ಮಾಸ್ತಿಗುಡಿ ಚಿತ್ರದ ಚಿತ್ರೀಕರಣದ ವೇಳೆ ದುರಂತ ಅಂತ್ಯ ಕಂಡಿದ್ದ ಅನಿಲ್ ಮತ್ತು ಉದಯ್ ಸಾವಿರ ಪ್ರಕರಣದಿಂದ ತಮ್ಮನ್ನು ಕೈ ಬಿಡುವಂತೆ ಆರು ಜನ ಆರೋಪಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಐವರು ಆರೋಪಿಗಳ ಅರ್ಜಿಯನ್ನು ರಾಮನಗರ ಜಿಲ್ಲಾ ಸತ್ರ ನ್ಯಾಯಾಲಯ ವಜಾಗೊಳಿಸಿದೆ. ಇತ್ತೀಚಿಗೆ ಪ್ರಕರಣದ ಕುರಿತು ರಾಮನಗರದ ಮೂರನೇ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ, ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ಸಿದ್ದಲಿಂಗಪ್ರಭು ಅವರು, ಐವರು ಆರೋಪಿಗಳ ಅರ್ಜಿಯನ್ನು ವಜಾಗೊಳಿಸಿದ್ದು, ಆರನೇ ಆರೋಪಿ ಹೆಲಿಕಾಪ್ಟರ್ ಪೈಲೆಟ್ ಪ್ರಕಾಶ್ ಬೀರದಾರ್ ಪ್ರಕರಣದಿಂದ ಕೈಬಿಡುವಂತೆ ಆದೇಶ ನೀಡಿದ್ದಾರೆ.

ಮಾಸ್ತಿಗುಡಿ ದುರಂತ ಪ್ರಕರಣದ ಪ್ರಮುಖ ಆರೋಪಿಗಳಾದ ನಿರ್ಮಾಪಕ ಸುಂದರ್ ಪಿ ಗೌಡ, ನಿರ್ದೇಶಕ ರಾಜಶೇಖರ್, ಸಿದ್ಧಾರ್ಥ್ ಅಲಿಯಾಸ್ ಸಿದ್ದು, ಸಾಹಸ ನಿರ್ದೇಶಕ ರವಿವರ್ಮಾ ಮತ್ತು ಎ.ಪಿ.ಭರತ್ ರಾವ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಅಲ್ಲದೇ ಪ್ರಕರಣದ ವಿಚಾರಣೆಯನ್ನು ಸೆಪ್ಟಂಬರ್ 9 ಕ್ಕೆ ಮುಂದೂಡಿದ್ದಾರೆ. ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿ 2016ರ ನವೆಂಬರ್ 7 ರಂದು ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ನಡೆದಿತ್ತು. ಈ ವೇಳೆ ಹೆಲಿಕಾಪ್ಟರ್ ನಿಂದ 100 ಅಡಿ ಎತ್ತರದಿಂದ ಖಳನಟ ಅನಿಲ್, ಉದಯ್ ಹಾಗೂ ನಾಯಕ ನಟ ದುನಿಯಾ ವಿಜಯ್ ಜಲಾಶಯಕ್ಕೆ ಜಿಗಿದಿದ್ದರು. ಆದರೆ ಮೂವರಿಗೂ ಈಜು ಬರುತ್ತಿರಲಿಲ್ಲ. ಹೀಗಾಗಿ ಅನಿಲ್ ಮತ್ತು ಉದಯ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.

ARUN KUMAR G
ARUN KUMAR G Senior Film Journalist GAURI LANKESH PATRIKE, KARMAVEERA and others

ರೋಚಕವಾಗಿ ಹುಟ್ಟಿದ ಉಡುಂಬಾ!

Previous article

ಸಾಹೋ ಹಸಿ ಬಿಸಿ ಸಾಂಗ್ ಬ್ಯಾಡ್ ಬಾಯ್ ರಿಲೀಸ್!

Next article

You may also like

Comments

Leave a reply

Your email address will not be published. Required fields are marked *