ಕಾಲಿವುಡ್​ ಸ್ಟಾರ್ ನಟ ಧನುಷ್ ಇದೀಗ ಚೊಚ್ಚಲ ಓಟಿಟಿ ವೇದಿಕೆಗೆ ಪದಾರ್ಪಣೆ ಮಾಡಲು ಸಿದ್ಧತೆಯಲ್ಲಿದ್ದಾರೆ. ತುಂಬ ಸದ್ದು ಮಾಡಿರುವ ಜಗಮೇ ತಂಧಿರಮ್ ಚಿತ್ರ ಇದೀಗ ನೆಟ್​ಫ್ಲಿಕ್ಸ್​​ನಲ್ಲಿ ಸ್ಟ್ರೀಮ್ ಆಗಲಿದೆ. ಜೂನ್ 18ಕ್ಕೆ ಬಿಡುಗಡೆಯ ದಿನಾಂಕವನ್ನೂ ಚಿತ್ರತಂಡ ಘೋಷಣೆ ಮಾಡಿದ್ದು, ಅಭಿಮಾನಿಗಳ ಕಾಯುವಿಕೆಗೆ ಉತ್ತರ ಸಿಕ್ಕಿದೆ.

ಕಾರ್ತಿಕ್ ಸುಬ್ಬರಾಜು ನಿರ್ದೇಶನದ ಈ ಸಿನಿಮಾ ಎಲ್ಲ ಅಂದುಕೊಂಡಂತೆ ಆಗಿದ್ದರೆ, ಈಗಾಗಲೇ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿರಬೇಕಿತ್ತು. ಕೊರೋನಾ ಲಾಕ್​ಡೌನ್ ಹಿನ್ನೆಲೆಯಲ್ಲಿ ಬಿಡುಗಡೆ ಮುಂದೂಡಲ್ಪಟ್ಟಿತ್ತು. ಸದ್ಯದ ಸ್ಥಿತಿ ನೋಡಿದರೆ ಚಿತ್ರಮಂದಿರ ತೆರೆಯುವ ಲಕ್ಷಣಗಳು ಕಾಣುತ್ತಿಲ್ಲ. ಹಾಗಾಗಿ ಇದೀಗ ಓಟಿಟಿ ಮೊರೆ ಹೋಗಿದೆ ಚಿತ್ರತಂಡ.

ಚೆನ್ನೈ ಮೂಲದ ವೈನಾಟ್ ಸ್ಟುಡಿಯೋಸ್ ಮತ್ತು ರಿಲಯನ್ಸ್ ಎಂಟರ್​ಟೈನ್ಮೆಂಟ್​ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಇನ್ನೇನು ಜೂ. 1ಕ್ಕೆ ಚಿತ್ರದ ಟ್ರೇಲರ್ ಬಿಡುಗಡೆ ಆಗಲಿದೆ. ಜಗಮೇ ತಂಧಿರಮ್ ಸಿನಿಮಾ ಗ್ಯಾಂಗ್​ಸ್ಟರ್​ ವೊಬ್ಬನ ಹಿನ್ನೆಲೆಯ ಕಥಾನಕ. ಚಿತ್ರದಲ್ಲಿ ಗ್ಯಾಂಗ್​ಸ್ಟರ್ ಆಗಿ ಧನುಷ್ ಕಾಣಿಸಿಕೊಂಡಿದ್ದು, ಐಶ್ವರ್ಯಾ ಲಕ್ಷ್ಮೀ, ಜೊಜಿ ಜಾರ್ಜ್, ಕಲೈಅರಸನ್ ಶರತ್ ರವಿ, ಜೇಮ್ಸ್ ಕೊಸ್ಮೋ ಪಾತ್ರವರ್ಗದಲ್ಲಿದ್ದಾರೆ.

ಇನ್ನು ಈ ಸಿನಿಮಾ ಬಗ್ಗೆ ಮಾಹಿತಿ ನೀಡುವ ನಿರ್ದೇಶಕ ಕಾರ್ತಿಕ್ ಸುಬ್ಬರಾಜು, ಇದು ನನ್ನ ಕನಸಿನ ಪ್ರಾಜೆಕ್ಟ್. ಎಲ್ಲೆಡೆ ಸಲ್ಲುವ ಕಥಾ ಹಂದರ ಹೊಂದಿರುವ ಈ ಸಿನಿಮಾವನ್ನು ಹಿಂದಿ, ತೆಲುಗು, ಕನ್ನಡಕ್ಕೂ ಡಬ್ ಮಾಡಿ ನೆಟ್​ಫ್ಲಿಕ್ಸ್​​ನಲ್ಲಿ ಬಿಡುಗಡೆ ಮಾಡಲಿದ್ದೇವೆ. ಧನುಷ್ ತಮ್ಮ ಪಾತ್ರದ ಮೂಲಕ ವಿಭಿನ್ನವಾಗಿ ತೆರೆಮೇಲೆ ಕಾಣಿಸುತ್ತಾರೆ. ಹೊಸದಾದ ಕಥೆಯೊಂದಿಗೆ ಈ ಸಿನಿಮಾ ತೆರೆದುಕೊಳ್ಳಲಿದೆ ಎಂಬುದು ನಿರ್ದೇಶಕರ ಮಾತು.

ARUN KUMAR G
ARUN KUMAR G Senior Film Journalist GAURI LANKESH PATRIKE, KARMAVEERA and others

ಏನಾಯಿತು ಶೆಟ್ರೇ?

Previous article

ಕೆ ಜಿ ಎಫ್‌ ನಿರ್ಮಾಪಕರ ಸಿನಿಮಾ ಶುರುವಾಗೋದು ಖಚಿತ?!

Next article

You may also like

Comments

Leave a reply

Your email address will not be published.