ಗ್ಯಾಸ್ ಸಿಲಿಂಡರ್ ಸ್ಫೋಟ ದುರಂತದಿಂದಾಗಿ ರಣಂ ಸಿನಿಮಾ ಚಿತ್ರ ತಂಡದ ಶೂಟಿಂಗ್ ವೇಳಾಪಟ್ಟಿಯಲ್ಲಿ ವ್ಯತ್ಯಯವಾಗಿತ್ತು. ಅಲ್ಲದೇ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು ಕೂಡ. ಈತನ್ಮಧ್ಯೆ ರಣಂ ಚಿತ್ರದ ಟೀಸರ್ ಮತ್ತು ಆಡಿಯೋ ರಿಲೀಸ್ ಕೂಡ ಮಾಡಲಾಗಿದೆ. ವಿ. ಸಮುದ್ರ ನಿರ್ದೇಶನದ ರಣಂ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ತಯಾರಾಗುತ್ತಿದೆ. ಸಿನಿಮಾದಲ್ಲಿ ಚೇತನ್ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ನಟಿಸಿದ್ದಾರೆ. ಚಿರಂಜೀವಿ ಎನ್ ಕೌಂಟರ್ ಸ್ಪೆಷಲಿಸ್ಟ್ ಆಗಿ ನಟಿಸಿದ್ದಾರೆ. ನೀತುಗೌಡ ಪ್ರಧಾನ ಪಾತ್ರದಲ್ಲಿ ಅಭಿನಯಿಸಿದ್ದಾರೆ,
ತಮಿಳು ನಟಿ ವರಲಕ್ಷ್ಮಿ ಶರತ್ ಕುಮಾರ್ ಮತ್ತು ದೇವ್ ಗಿಲ್ ಪ್ರಮುಖ ಪಾತ್ರದಲ್ಲಿದ್ದಾರೆ, ಗುರುಕಿರಣ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಮೊದಲು ಕನ್ನಡ ಆಡಿಯೋ ಬಿಡುಗಡೆಯಾಗಲಿದ್ದು, ನಂತರ ತೆಲುಗು ವರ್ಸನ್ ಆಡಿಯೋ ರಿಲೀಸ್ ಆಗಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. ಜೂನ್ ತಿಂಗಳಿನಲ್ಲಿ ಸಿನಿಮಾ ರಿಲೀಸ್ ಆಗಲಿದೆ..