ಗಾನ ಕೋಗಿಲೆ ಎಸ್. ಜಾನಕಿ ಅವರು ಕಾಲು ಜಾರಿ ಬಿದ್ದಿದ್ದರಿಂದ ಅವರ ಸೊಂಟ ಡ್ಯಾಮೇಜ್ ಆಗಿದ್ದು, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಾನಕಿ ಅವು ಮೈಸೂರಿನಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದಾಗ ಕಾಲು ಜಾರಿ ಬಿದ್ದಿದ್ದಾರೆ.
ಈ ವೇಳೆ ಅವರ ಸೊಂಟ ಮುರಿದುಕೊಂಡಿದೆ. ತೀವ್ರ ನೋವು ಕಾಣಿಸಿಕೊಂಡಿದ್ದು, ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿ ನಿಗಾ ಘಟಕದಲ್ಲಿ ಇಡಲಾಗಿದೆ. ಕಳೆದ ಮೂರು ದಿನಗಳಿಂದ ಜಾನಕಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ವರ್ಷದ ಹಿಂದೆ ಜಾನಕಿ ಅವರು ತಮ್ಮ ಗಾಯಕವನ್ನು ನಿಲ್ಲಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದರು. ಸದ್ಯ ಒಂದು ವರ್ಷಗಳಿಂದ ವಿಶ್ರಾಂತಿ ಜೀವನವನ್ನು ನಡೆಸುತ್ತಿದ್ದರು.
No Comment! Be the first one.