತ್ತು ಗುಂಡ ೨ ಟೈಟಲ್ ಟೀಸರ್ ದ್ರುವಸರ್ಜಾ ಬಿಡುಗಡೆ ನಾಯಿ ಹಾಗೂ ಅದರ ಮಾಲೀಕ ಗೋವಿಂದೇಗೌಡನ ನಡುವಿನ ಅವಿನಾಭಾವ ಸಂಬಂಧದ ಕಥೆಯನ್ನು ಹೇಳುವ ‘ನಾನು ಮತ್ತು ಗುಂಡ’ ಚಿತ್ರವು ಎರಡು ವರ್ಷಗಳ ಹಿಂದೆ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡಿತ್ತು. ಶಿವರಾಜ್ ಕೆ.ಆರ್. ಪೇಟೆ ನಾಯಕನಾಗಿ ಅಭಿನಯಿಸಿದ್ದ ಆ ಚಿತ್ರಕ್ಕೆ ರಘುಹಾಸನ್ ಆಕ್ಷನ್ ಕಟ್ ಹೇಳಿದ್ದರು. ಈಗ ಅದರ ಮುಂದುವರೆದ ಭಾಗವಾಗಿ “ನಾನು ಮತ್ತು ಗುಂಡ -2” ತಯಾರಾಗುತ್ತಿದ್ದು, ಚಿತ್ರದಲ್ಲಿ ಬಹುತೇಕ ಹಳೆಯ ತಂಡವೇ ಕೆಲಸ ಮಾಡುತ್ತಿದೆ. […]
ಸ್ಯಾಂಡಲ್ ವುಡ್ ಈಗೀಗ ಹೊಸಬರ ಕಾರಣದಿಂದಲೇ ಹೆಚ್ಚು ಸುದ್ದಿಯಾಗುತ್ತಿದೆ. ಹೊಸಬರ ಚಿತ್ರಗಳಲ್ಲಿ ಹೊಸತನದ ತಾಂತ್ರಿಕತೆಯ ಸ್ಪರ್ಶವಿರುತ್ತದೆ. ಅಂತಹ ಸಿನಿಮಾಗಳ ಸಾಲಿಗೆ ಸೇರಲಿರುವ ಮೊತ್ತೊಂದು ಚಿತ್ರವೇ ಬ್ರಹ್ಮರಾಕ್ಷಸ. ಒಬ್ಬ ಲೈಟ್ಮ್ಯಾನ್ ಆಗಿ ಫಿಲಂ ಇಂಡಸ್ಟ್ರಿಗೆ ಬಂದು ಹಲವಾರು ನಿರ್ದೇಶಕರ ಬಳಿ ಕೆಲಸ ಕಲಿತ ಶಂಕರ್.ವಿ. ಮೊದಲಬಾರಿಗೆ ಆ್ಯಕ್ಷನ್ಕಟ್ ಹೇಳಿರುವ ಚಿತ್ರ ಬ್ರಹ್ಮರಾಕ್ಷಸ. ಜ್ಯೋತಿ ಆರ್ಟ್ಸ್ ಮೂಲಕ ಕೆಎಂಪಿ. ಶ್ರೀನಿವಾಸ್ ನಿರ್ಮಿಸಿರುವ ಈ ಚಿತ್ರದಲ್ಲಿ ಅಂಕುಶ್ ಏಕಲವ್ಯ, ಪಲ್ಲವಿಗೌಡ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ಮತೊಂದು ವಿಶಿಷ್ಠ ಪಾತ್ರದಲ್ಲಿ ವೈಜನಾಥ್ ಬಿರಾದಾರ್ […]
ಶೀರ್ಷಿಕೆಯೇ ಸಿನಿಮಾ ಪ್ರೇಕ್ಷಕರಿಗೆ ಮೊದಲ ಆಮಂತ್ರಣ. ಸಿನಿಮಾ ಮೇಕರ್ಗಳು ಅದನ್ನೇ ಗಮನದಲ್ಲಿಟ್ಟುಕೊಂಡು ಏನಾದರೊಂದು ಹೊಸದನ್ನು ನೀಡಬೇಕೆನ್ನುವ ಆಶಯ ನಿರ್ಮಾಪಕರದ್ದು. ಈ ನಡುವೆ ಬಗೆಬಗೆಯ ಶೀರ್ಷಿಕೆಗಳ ಮೂಲಕವೇ ಸಿನಿಮಾಗಳು ತೆರೆಗೆ ಬರ್ತಿವೆ. ಅಂತಹದ್ದೇ ವಿಭಿನ್ನ ಬಗೆಯ ಟೈಟಲ್ ಮೂಲಕ ಗಮನಸೆಳೆದಿರುವ ಚಿತ್ರ ಕ್ಲಾಂತ. ವೈಭವ್ ಪ್ರಶಾಂತ್ ನಿರ್ದೇಶನದ ಕ್ಲಾಂತ ಸಿನಿಮಾದ ಟೀಸರ್ ಈಗಾಗಲೇ ಗಮನಸೆಳೆದಿದೆ. ನಾಯಕ ವಿಘ್ನೇಶ್ ಹಾಗೂ ಸಂಗೀತ ಭಟ್ ಅಭಿನಯ ಎಲ್ಲರಿಗೂ ಮೆಚ್ಚುಗೆಯಾಗಿದೆ. ಅದರಲ್ಲೂ ವಿಘ್ನೇಶ್ ಅವರಂತೂ ಆಕ್ಷನ್ ದೃಶ್ಯಗಳಲ್ಲಿ ಎಲ್ಲರನ್ನೂ ಮೀರಿಸುವಂತೆ ಪವರ್ ಫುಲ್ […]