ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆಗೆ ಹಾಜರಾಗಲಿದ್ದರೆ ಜಾಮೀನು ಕ್ಯಾನ್ಸಲ್ ಮಾಡುವುದಾಗಿ ಜೋಧ್ ಪುರ್ ಕೋರ್ಟ್ ಸಲ್ಮಾನ್ ಖಾನ್ ಗೆ ಖಡಕ್ ವಾರ್ನಿಂಗ್ ನೀಡಿದೆ. ‘ಹಮ್ ಸಾಥ್ ಸಾಥ್ ಹೈ’ ಸಿನಿಮಾ ಚಿತ್ರೀಕರಣದ ಸಮಯದಲ್ಲಿ ಜೋಧ್​​ಪುರ್​​​ ಕಂಕಣಿ ಗ್ರಾಮದ ಬಳಿ ಸಲ್ಮಾನ್ ಖಾನ್ ಎರಡು ಕೃಷ್ಣಮೃಗಗಳನ್ನು ಬೇಟೆ ಆಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಜೆಎಂ ನ್ಯಾಯಾಲಯ ಸಲ್ಮಾನ್ ಖಾನ್ ಅವರನ್ನು ದೋಷಿ ಎಂದು ಪರಿಗಣಿಸಿ 5 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿತ್ತು.

ಬೇಟೆ ವೇಳೆ ಅವರೊಂದಿಗೆ ಇದ್ದ ಟಬು, ಸೈಫ್ ಅಲಿ ಖಾನ್, ನೀಲಂ, ಸೋನಾಲಿ ಬೇಂದ್ರೆ, ದುಷ್ಯಂತ್ ಸಿಂಹ ವಿರುದ್ಧ ಬಲವಾದ ಸಾಕ್ಷ್ಯಾಧಾರಗಳು ಇಲ್ಲವೆಂದು ಐವರನ್ನೂ ಚೀಫ್​ ಜುಡಿಶಿಯಲ್​ ಮ್ಯಾಜಿಸ್ಟ್ರೇಟ್ ಕೋರ್ಟ್​ ದೋಷ ಮುಕ್ತಗೊಳಿಸಿ ಆದೇಶ ಹೊರಡಿಸಿತ್ತು. ಈ ತೀರ್ಪಿನ ವಿರುದ್ಧ ರಾಜಸ್ಥಾನ ಸರ್ಕಾರ ಮೇಲ್ಮನವಿ ಸಲ್ಲಿಸಿದ ಹಿನ್ನೆಲೆ ಮತ್ತೆ ವಿಚಾರಣೆ ನಡೆಸಿದ್ದ ಜೋಧ್​​ಪುರ್ ಕೋರ್ಟ್ 2019 ಮೇ ತಿಂಗಳಲ್ಲಿ ಈ ಐವರಿಗೂ ಹೊಸದಾಗಿ ನೋಟೀಸ್ ನೀಡಿತ್ತು.

CG ARUN

ಆಗಸ್ಟ್ ಮೊದಲ ವಾರ ಆಸ್ಟ್ರೇಲಿಯಾದಲ್ಲಿ ಒಡೆಯ ಶೂಟಿಂಗ್!

Previous article

ಕ್ಷಯ ರೋಗ ನಿವಾರಣೆ ಜಾಗೃತಿಗೆ ತಿಥಿ ಗಡ್ಡಪ್ಪ!

Next article

You may also like

Comments

Leave a reply

Your email address will not be published. Required fields are marked *

More in cbn