ಅದ್ದೂರಿ ವೆಚ್ಚದಲ್ಲಿ ತಯಾರಾಗಿರುವ ಸುವಣ್ ಸುಂದರಿ ಸಿನಿಮಾ ಆರಂಭದಿಂದಲೂ ಸುದ್ದಿಯಾಗುತ್ತಲೇ ಬಂದಿದೆ. ಇದೀಗ ಚಿತ್ರತಂಡ ಈ ಸಿನಿಮಾದ ಟ್ರೈಲರ್ ಲಾಂಚ್ ಮಾಡಲು ತಯಾರಾಗಿದೆ. ಇದೇ ೧೯ನೇ ತಾರೀಕಿನ ಶನಿವಾರದಂದು ಸುವರ್ಣ ಸುಂದರಿ ಟ್ರೈಲರ್ ಬಿಡುಗಡೆಯಾಗಲಿದೆ.
ಎಸ್ ಟೀಮ್ ಪಿಕ್ಚರ್ಸ್ ಲಾಂಛನದಡಿಯಲ್ಲಿ ತಯಾರಾಗಿರುವ `ಸುವರ್ಣ ಸುಂದರಿ’ ಚಿತ್ರ ಸಂಪೂರ್ಣವಾಗಿ ಚಿತ್ರೀಕರಣ ಮುಗಿಸಿಕೊಂಡಿದೆ. ತೆಲುಗಿನಲ್ಲಿ ಈಗಾಗಲೇ ಒಂದಷ್ಟು ಚಿತ್ರಗಳನ್ನು ನಿರ್ದೇಶನ ಮಾಡಿರುವ ಸೂರ್ಯ ನಿರ್ದೇಶನದ ಈ ಚಿತ್ರ ನಾಲಕ್ಕು ಕಾಲಮಾನಗಳ ವಿಶಿಷ್ಟವಾದ ಕಥಾ ಹಂದರ ಹೊಂದಿದೆ.
ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಏಕ ಕಾಲದಲ್ಲಿ ತಯಾರಾಗಿರೋ ಈ ಚಿತ್ರಕ್ಕೆ ರಾಂಗೋಪಾಲ್ ವರ್ಮಾ ಅವರ ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿರುವ ಸಾಯಿ ಕಾರ್ತಿಕ್ ಅವರೇ ರಾಗ ಸಂಯೋಜನೆ ಮಾಡಿರೋದು ವಿಶೇಷ. ಬೆಂಗಳೂರು, ಅನಂತಪುರಂ, ಹೈದರಾಬಾದ್, ಬೀದರ್, ಕೇರಳ ಮುಂತಾದೆಡೆಗಳಲ್ಲಿ ಚಿತ್ರೀಕರಣ ಮುಗಿಸಿಕೊಂಡಿರೋ ಈ ಚಿತ್ರವೀಗ ಅಂತಿಮ ಹಂತಕ್ಕೆ ತಲುಪಿಕೊಂಡಿದೆ. ಇದರ ಜೊತೆಗೇ ಒಂದು ಸುಂದರವಾದ ಟ್ರೈಲರ್ ಕೂಡಾ ಇಗಾಗಲೆ ಬಿಡುಗಡೆಗೊಂಡಿದೆ. ಇದೀಗ ವಿಶಿಷ್ಟವಾದ ಎರಡನೇ ಟ್ರೈಲರ್ ನೋಡೋ ಕಾಲ ಹತ್ತಿರಾಗಿದೆ.
ಬಾಹುಬಲಿ ಚಿತ್ರಕ್ಕೆ ಸಿಜಿ ವರ್ಕ್ ಮಾಡಿದ್ದ ತಂತ್ರಜ್ಞರೇ ಈ ಚಿತ್ರಕ್ಕೆ ನಲವತೈದು ನಿಮಿಷಗಳ ಸಿಜಿ ವರ್ಕ್ ಮಾಡಿದ್ದಾರಂತೆ. ಪೂರ್ಣ, ಸಾಕ್ಷಿ, ತಿಲಕ್, ಸಾಯಿ ಕುಮಾರ್, ಜೈ ಜಗಧೀಶ್, ರಾಮ್, ಅವಿನಾಶ್, ಇಂದಿರಾ, ಸತ್ಯಪ್ರಕಾಶ್ ಮುಂತಾದವರ ತಾರಾಗಣ ಈ ಚಿತ್ರಕ್ಕಿದೆ. ಎಲ್ಲಾ ಕೆಲಸ ಕಾರ್ಯಗಳನ್ನೂ ಸಂಪೂರ್ಣವಾಗಿ ಮಗಿಸಿಕೊಂಡಿರುವ ಚಿತ್ರತಂಡ ಇದೀಗ ಟ್ರೈಲರ್ ತೋರಿಸಲು ಮುಂದಾಗಿದೆ.
#
No Comment! Be the first one.