ವಸಿಷ್ಠ ಸಿಂಹ ನಾಯಕನಾಗಿ ನಟಿಸುತ್ತಿರುವ ಹೊಸ ಸಿನಿಮಾ ಗ್ಯಾಂಗ್ ಸ್ಟರ್. ಬಾಲಾಜಿ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದು, ಶ್ರೀ ಲಕ್ಷ್ಮೀನರಸಿಂಹ ಎಂಟರ್ ಪ್ರೈಸಸ್ ಲಾಂಛನದಲ್ಲಿ ಸಿ. ಎ. ವರದರಾಜ್ ನಿರ್ಮಾಣ ಮಾಡಿದ್ದಾರೆ.
ನಕ್ಸಲೈಟ್ ಬಗೆಗಿನ ನೈಜ ಕಥಾ ಹಂದರ ಹೊಂದಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದ್ದು, ಈಗಾಗಲೇ ಚಿತ್ರೀಕರಣವನ್ನು ಮುಗಿಸಿಕೊಂಡಿದೆ. ವಸಿಷ್ಠ ಸಿಂಹ ಅವರಿಗೆ ನಾಯಕಿಯಾಗಿ ಯಜ್ಞ ಶೆಟ್ಟಿ ಅಭಿನಯಿಸಿದ್ದು, ಸಂಯುಕ್ತ ಹೊರನಾಡು, ಅರವಿಂದರಾವ್ ಪ್ರಮುಖ ಪಾತ್ರದಲ್ಲಿದ್ದಾರೆ. ಇನ್ನು ವರುಣ್ ಕುಮಾರ್ ಸಂಗೀತ, ಸುರೇಶ್ ಭಾರ್ಗವ್ ಛಾಯಾಗ್ರಹಣ, ಕಿಶೋರ್ ಸಂಕಲನ, ಬಾಲಾಜಿ ಸಾಹಸ ನಿರ್ದೇಶನ ಚಿತ್ರಕ್ಕಿದೆ.