ಗರುಡ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಕಪಟನಾಟಕ ಪಾತ್ರಧಾರಿ ಸಿನಿಮಾದ `ಯಾಕೆ ಅಂತಾ ಗೊತ್ತಿಲ್ಲ ಕಣ್ರೀ… ನನ್ನನ್ನು ನೋಡಿ ನಕ್ಬಿಟ್ಲು ಸುಂದ್ರಿ..’ ಎಂಬ ಹಾಡು ಈಗಾಗಲೇ ಯೂಟ್ಯೂಬ್‍ನಲ್ಲಿ ಬಿಡುಗಡೆಯಾಗಿದೆ. ಈ‌ ಹಾಡನ್ನು ಆಪರೇಷನ್ ಅಲಮೇಲಮ್ಮ ಮತ್ತು ಕವಲು ದಾರಿ ಖ್ಯಾತಿಯ ನಟ ರಿಷಿ ಇತ್ತೀಚೆಗೆ ಬಿಡುಗಡೆಯನ್ನು ಮಾಡಿದ್ದರು. ಲಿರಿಕಲ್ ವಿಡಿಯೋ ಹಾಡಿನ ಸಾಲಿಗೆ ತಕ್ಕಂತೆ ವಿಭಿನ್ನವಾಗಿ ಮೇಕಿಂಗ್ ಕೂಡ ಮಾಡಲಾಗಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಹಾಡು ಸದ್ದು ಮಾಡುತ್ತಿದೆ.

ಕ್ರಿಶ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಉಳಿದಂತೆ ಆದಿಲ್ ನದಾಫ್ ಅವರು ಚಿತ್ರಕ್ಕೆ ಸಂಗೀತ ನೀಡಿದ್ದು, ಕ್ರಿಶ್, ವೇಣು ಹಸ್ರಾಳಿ, ಚಾಣಕ್ಯ, ಅನಿರುದ್ಧ್ ಶಾಸ್ತ್ರಿ ಹಾಡುಗಳನ್ನು ರಚಿಸಿದ್ದಾರೆ. ಹರಿಚರಣ್, ಸಿದ್ಧಾರ್ಥ್, ಮಾಧುರಿ ಶೇಷಾದ್ರಿ, ಇಶಾ ಸುಚಿ, ಪವನ್ ಪಾರ್ಥ ಹಾಗೂ ಅನಿರುದ್ದ್ ಶಾಸ್ತ್ರಿ ಈ ಚಿತ್ರದ ಹಾಡುಗಳನ್ನು ಹಾಡಿದ್ದಾರೆ. ಕಿರಣ್ ಚಂದ್ರ ಹಾಗೂ ವೇಣು ಹಸ್ರಾಳಿ ಸಂಭಾಷಣೆ ಬರೆದಿದ್ದಾರೆ. ಪರಮೇಶ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಶ್ರೀಕಾಂತ್ ಅವರ ಸಂಕಲನವಿದೆ. ಸಂಗೀತ ಭಟ್, ಬಾಲು ನಾಗೇಂದ್ರ, ಕರಿ ಸುಬ್ಬು, ಶಂಕರ್ ನಾರಾಯಣ್, ಪ್ರಕಾಶ್ ತುಮ್ಮಿನಾಡು, ಉಗ್ರಂ ಮಂಜು, ಜಯದೇವ್, ನವೀನ್ ವಾಸುದೇವ್, ಸುನೀಲ್ ಕುಲಕರ್ಣಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

CG ARUN

ಸ್ಟಾರ್ ಕನ್ನಡಿಗ ಏನಿದು ಹಾಡು ರಿಲೀಸ್ ಮಾಡಿದ ಲೂಸ್ ಮಾದ!

Previous article

ವಸಿಷ್ಠ ಸಿಂಹ ಹೆಸರಲ್ಲಿ ಫೇಕ್ ಫೇಸ್ ಬುಕ್ ಅಕೌಂಟ್!

Next article

You may also like

Comments

Leave a reply

Your email address will not be published. Required fields are marked *