ಸಚಿವ ಜಮೀರ್ ಅಹಮದ್ ಖಾನ್ ಅವರ ಪುತ್ರ ಜಾಹಿದ್ ಖಾನ್ ಬಾಲಿವುಡ್ ಚಿತ್ರದಲ್ಲಿ ನಟಿಸಲಿದ್ದಾರೆ ಎಂದು ಹಿಂದೆಯೇ ಹೇಳಲಾಗಿತ್ತು. ಆದರೆ, ಅವರು ಸ್ಯಾಂಡಲ್ ವುಡ್ ಮೂಲಕ ಚಿತ್ರರಂಗ ಪ್ರವೇಶಿಸಲಿದ್ದಾರೆ. ‘ಬೆಲ್ ಬಾಟಮ್’ ಚಿತ್ರದ ನಿರ್ದೇಶಕ ಜಯತೀರ್ಥ ನಿರ್ದೇಶನದಲ್ಲಿ ಮೂಡಿಬರಲಿರುವ ಚಿತ್ರದಲ್ಲಿ ಜಾಹಿದ್ ಖಾನ್ ಅಭಿನಯಿಸಲಿದ್ದಾರೆ. ಜಾಹಿದ್ ಖಾನ್ ಅವರಿಗೆ ಸೂಟ್ ಆಗುವಂತಹ ಚಿತ್ರಕಥೆಯನ್ನು ಜಯತೀರ್ಥ ರಚಿಸತೊಡಗಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಶೀಘ್ರವೇ ಜಾಹಿದ್ ಖಾನ್ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡಲಿದ್ದಾರೆ. ಜಾಹಿದ್ ಖಾನ್ ಮುಂಬೈನಲ್ಲಿ ನಟನಾ ತರಬೇತಿ ಪಡೆದುಕೊಂಡಿದ್ದಾರೆ. ಸಖತ್ ಸ್ಟೈಲಿಶ್ ಆಗಿರುವ ಅವರು ಸ್ಯಾಂಡಲ್ ವುಡ್ ಮೂಲಕವೇ ಅದೃಷ್ಟ ಪರೀಕ್ಷೆಗೆ ಇಳಿಯಲು ಸಜ್ಜಾಗಿದ್ದಾರೆ.
No Comment! Be the first one.