ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ, ಬಹು ನಿರೀಕ್ಷಿತ ” ದಿಲ್ ಪಸಂದ್” ಚಿತ್ರ ನವೆಂಬರ್ 11ರಂದು ಬಿಡುಗಡೆಯಾಗುತ್ತಿದೆ. ಚಿತ್ರ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಇತ್ತೀಚೆಗೆ ಘೋಷಣೆ ಮಾಡಿದೆ.
ರಶ್ಮಿ ಫಿಲಂಸ್ ಲಾಂಛನದಲ್ಲಿ ಸುಮಂತ್ ಕ್ರಾಂತಿ ಅವರು ನಿರ್ಮಿಸಿರುವ ಈ ಚಿತ್ರವನ್ನು ಶಿವತೇಜಸ್ ನಿರ್ದೇಶಿಸಿದ್ದಾರೆ. ಪ್ರೇಮಕಥೆಯೊಂದಿಗೆ, ಕೌಟುಂಬಿಕ ಕಥಾಹಂದರವನ್ನು ಈ ಚಿತ್ರ ಹೊಂದಿದೆ. ಬೆಂಗಳೂರಿನಲ್ಲಿ ಬಹುತೇಕ ಚಿತ್ರೀಕರಣ ನಡೆದಿದೆ. ಚಿತ್ರೀಕರಣ ನಂತರದ ಚಟುವಟಿಕೆಗಳು ಬಿರುಸಿನಿಂದ ಸಾಗುತ್ತಿದ್ದು, ಮಾಸಾಂತ್ಯಕ್ಕೆ ಟೀಸರ್ ಬಿಡುಗಡೆಯಾಗುವ ಸಾಧ್ಯತೆಯಿದೆ.
ನಾಲ್ಕು ಸುಮಧುರ ಹಾಡುಗಳಿಗೆ ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನವಿದೆ. ಶೇಖರ್ ಚಂದ್ರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ವಿನೋದ್ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯಾಗಿ ನಿಶ್ವಿಕಾ ನಾಯ್ಡು ಅಭಿನಯಿಸಿದ್ದಾರೆ. ಮೇಘ ಶೆಟ್ಟಿ, ಸಾಧು ಕೋಕಿಲ, ರಂಗಾಯಣ ರಘು, ತಬಲ ನಾಣಿ, ಗಿರಿ, ಅರುಣಾ ಬಾಲರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
No Comment! Be the first one.