ಆದಿತ್ಯ ಸಿನಿ ಕಂಬೈನ್ಸ್ ಲಾಂಛನದಲ್ಲಿ ಷಣ್ಮುಖ ಜಿ ಬೆಂಡಿಗೇರಿ ಅವರು ನಿರ್ಮಿಸಿರುವ `ಕೃಷ್ಣ ಗಾರ್ಮೆಂಟ್ಸ್` ಚಿತ್ರದ ಟ್ರೇಲರ್ ಖ್ಯಾತ ನಟ ನೀನಾಸಂ ಸತೀಶ್ ಅವರಿಂದ ಬಿಡುಗಡೆಯಾಗಿದೆ. ಟ್ರೇಲರ್ ವೀಕ್ಷಿಸಿ ನೀನಾಸಂ ಸತೀಶ್ ಅವರು ಮೆಚ್ಚುಗೆ ಸೂಚಿಸಿದ್ದಾರೆ. ಚಿತ್ರ ಮೇ ತಿಂಗಳಿನಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಪ್ರಶಾಂತ್ ರಾವ್ ವರ್ಕು ಅವರು ನಿರ್ಮಾಣ ಮತ್ತು ನಿರ್ವಹಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ.  ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಕೃಷ್ಣ ಗಾರ್ಮೆಂಟ್ಸ್ ನ ರಚನೆ ಹಾಗೂ ನಿರ್ದೇಶನ  ಸಿದ್ದು ಪೂರ್ಣಚಂದ್ರ ಅವರದ್ದು. ಚಿತ್ರದ ಚಿತ್ರೀಕರಣವು ಹಾಸನ, ದೊಡ್ದಬಳ್ಳಾಪುರ, ಬೆಂಗಳೂರು, ಶ್ರವಣ ಬೆಳಗೊಳ, ಚನ್ನಪಟ್ಟಣದಲ್ಲಿ 35 ದಿನಗಳ ಕಾಲ ನಡೆದಿದೆ.

`ಶ್ರೀಮಾನ್ ಶ್ರೀಮತಿ` ಧಾರಾವಾಹಿ ಖ್ಯಾತಿಯ ಭಾಸ್ಕರ್ ನೀನಾಸಂ ಚಿತ್ರದ ನಾಯಕರಾಗಿ ನಟಿಸಿದ್ದು, `ಬ್ರಹ್ಮಾಸ್ತ್ರ` ಧಾರಾವಾಹಿಯ ರಶ್ಮಿತ ನಾಯಕಿಯಾಗಿ ಅಭಿನಯಿಸಿದ್ದಾರೆ. ಚಂದು (ಲಕ್ಷ್ಮೀ ಬಾರಮ್ಮ), ರಾಜೇಶ್ ನಟರಂಗ, ಪ್ರಮಿಳಾ ಸುಬ್ರಮಣ್ಯಂ, ಲಕ್ಷ್ಮೀನರಸಿಂಹ, ರಜನಿಕಾಂತ್, ವರ್ಧನ್ ತೀರ್ಥಹಳ್ಲಿ, ಹೆಚ್.ಎಂ.ಟಿ.ವಿಜಯ್, ಕಿರಣ್ ಹೊನ್ನಾವರ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಚಿದಾನಂದ್ ಹಾಗೂ ಚಂದ್ರಶೇಖರ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಕೆ.ಎಂ.ಪ್ರಕಾಶ್ ಅವರ ಸಂಕಲನವಿದೆ.

ARUN KUMAR G
ARUN KUMAR G Senior Film Journalist GAURI LANKESH PATRIKE, KARMAVEERA and others

ಟಾಲಿವುಡ್ ಅಂಗಳಕ್ಕೆ ಸಂಚಾರಿ ವಿಜಯ್!

Previous article

ಹೊಸ ‘ಲಡ್ಡು’ ಆದರೆ ತಿನ್ನಲಿಕ್ಕಲ್ಲ!

Next article

You may also like

Comments

Leave a reply

Your email address will not be published. Required fields are marked *