ಇತ್ತೀಚೆಗೆ ಬಿಡುಗಡೆಯಾಗಿ ಯಶಸ್ಸು ಕಂಡ “ಸಂಭವಾಮಿ ಯುಗೇಯುಗೇ” ಚಿತ್ರದ ನಾಯಕ ಜಯ್ ಶೆಟ್ಟಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಜಯ್ ಶೆಟ್ಟಿ ಅವರು ನಾಯಕನಾಗಿ ನಟಿಸುತ್ತಿರುವ “ಸತ್ವಿ” ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಈ ಮೂಲಕ ನಾಯಕನಿಗೆ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.
ಡೇವಿಡ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು “ಸಂಭವಾಮಿ ಯುಗೇಯುಗೇ” ಸೇರಿದಂತೆ ಕನ್ನಡದ ಅನೇಕ ಚಿತ್ರಗಳಿಗೆ ಹಾಗೂ ಹಲವು ಖಾಸಗಿ ವಾಹಿನಿಗಳಿಗೂ ಸಂಕಲನಕಾರರಾಗಿ ಕಾರ್ಯ ನಿರ್ವಹಿಸಿರುವ ರವೀಶ್ ಆತ್ಮಾರಾಮ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದು ರವೀಶ್ ಅವರಿಗೆ ಮೊದಲ ನಿರ್ದೇಶನದ ಚಿತ್ರ.
ಇದು 1935 ರಿಂದ 2024 ರವರೆಗಿನ ಕಾಲಘಟ್ಟದ ಕಥೆಯಾಗಿರುತ್ತದೆ. ನಿರ್ದೇಶಕರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ.
ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ಚಿತ್ರದಲ್ಲಿದೆ. ಆದರೆ ಅಡ್ವೆಂಚರ್ಸ್ ಗೆ ಹೆಚ್ಚು ಒತ್ತು ಕೊಡಲಾಗಿದೆ. ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ. “ಸಂಭವಾಮಿ ಯುಗೇಯುಗೇ” ಚಿತ್ರದಲ್ಲಿ ಕಾರ್ಯ ನಿರ್ವಹಿಸಿದ್ದ ಬಹುತೇಕ ತಂತ್ರಜ್ಞರು ಈ ಚಿತ್ರದಲ್ಲೂ ಇರುತ್ತಾರೆ. ಜಯ್ ಶೆಟ್ಟಿ ಅವರಿಗೆ ನಾಯಕಿಯಾಗಿ ನಯನ ನಟಿಸುತ್ತಿದ್ದಾರೆ. ಹೆಚ್ಚಿನ ವಿವರಗಳನ್ನು ಮುಂದಿನ ದಿನಗಳಲ್ಲಿ ನೀಡುವುದಾಗಿ ನಿರ್ದೇಶಕ ರವೀಶ್ ಆತ್ಮಾರಾಮ್ ತಿಳಿಸಿದ್ದಾರೆ.
No Comment! Be the first one.