ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ಸಿನಿಮಾಗಳಿಗೇನು ಬರವಿಲ್ಲ. ಸಾಕಷ್ಟು ಸಿನಿಮಾಗಳು ಅಭಿಮಾನಿಗಳನ್ನು ರಂಜಿಸುತ್ತವೆ. ಇದೀಗ ಮತ್ತೊಂದು ವಿನೂತನ ಸಿನಿಮಾ ರಿಲೀಸ್‌ಗೆ ಸಿದ್ಧವಾಗಿದೆ. ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ ಇದಾಗಿದ್ದು ಚಿತ್ರಕ್ಕೆ ‘ಕೆರೆಬೇಟೆ’ ಎಂದು ಟೈಟಲ್ ಇಡಲಾಗಿದೆ. ಕೆರೆಬೇಟೆ ಗೌರಿ ಶಂಕರ್SRG ನಾಯಕನಾಗಿ ನಟಿಸಿರುವ ಸಿನಿಮಾ. ಈ ಚಿತ್ರಕ್ಕೆ ರಾಜ್ ಗುರು ಆಕ್ಷನ್ ಕಟ್ ಹೇಳಿದ್ದಾರೆ. ನಟ ಗೌರಿ ಶಂಕರ್ ಈ ಮೊದಲು ಜೋಕಾಲಿ ಮತ್ತು ರಾಜಹಂಸ ಸಿನಿಮಾಗಳಲ್ಲಿ ಹೀರೋ ಆಗಿ ಮಿಂಚಿದ್ದರು. ರಾಜಹಂಸ ಸಿನಿಮಾ ರಿಲೀಸ್ ಆಗಿ 5 ವರ್ಷಗಳ ಮೇಲಾಗಿದೆ. ಇದೀಗ ಗೌರಿ ಶಂಕರ್ ಕೆರೆಬೇಟೆ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ.
ಕೆರೆಬೇಟೆ ರಾಜ್‌ಗುರು ಸಾರಥ್ಯದಲ್ಲಿ ಮೂಡಿಬಂದಿದೆ. ಇದು ರಾಜ್‌ಗುರು ಅವರ ಮೊದಲ ಸಿನಿಮಾವಾಗಿದೆ. ಕಳೆದ ಹತ್ತು ವರ್ಷಗಳಿಂದ ಕನ್ನಡ ಸಿನಿಮಾರಂಗದಲ್ಲಿ ಎ.ಆರ್ ಬಾಬು, ಪವನ್ ಒಡೆಯರ್ ಹಾಗೂ ಇತರೆ ನಿರ್ದೇಶಕರ ಜೊತೆ ಸಹ ನಿರ್ದೇಶಕರಾಗಿ ಕೆಲಸ ಮಾಡಿರುವ ಅನುಭವ ರಾಜ್ ಗುರು ಅವರಿಗಿದೆ. ಇದೀಗ ಕೆರೆಬೇಟೆ ಎನ್ನುವ ವಿಭಿನ್ನ ಕಾನ್ಸೆಪ್ಟ್‌ನ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಿದ್ದಾರೆ.
ಕೆರೆಬೇಟೆ ಎಂದರೇನು?
ಕೆರೆಬೇಟೆ ಎಂದರೆ ಮಲೆನಾಡ ಭಾಗದದಲ್ಲಿ ಮೀನು ಬೇಟೆಯಾಡುವ ಒಂದು ಪದ್ಧತಿ. ಮಲೆನಾಡ ಭಾಗದಲ್ಲಿ ವರ್ಷಕೊಮ್ಮೆ ಕೆರೆಬೇಟೆಯಾಡುತ್ತಾರೆ. ದೊಡ್ಡ ಕೆರೆಗಳಲ್ಲಿ ನಡೆಯುತ್ತದೆ. ಇದೇ ಈ ಸಿನಿಮಾದ ಮುಖ್ಯ ಎಳೆಯಾಗಿದೆ. ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ ಇದಾಗಿದ್ದು ಮಲೆನಾಡ ಭಾಗದ ಕೆರೆಬೇಟೆಯನ್ನು ಸಿನಿಮಾ ಮೂಲಕ ಕಟ್ಟಿಕೊಡುತ್ತಿದ್ದಾರೆ ನಿರ್ದೇಶಕ ರಾಜ್ ಗುರು ಮತ್ತು ನಾಯಕ ಗೌರಿ ಶಂಕರ್. ಕೆರೆಬೇಟೆ ಚಿತ್ರಕ್ಕೆ ಗಗನ್ ಬಡೇರಿಯಾ ಸಂಗೀತ ಸಂಯೋಜನೆ ಮಾಡಿದ್ದಾರೆ.
‘ಕೆರೆಬೇಟೆ ಜನಮನ ಸಿನಿಮಾ ಸಂಸ್ಥೆಯ ಹೆಮ್ಮೆಯ ಕಾಣಿಕೆ. ಇದುವರೆಗೂ ನೋಡಿರದ ಒಂದು ಹಳ್ಳಿ ಸೊಗಡಿನ ಕಥೆ. ಸದ್ಯ ಟೈಟಲ್ ಪೋಸ್ಟರ್ ರಿಲೀಸ್ ಮಾಡಲಾಗಿದ್ದು ಇದೇ 27ರಂದು ಶುಕ್ರವಾರ ಮಧ್ಯಾಹ್ನ 12.01 ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಮಾಡಲಾಗುತ್ತಿದೆ’ ಎನ್ನುತ್ತಾರೆ ನಾಯಕ ಗೌರಿ ಶಂಕರ್.
ಈ ಚಿತ್ರಕ್ಕೆ ಜೈ ಶಂಕರ್ ಪಟೇಲ್ ಹಾಗೂ ನಾಯಕ ಗೌರಿ ಶಂಕರ್ ಇಬ್ಬರೂ ತಮ್ಮ ಜನಮನ ಸಿನಿಮಾ ಬ್ಯಾನರ್‌ನಲ್ಲಿ ನಿರ್ಮಾಣ ಮಾಡಿದ್ದಾರೆ. ಅಂದಹಾಗೆ ಕೆರೆಬೇಟೆ ಸಿನಿಮಾದ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದ್ದು ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಸಿನಿಮಾತಂಡ ಬ್ಯುಸಿಯಾಗಿದೆ. ಈ ನಡುವೆ ಸಿನಿಮಾತಂಡ ಫಸ್ಟ್ ಲುಕ್ ಹಾಗೂ ಮೋಷನ್ ಪೋಸ್ಟರ್ ಮೂಲಕ ಅಭಿಮಾನಿಗಳ ಬರುತ್ತಿದೆ. ಈ ಸಿನಿಮಾವನ್ನು ಸಂಪೂರ್ಣವಾಗಿ ಶಿವಮೊಗ್ಗ ಜಿಲ್ಲೆಯ ಸಿಗಂದೂರ ಹಾಗೂ ಸೊರಬ ಸುತ್ತ-ಮುತ್ತ ಚಿತ್ರೀಕರಣ ಮಾಡಲಾಗಿದೆ. ಸದ್ಯ ಟೈಟಲ್ ಮೂಲಕವೇ ಕುತೂಹಲ ಹೆಚ್ಚಿಸಿರುವ ಕೆರೆಬೇಟೆ ಮುಂದಿನ ವರ್ಷಾರಂಭದಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ. ಅಲ್ಲಿವರೆಗೂ ಕಾಯಲೇ ಬೇಕು.
No Comment! Be the first one.