ರಾಜ್ಯದ ಜನರ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಚುನಾವಣಾ ಕಣ ಮತ್ತಷ್ಟು ರಂಗೇರುತ್ತಿದೆ. ಚಿತ್ರರಂಗದ ಸಾಕಷ್ಟು ಗಣ್ಯರು ಅಭ್ಯರ್ಥಿ ಸುಮಲತಾ ಪರ ಪ್ರಚಾರಕ್ಕೆ ಮಾಡುತ್ತಿದ್ದಾರೆ. ದರ್ಶನ್, ಯಶ್, ದೊಡ್ಡಣ್ಣ, ರಾಕ್ ಲೈನ್ ವೆಂಕಟೇಶ್, ನೆನಪಿರಲಿ ಪ್ರೇಮ್ ಸೇರಿದಂತೆ ಚಿತ್ರರಂಗದಿಂದ ಸಾಕಷ್ಟು ಮಂದಿ ಸುಮಲತಾ ಅವರಿಗೆ ಸಾಥ್ ನೀಡಿದ್ದಾರೆ.
ಆದ್ರೆ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರಕ್ಕೆ ಹೋಗಲು ಮೂಲತಃ ಮಂಡ್ಯದವರಾದ ನಿರ್ದೇಶಕ ಜೋಗಿ ಪ್ರೇಮ್ ಹಿಂದೇಟು ಹಾಕಿದ್ದಾರೆ. ಸುಮಲತಾ ಹಾಗೂ ಸಿಎಂ ಕುಮಾರಸ್ವಾಮಿ ಎರಡೂ ಕುಟುಂಬದ ಜೊತೆ ಒಳ್ಳೆಯ ಬಾಂಧವ್ಯ ಹೊಂದಿರುವ ಪ್ರೇಮ್, ಸುಮಲತಾ ಪರ ಪ್ರಚಾರ ಮಾಡಿದರೆ ಕುಮಾರಸ್ವಾಮಿಯ ನಿಷ್ಠುರ ಕಟ್ಟಿಕೊಳ್ಳಬೇಕಾಗುತ್ತೆ. ಹಾಗಾಗಿ ಯಾರ ಪರವಾಗಿಯೂ ಪ್ರಚಾರಕ್ಕೆ ಹೋಗುವುದು ಬೇಡವೆಂದು ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ.