ಆದಿತ್ಯ ಸಿನಿ ಕಂಬೈನ್ಸ್ ಲಾಂಛನದಲ್ಲಿ ಷಣ್ಮುಖ ಜಿ ಬೆಂಡಿಗೇರಿ ಅವರು ನಿರ್ಮಿಸಿರುವ ಸಿನಿಮಾ. `ಕೃಷ್ಣ ಗಾರ್ಮೆಂಟ್ಸ್` ಇದೇ ತಿಂಗಳ 21ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ಸಿದ್ದು ಪೂರ್ಣಚಂದ್ರ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಗೀತ ರಚನೆ ಮಾಡಿ ನಿರ್ದೇಶಿಸಿದ್ದಾರೆ.
`ಶ್ರೀಮಾನ್ ಶ್ರೀಮತಿ` ಧಾರಾವಾಹಿ ಖ್ಯಾತಿಯ ಭಾಸ್ಕರ್ ನೀನಾಸಂ ಚಿತ್ರದ ನಾಯಕರಾಗಿ ನಟಿಸಿದ್ದು, `ಬ್ರಹ್ಮಾಸ್ತ್ರ` ಧಾರಾವಾಹಿಯ ರಶ್ಮಿತ ನಾಯಕಿಯಾಗಿ ಅಭಿನಯಿಸಿದ್ದಾರೆ. ಚಂದನ್ ಗೌಡ (ಲಕ್ಷ್ಮೀ ಬಾರಮ್ಮ), ರಾಜೇಶ್ ನಟರಂಗ, ರಜನಿಕಾಂತ್, ವರ್ಧನ್ ತೀರ್ಥಹಳ್ಳಿ, ಹೆಚ್.ಎಂ.ಟಿ.ವಿಜಯ್, ಕುಲ್ದೀಪ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಇತ್ತೀಚಿಗೆ ಸಿನಿಮಾ ವೀಕ್ಷಿಸಿದ್ದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರವನ್ನು ನೀಡಿದೆ.
No Comment! Be the first one.