ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಈಗ ರಾಜಕೀಯಕ್ಕೂ ಎಂಟ್ರಿ ಕೊಟ್ಟಿರುವ ವಿಚಾರ ನಿಮಗೆಲ್ಲಾ ಗೊತ್ತೇ ಇದೆ. ‘ಭಾರತೀಯ ಜನತಾ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನದಿ ಜೋಡಣೆ ಬಗ್ಗೆ ಪ್ರಸ್ತಾಪಿಸಿದೆ.
ಜೋಡಣೆ ವಿಚಾರವಾಗಿ ಸಮಿತಿಯನ್ನು ನೇಮಕ ಮಾಡುವುದಾಗಿಯೂ ತಿಳಿಸಿದೆ. ಚುನಾವಣೆಯಲ್ಲಿ ಬಿಜೆಪಿ ಗೆದ್ದು ಎನ್.ಡಿ.ಎ ಸರ್ಕಾರ ರಚನೆ ಮಾಡಿದರೆ, ಅವರು ನದಿ ಜೋಡಣೆ ಕೆಲಸವನ್ನು ಆರಂಭಿಸಬೇಕು’ ಎಂದು ಚೆನ್ನೈನ ತಮ್ಮ ನಿವಾಸದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಆಗ್ರಹಿಸಿದ್ದಾರೆ.