ವಿಜಿ ಸರ್…

ʻಮೇಲೊಬ್ಬ ಮಾಯಾವಿʼ ನನ್ನ ನಿಮ್ಮ ಜೊತೆಯಾಗಿಸಿತು. ಒಂದೇ ಸಿನಿಮಾದ ಒಡನಾಟದಲ್ಲಿ ಒಡಹುಟ್ಟಿದವರಿಗಿಂತ ಹತ್ತಿರವಾದಿರಿ. ಯಾರಲ್ಲೂ ಹಂಚಿಕೊಳ್ಳಲಾಗದ, ಹಂಚಿಕೊಳ್ಳಬಾರದ ಸಂಕಟಗಳನ್ನು ಮಗುವಿನಂತೆ ಹಂಚಿಕೊಂಡ್ರಿ. ನಾನೊಬ್ಬ ಡೈರೆಕ್ಟರ್, ನೀವೊಬ್ಬ ಆಕ್ಟರ್ ಅನ್ನುವ ಕೊಂಡಿಯನ್ನು ಬಹುಬೇಕ ಕಳಚಿದ್ರಿ. ಸದಾ ಹೊಸತನ್ನು ಯೋಚಿಸುವ, ಸದಾ ಸಂತೋಷವನ್ನು ಹಂಚುವ, ಎಲ್ಲರಿಗೂ ಒಳ್ಳೆಯದನ್ನು ಬಯಸುವ ನಿಮ್ಮ ಜೀವನ ಸೂತ್ರವನ್ನು ಇಡೀ ತಂಡಕ್ಕೆ ಉಚಿತವಾಗಿ ಹಂಚಿದಿರಿ.

ಊಟವನ್ನು ಇಷ್ಟ ಪಡುವ ನೀವು, ಸಾಕಷ್ಟು ಬಾರಿ ಕೈತುತ್ತು ಕೊಟ್ರಿ. ನಿಮ್ಮ ನಟನೆಯ ಫೋಟೋ ಸ್ಕಿಲ್ ಅನ್ನು ಯಾವುದೇ ಆಮಿಷವಿಲ್ಲದೇ ಹಂಚಿದಿರಿ. ಇವತ್ತು ರಿಲೀಸ್ ಆಗಿರುವ ವಿಡಿಯೋ ಸಾಂಗ್ ಅನ್ನು ಅವಾಗವಾಗ ʻʻಡೈರೆಕ್ಟ್ರೆ ಬೇಗ ರಿಲೀಸ್ ಮಾಡಿʼʼ ಅನ್ನುತ್ತಿದ್ದಿರಿ.  ಈ ಸಮಯದಲ್ಲಿ ರಿಲೀಸ್ ಮಾಡುವ ಮನಸ್ಥಿತಿ ನಮ್ಮದಲ್ಲ. ಇಡೀ ತಂಡ ದಿಗ್ಭ್ರಮೆಯಲ್ಲಿದೆ. ಆದರೂ ರಿಲೀಸ್ ಮಾಡಿರೋದು ನಮ್ಮ ತಂಡದ ಜೊತೆ ನೀವೂ ಕೂತು ನೋಡ್ತಿದ್ದೀರಿ ಅನ್ನೋ ಉದ್ದೇಶಕ್ಕೆ.

ʻʻವಿಜಿ ಸರ್.. ಗುಂಡಿ ತೋಡಿ ಹೂಳುವ ಸೀಕ್ವೆನ್ಸ್ ಮಾಡ್ತೀರಾ… ಒಪ್ಪಿಗೇನಾ?ʼʼ ಅಂದಿದ್ದಕ್ಕೆ.. ʻʻಒಂದಲ್ಲಾ ಒಂದಿನಾ ಮಲ್ಕೊಳ್ಳಲೇಬೇಕಲ್ಲಾ…ʼʼ ಅಂತ ನಗ್ತಾ ಹೇಳಿದ್ರಿ.. ಆದರೀಗ!!

ಸರ್…, ಈ ಸಾಂಗ್ ಬಗ್ಗೆ ನಾನು ಚಂದ್ರಣ್ಣ (ಚಕ್ರವರ್ತಿ ಸರ್) ಸಾಕಷ್ಟು ಡಿಸ್ಕಸ್ ಮಾಡಿದ್ವಿ. ಚಂದ್ರಣ್ಣ ನಾನು ಕೊಟ್ಟ ಇನ್ಪುಟ್ಸ್ ಅನ್ನು ತುಂಬಾ ಸೀರಿಯಸ್ ಆಗಿ ತಗೊಂಡು, ನಿಮ್ಮ ಒಪ್ಪಿಗೆಯನ್ನು ಪಡೆದೇ ಶೂಟ್ ಮಾಡಲಾಯ್ತು. ಬಾಲ್ಯದ ಗೆಳೆಯ, ನಿರ್ಮಾಪಕ ಪುತ್ತೂರು ಭರತ್.., ಯಾವುದಕ್ಕೂ ನೋ ಅಂದಿಲ್ಲ. ಈ ಕ್ಷಣಕ್ಕೂ ಎಲ್ಲಾ ರಿಸ್ಕ್‌ ಗಳನ್ನೂ ತನ್ನ ಹೆಗಲ ಮೇಲೆ ಹೊತ್ತು ನಡೆಯುತ್ತಿದ್ದಾರೆ. ಕೊನೆಯದಾಗಿ, ವಿಜಿ ಸರ್ ನಿಮ್ಮ ಫೋಟೋ ಹಾಕಿ ʻRIPʼ ಅನ್ನೊಲ್ಲ.. ನಮ್ಮ ಇಡೀ ಮಾಯಾವಿ ತಂಡದ ಕೊನೆ ಉಸಿರಿರುವವರೆಗೂ ನೀವು ಮತ್ತು ನಿಮ್ಮ ಮುಗ್ಧ ಮಗುವಿನಂತ ನಗು ಕೂಡಾ ಜೊತೆಗಿರುತ್ತೆ. ಸರ್.. ಬನ್ನಿ ನಾನು ನೀವು ಚಂದ್ರಣ್ಣ ಬೆಸ್ಟ್ ಔಟ್‌ ಪುಟ್‌ ಗಾಗಿ ಜಗಳ ಮಾಡೋಣ.. ಅಟ್ಲೀಸ್ಟ್ ಮೂವರೂ ಒಂದು ಹಗ್ ಮಾಡೋಣ… ʻಮಿಸ್ ಯೂʼ… ಅನ್ನೋಕೂ ಆಗ್ತಿಲ್ಲ…

-ಬಿ.ನವೀನ್ ಕೃಷ್ಣ

ARUN KUMAR G
ARUN KUMAR G Senior Film Journalist GAURI LANKESH PATRIKE, KARMAVEERA and others

ಚಂದ್ರಚೂಡ್‌ ಬರೆದಿದ್ದ ಹಾಡಲ್ಲಿ ಎಲ್ಲವೂ ಅಡಗಿದೆ….

Previous article

ಮಿಂಚಿ ಮರೆಯಾದ ಸಿನಿ ಸಂಚಾರಿ!!

Next article

You may also like

Comments

Leave a reply

Your email address will not be published.