ಬಿಗ್ ಬಾಸ್ ಮೂಲಕ ಕನ್ನಡಿಗರ ಮನೆ ಮಾತಾದ ಭುವನ್ ಪೊನ್ನಣ್ಣ ನಂತರ ಧಾರಾವಾಹಿ, ಸಿನಿಮಾಗಳಲ್ಲಿ ತನ್ನನ್ನು ಗುರುತಿಸಿಕೊಂಡವರು. ಇದೀಗ ರಾಂಧವ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಸುದ್ದಿಯಲ್ಲಿದ್ದಾರೆ. ಈಗಾಗಲೇ ರಾಂಧವನ ಎರಡು ಟ್ರೇಲರ್ ಗಳು ರಿಲೀಸ್ ಆಗಿದ್ದು, ಯೂಟ್ಯೂಬ್ ನಲ್ಲಿ ಉತ್ತಮ ಪ್ರತಿಕ್ರಿಯೆಯನ್ನು ಗಳಿಸಿದೆ.

ಇದೀಗ ರಾಂಧವ ಚಿತ್ರದ ಟೈಟಲ್ ಟ್ರ್ಯಾಕ್ ನ್ನು ಚಿತ್ರತಂಡ ರಿಲೀಸ್ ಮಾಡಲು ತಯಾರಾಗುತ್ತಿದೆ. ಇದೇ ಜೂನ್ 17ರಂದು ರಾಂಧವ ಚಿತ್ರದ ಟೈಟಲ್ ಟ್ರ್ಯಾಕ್ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಲಿದೆ. ಚಿತ್ರದಲ್ಲಿ ಭುವನ್ ಮೂರು ಶೇಡ್ ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಭುವನ್ ಗೆ ನಾಯಕಿಯಾಗಿ ಅಪೂರ್ವ ಶ್ರೀನಿವಾಸ್ ನಟಿಸಿದ್ದಾರೆ. ಈ ಸಿನಿಮಾವನ್ನು ಸುನೀಲ್ ಆಚಾರ್ಯ ನಿರ್ದೇಶನ ಮಾಡಿದ್ದು, ಸನತ್ ಕುಮಾರ್ ನಿರ್ಮಾಣ ಮಾಡಿದ್ದಾರೆ.

ARUN KUMAR G
ARUN KUMAR G Senior Film Journalist GAURI LANKESH PATRIKE, KARMAVEERA and others

ಧೂಳೆಬ್ಬಿಸಿದ ಎಬ್ಬಿಸಿದ ಸಾಹೋ ಟೀಸರ್!

Previous article

ಪ್ರೀತಿಯ ಹೊಸ ಭಾಷ್ಯ ಬರೆದ `ಐ ಲವ್ ಯು’

Next article

You may also like

Comments

Leave a reply

Your email address will not be published. Required fields are marked *