ತ್ರಿವೇಣಿ 24ಕ್ರಾಫ಼್ ಲಾಂಛನದಲ್ಲಿ ವೆಂಕಟೇಶ್ ರೆಡ್ಡಿ ಅವರು ನಿರ್ಮಿಸಿರುವ ‘ಎಂ ಎಲ್ ಎ‘ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವೆಂಕಿ ಪಾಲುಗುಳ್ಳ ಈ ಚಿತ್ರದ ಸಹ ನಿರ್ಮಾಪಕರು. ಮೌರ್ಯ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ನಾಯಕರಾಗಿ ಪ್ರಥಮ್ ಅಭಿನಯಿಸಿದ್ದಾರೆ. ಸೋನಾಲ್ ಮಾಂಟೆರೊ ಈ ಚಿತ್ರದ ನಾಯಕಿ. ಸ್ಪರ್ಷ ರೇಖಾ, ಕುರಿ ಪ್ರತಾಪ್, ರಾಜಶೇಖರ್, ನವೀನ್, ಚಂದ್ರಕಲಾ ಮೋಹನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಮಾಜಿ ಸಚಿವ ಎಚ್.ಎಂ.ರೇವಣ್ಣ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದಾರೆ.
ವಿಕ್ರಂಸುಬ್ರಮಣ್ಯ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಕೃಷ್ಣಸಾರಥಿ ಅವರ ಛಾಯಾಗ್ರಹಣವಿದೆ. ಕೆ.ಆರ್.ಲಿಂಗರಾಜು ಸಂಕಲನ, ಕಲೈ ನೃತ್ಯ ನಿರ್ದೇಶನ ಹಾಗೂ ದೇವಿಪ್ರಕಾಶ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.
#
No Comment! Be the first one.