ಐಸ್ಮಾರ್ಟ್ ಶಂಕರ್ ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಪುರಿ ಜಗನ್ನಾಥ್ ಹೊಸ ಸಿನಿಮಾವನ್ನು ಮಾಡುವತ್ತ ಗಮನಹರಿಸಿದ್ದಾರೆ. ವಿಶೇಷವೆಂದರೆ ಅವರು ತಮ್ಮ ಹೊಸ ಚಿತ್ರಕ್ಕಾಗಿ ರಾಕಿಂಗ್ ಸ್ಟಾರ್ ಯಶ್ ಅವರನ್ನು ಆರಿಸಿಕೊಂಡಿದ್ದಾರೆ. ಹೌದು.. ಪ್ರಿನ್ಸ್ ಮಹೇಶ್ ಗಾಗಿ ಜನ ಗಣ ಮನ ಪ್ರಾಜೆಕ್ಟ್ ನ್ನು ತಯಾರಿಸಿಕೊಂಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಮಹೇಶ್ ಬಾಬು ಈ ಪ್ರಾಜೆಕ್ಟ್ ನಿಂದ ಹಿಂದೆ ಸರಿದಿದ್ದಾರೆ. ಅದಕ್ಕಾಗಿ ಸದ್ಯ ಪುರಿ ಜಗನ್ನಾಥ್ ಯಶ್ ಅವರನ್ನು ಮುಖ್ಯ ಪಾತ್ರದಲ್ಲಿ ನಟಿಸುವಂತೆ ಕೇಳಿದ್ದು, ಈಗಾಗಲೇ ಎರಡು ಸುತ್ತಿನ ಮಾತುಕತೆಯನ್ನು ನಡೆಸಿದ್ದಾರಂತೆ.
ರಾಷ್ಟ್ರದಲ್ಲಿ ಈಗೀಗ ಹೆಚ್ಚುತ್ತಿರುವ ಅಪರಾಧ ಚಟುವಟಿಕೆಗಳ ಮೇಲೆ ಈ ಕಥೆಯು ಬೆಳಕು ಚೆಲ್ಲಲ್ಲಿದ್ದು, ತೆಲುಗು, ಕನ್ನಡ ಭಾಷೆಗಳಲ್ಲಿ ಸಿನಿಮಾ ತಯಾರಾಗಲಿದೆಯಂತೆ. ಜತೆಗೆ ಹಿಂದಿ, ತಮಿಳು ಭಾಷೆಗೂ ಡಬ್ ಮಾಡುವ ಪ್ಲ್ಯಾನ್ ಕೂಡ ಹಾಕಿಕೊಳ್ಳಲಾಗಿದೆ ಎನ್ನಲಾಗುತ್ತಿದೆ. ವಿಶೇಷವೆಂದರೆ ದಕ್ಷಿಣ ಭಾರತದ ಪ್ರತಿಷ್ಠಿತ ಸಿನಿಮಾ ಸಂಸ್ಥೆ ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ ಎಂಬ ಗಾಳಿಸುದ್ದಿಯೂ ಹರಡಿಕೊಂಡಿದೆ.ಸದ್ಯ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ 2 ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದು, ಈ ಚಿತ್ರದ ನಂತರವಷ್ಟೇ ಬೇರೆ ಪ್ರಾಜೆಕ್ಟ್ ಗಳಿಗೆ ಗ್ರೀನ್ ಸಿಗ್ನಲ್ ನೀಡಲಿದ್ದಾರೆ.
Comments