ದಿಗಂತ್ ಜೊತೆಯಾಗಲಿದ್ದಾರೆ ಚಿನ್ನು!

ಕನ್ನಡ ಕಿರುತೆರೆ ಧಾರಾವಾಹಿ ಲಕ್ಷ್ಮೀ ಬಾರಮ್ಮ ಮೂಲಕ ಪ್ರೇಕ್ಷಕರ ಮನಗೆದ್ದಿದ್ದ ಚಿನ್ನು ಉರುಫ್ ಕವಿತಾ ಗೌಡ ಈಗ ಬೆಳ್ಳಿ ಪರದೆಯ ಮೇಲೆ ಮಿಂಚಲಿದ್ದಾರೆ. ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಭಾಗಿಯಾಗಿ ತನ್ನ ಖ್ಯಾತಿಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿರುವ ಕವಿತ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಹೊಸ ವಿಚಾರ ಏನಂದ್ರೆ ದೂದ್ ಪೇಡಾ ದಿಗಂತ್ ಒಪ್ಪಿಕೊಂಡಿರುವ ಹುಟ್ಟುಹಬ್ಬದ ಶುಭಾಶಯಗಳು ಚಿತ್ರಕ್ಕೆ ಕವಿತಾ ನಾಯಕಿಯಾಗಿ ಆಯ್ಕೆಯಾಗಿದ್ದು, ಮೊದಲ ಬಾರಿಗೆ ಕವಿತಾ ಹಾಗೂ ದಿಗಂತ್ ತೆರೆ ಹಂಚಿಕೊಳ್ಳಲಿದ್ದಾರೆ. ಈ ಫ್ರೆಶ್ ಜೋಡಿಯನ್ನು ನೋಡಲು ಪ್ರೇಕ್ಷಕರು ಕಾತುರರಾಗಿದ್ದಾರೆ.

ವರ್ಷದ ಬಳಿಕ ದಿಗಂತ್ ಹುಟ್ಟುಹಬ್ಬದ ಶುಭಾಶಯಗಳು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಮದುವೆ ನಂತರ ಕೊಂಚ ಬ್ರೇಕ್ ತೆಗೆದುಕೊಂಡಿದ್ದ ದಿಗಂತ್ ಹೊಸ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಈ ಮೊದಲು ಶ್ರೀನಿವಾಸ ಕಲ್ಯಾಣದಲ್ಲಿ ಅಭಿನಯಿಸಿದ್ದ ಕವಿತಾ ಗೌಡ, ಬಿಗ್ ಬಾಸ್ ನಿಂದ ಹೊರಬಂದ ಮೇಲೆ ಗುಬ್ಬಿ ಮೇಲೆ ಬ್ರಹ್ಮಾಸ್ತ್ರದಲ್ಲೂ ಅಭಿನಯಿಸುತ್ತಿದ್ದಾರೆ. ಹುಟ್ಟುಹಬ್ಬದ ಶುಭಾಶಯಗಳು ಕವಿತಾ ಗೌಡರವರ ಮೂರನೇ ಸಿನಿಮಾವಾಗಿದ್ದು, ಈ ಚಿತ್ರವನ್ನು ಯುವ ನಿರ್ದೇಶಕ ನಾಗರಾಜ್ ಬೇತೂರ್ ನಿರ್ದೇಶನ ಮಾಡುತ್ತಿದ್ದಾರೆ. ಇನ್ನು ಈ ಚಿತ್ರಕ್ಕೆ ಚಮಕ್ ಮತ್ತು ಅಯೋಗ್ಯರಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ನಿರ್ಮಾಪಕ ಟಿ.ಆರ್. ಚಂದ್ರಶೇಖರ್ ಬಂಡವಾಳ ಹೂಡುತ್ತಿದ್ದಾರೆ.


Posted

in

by

Tags:

Comments

Leave a Reply