ಸಾಹೇಬ ಚಿತ್ರದ ನಂತರ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ರವಿಚಂದ್ರನ್ ಅಭಿನಯದ ಪ್ರಾರಂಭ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಮನು ಕಲ್ಯಾಡಿ ಈ ಚಿತ್ರವನ್ನು ರಚನೆ ಮತ್ತು ನಿರ್ದೇಶನ ಮಾಡಿರುವ ಈ ಚಿತ್ರವನ್ನು ಜಗದೀಶ್ ಕಲ್ಯಾಡಿ ಅವರು ಜೇನುಶ್ರೀ ತನುಷ ಪ್ರೊಡಕ್ಷನ್ ಮೂಲಕ ನಿರ್ಮಿಸುತ್ತಿದ್ದಾರೆ. ಈ ಚಿತ್ರದಲ್ಲಿ ಮನೋರಂಜನ್ ರವಿಚಂದ್ರನ್ ಅವರು ಮೂರು ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.
5 ಹಾಡುಗಳಿರುವ ಈ ಚಿತ್ರಕ್ಕೆ ಪ್ರಜ್ವಲ್ ಪೈ ಅವರ ಸಂಗೀತ ನಿರ್ದೇಶನವಿದೆ. ಇನ್ನು ಚಿತ್ರಗಳಲ್ಲಿ 2 ಸಾಹಸ ಸನ್ನಿವೇಶಗಳಿದ್ದು, ಥ್ರಿಲ್ಲರ್ ಮಂಜು ಹಾಗೂ ವಿಕ್ರಂ ಮೋರ್ ಸಾಹಸ ನಿರ್ದೇಶನ ಮಾಡಿದ್ದಾರೆ. ಉಳಿದಂತೆ ಸುರೇಶ್ ಬಾಬು ಛಾಯಾಗ್ರಹಣ, ವಿ.ಜಿ.ಎನ್. ಕುಮಾರ್, ಸಂತು ಸಂಕಲನ, ಗೀತಾ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಪ್ರಾರಂಭದ ತಾರಾಗಣದಲ್ಲಿ ಮನೋರಂಜನ್ ರವಿಚಂದ್ರನ್, ಕೀರ್ತಿ ಕಲಕೇರಿ, ಕಡ್ಡಿಪುಡಿ ಚಂದ್ರು, ಹನುಮಂತೇ ಗೌಡ, ಸೂರಜ್ ಮುಂತಾದವರು ಇದ್ದಾರೆ.
No Comment! Be the first one.