ಕನ್ನಡ ಚಿತ್ರರಂಗದಲ್ಲಿ ಭರವಸೆ ನಾಯಕನಾಗಿ ಗುರುತಿಸಿಕೊಂಡಿರುವ ಶ್ರೀ ಮಹಾದೇವ್ ಹಾಗೂ ʻಕನ್ನಡ ಚಿತ್ರರಂಗದ ಮಹಾಲಕ್ಷ್ಮಿʼ ಅದಿತಿ ಪ್ರಭುದೇವ ನಟನೆಯ ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ನಮ್ ಗಣಿ ಬಿಕಾಂ ಪಾಸ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ನಾಯಕ ಮತ್ತು ನಿರ್ದೇಶಕನಾಗಿ ಪಾದರ್ಪಣೆ ಮಾಡಿದ್ದ ನಟ ಅಭಿಷೇಕ್ ಶೆಟ್ಟಿ ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

ನಟಿ ಮೇಘನಾ ರಾಜ್ ಟ್ರೇಲರ್ ಲಾಂಚ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ‘ಗಜಾನನ ಅಂಡ್ ಗ್ಯಾಂಗ್’ ಟ್ರೇಲರ್ ಅನಾವರಣ ಮಾಡಿದರು. ಬಳಿಕ ಮೇಘನಾ ರಾಜ್, ಅದಿತಿಯನ್ನು ಹಾಡಿ ಹೊಗಳಿದ ಮೇಘನಾ ನನ್ನ  ಫೇವರೇಟ್ ಹೀರೋಯಿನ್. ಶ್ರೀ ಮಹದೇವ್ ಜೊತೆ ಇರುವುದೆಲ್ಲವ ಬಿಟ್ಟು ಸಿನಿಮಾದಲ್ಲಿ ನಟಿಸಿದ್ದೇನೆ. ಆ ಸ್ನೇಹದ ಕಾರಣಕ್ಕಾಗಿ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದೇನೆ. ಟ್ರೇಲರ್ ಅದ್ಭುತವಾಗಿ ಮೂಡಿ ಬಂದಿದ್ದು, ಸಿನಿಮಾ ಯಶಸ್ಸು ಸಿಗಲಿ ಎಂದು ಹಾರೈಸಿದರು.

‘ಗಜಾನನ ಅಂಡ್ ಗ್ಯಾಂಗ್’ ಟೈಟಲೇ ಹೇಳುವಂತೆ ಕಾಲೇಜ್ ಕಥೆಯಾಧಾರಿತ ಸಿನಿಮಾ. ಕಾಮಿಡಿ, ಸೆಂಟಿಮೆಂಟ್ ಕೂಡ ಸಿನಿಮಾದಲ್ಲಿದೆ. ಸಿನಿಮಾದಲ್ಲಿ ಶ್ರೀ ಮಹಾದೇವ್ ಎರಡು ಶೇಡ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಗಜ ಎಂಬ ಪಾತ್ರದಲ್ಲಿ ಶ್ರೀ ನಟಿಸಿದ್ರೆ, ಅದಿತಿ ಪ್ರಭುದೇವ ಮಿಡಲ್ ಕ್ಲಾಸ್ ಕಾಲೇಜು ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ.

ನಿರ್ದೇಶಕ ಅಭಿಷೇಕ್ ಶೆಟ್ಟಿ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಬೃಂದಾವನ್ ಎಂಟರ್ ಪ್ರೈಸಸ್ ಅಡಿಯಲ್ಲಿ ಯು ಎಸ್ ನಾಗೇಶ್ ಕುಮಾರ್ ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾಕ್ಕೆ ಬಂಡವಾಳ ಹೂಡಿದ್ದು, ಪ್ರದ್ಯುತನ್ ಮ್ಯೂಸಿಕ್. ಉದಯ ಲೀಲಾ ಕ್ಯಾಮೆರಾ ವರ್ಕ್, ವಿಜೆಟ್ ಚಂದ್ರ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನವಿದೆ. ಉಳಿದಂತೆ ಬಿಗ್ ಬಾಸ್ ಖ್ಯಾತಿಯ ರಘು ಗೌಡ, ಚೇತನ್ ದುರ್ಗ, ನಾಟ್ಯ ರಂಗ, ಅಶ್ವಿನ್ ಹಾಸನ್ ಹಾಗೂ ಶಮಂತ್ ಯಾನೆ ಬ್ರೋ ಗೌಡ ಕೂಡ ನಟಿಸಿದ್ದಾರೆ.

ARUN KUMAR G
ARUN KUMAR G Senior Film Journalist GAURI LANKESH PATRIKE, KARMAVEERA and others

ಡಿಸೆಂಬರ್ 31 ರಂದು “ಅರ್ಜುನ್ ಗೌಡ” ಆಗಮನ!

Previous article

ಲವರ್‌ ಬಾಯ್‌ ರೈಡರ್!

Next article

You may also like

Comments

Leave a reply

Your email address will not be published.