ಈಗೀಗ ಸೆಲೆಬ್ರೆಟಿಗಳ ಮೇಲೆ ವಂಚನೆ, ದ್ರೋಹ, ಚೆಕ್ ಬೌನ್ಸ್ ಆರೋಪಗಳು ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಸದ್ಯ ರಜನಿಕಾಂತ್ ಹೆಂಡತಿ ಲತಾ ಮೇಲೆ ವಂಚನೆ ಆರೋಪ ದಾಖಲಾಗಿದೆ.
2015ರಲ್ಲಿ ರನ್ ಆಗುತ್ತಿದ್ದ ಜಾಹೀರಾತು ಕಂಪನಿಯೊಂದಕ್ಕೆ ವಂಚನೆ ಮಾಡಿದ್ದು, ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂಬ ಆರೋಪದ ಹಿನ್ನೆಲೆ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ ಲತಾ ವಿಚಾರಣೆಗೆ ಲತಾ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಖುದ್ದು ಹಾಜರಾಗುವಂತೆ ಲತಾ ರಜನಿಕಾಂತ್ ಅವರು ಮೇ 6ರಂದೇ ವಿಚಾರಣೆಗೆ ಹಾಜರಾಗುವಂತೆ ಹಲಸೂರು ಪೊಲೀಸರು ಮೇ 2ರಂದು ಸಮನ್ಸ್ ಜಾರಿ ಮಾಡಿದ್ದರು. ಆದರೆ ಅನಿವಾರ್ಯ ಕಾರಣಗಳಿಂದ ಮೇ 20ರ ನಂತರ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.
No Comment! Be the first one.