Sathya Hegde Cinibuzz

ಕಿರುಚಿತ್ರ ನಿರ್ಮಾಣ ಸಾಕಷ್ಟು ಪ್ರತಿಭಾವಂತರ ಕನಸು. ಈ ಕನಸಿಗೆ ಆಸರೆಯಾಗಿ ನಿಂತಿದ್ದಾರೆ ಛಾಯಾಗ್ರಹಕ ಸತ್ಯ ಹೆಗಡೆ. ತಮ್ಮ ಸತ್ಯ ಹೆಗಡೆ ಸ್ಟುಡಿಯೋಸ್ ಮೂಲಕ ಪ್ರತಿಭಾವಂತ ಯುವ ಪ್ರತಿಭೆಗಳ ಸಮಾಗಮದಲ್ಲಿ ತಯಾರಾದ ಕಿರುಚಿತ್ರಗಳನ್ನು ಬಿಡುಗಡೆ ಮಾಡುವ ಮೂಲಕ ಕಿರುಚಿತ್ರ ನಿರ್ಮಾಣ ಮಾಡುವವರನ್ನು ಪ್ರೋತ್ಸಾಹಿಸುತ್ತಿದ್ದಾರೆ.

ಇತ್ತೀಚೆಗೆ ವಿನಯ್ ಶಾಸ್ತ್ರಿ ಅವರ ನಿರ್ದೇಶನದಲ್ಲಿ ಮಂಜುನಾಥ್ ಹೆಗಡೆ ಹಾಗೂ ಅರಣಾ ಬಾಲರಾಜ್ ಅಭಿನಯಿಸಿರುವ “ಕಾಲ”. ನಾಟಕ ಕಂಪನಿಗಳ ವಾಸ್ತವ ತಿಳಿಸುವ , ಅಭಿಷೇಕ್ ಕಾಸರಗೋಡು ನಿರ್ದೇಶನದ ” ನಾಟಕದ್ ಕಂಪನಿ” ಹಾಗೂ ಆಹಾರ ಪೂರೈಕೆ ಕಂಪನಿಯಲ್ಲಿ ಕಾರ್ಯ ನಿರ್ವಹಿಸುವ ಹೆಣ್ಣುಮಗಳೊಬ್ಬಳ ಕಥೆಯನ್ನಾಧರಿಸಿದ, ಪ್ರಶಾಂತ್ ಗೌಡ ನಿರ್ದೇಶನದಲ್ಲಿ ರಮ್ಯಕೃಷ್ಣ ಮುಖ್ಯಭೂಮಿಕೆಯಲ್ಲಿ ನಟಿಸಿರುವ “ಲಾಸ್ಟ್ ಆರ್ಡರ್” ಕಿರುಚಿತ್ರಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಒಂದೊಂದು ಕಿರುಚಿತ್ರ ಕೂಡ ಬಹಳ ಅದ್ಭುತವಾಗಿತ್ತು. ಸ್ವಲ್ಪ ಸಮಯದಲ್ಲೇ ದೊಡ್ಡ ವಿಷಯ ಹೇಳುವ ಕೆಲಸ ಮಾಡಿದ್ದಾರೆ ಈ ಕಿರುಚಿತ್ರಗಳ ನಿರ್ದೇಶಕರು. ಅಷ್ಟೇ ಚೆನ್ನಾಗಿ ಅಭಿನಯಿಸಿದ್ದಾರೆ ಕಲಾವಿದರು.

ಸಾಹಿತಿ ಜಯಂತ ಕಾಯ್ಕಿಣಿ, ನಟ ಶ್ರೀನಗರ ಕಿಟ್ಟಿ, ನಿರ್ಮಾಪಕರಾದ ಕೆ.ಮಂಜು, ಉದಯ್ ಕೆ ಮೆಹ್ತ, ನಿರ್ದೇಶಕ ಗಿರಿರಾಜ್ ಸೇರಿದಂತೆ ಮುಂತಾದ ಗಣ್ಯರು ಈ ಕಿರುಚಿತ್ರಗಳನ್ನು ವೀಕ್ಷಿಸಿ ಕಿರುಚಿತ್ರ ತಂಡವನ್ನು ಹಾಗೂ ಅವರಿಗೆ ಪ್ರೋತ್ಸಾಹ ನೀಡಿತ್ತಿರುವ ಸತ್ಯ ಹೆಗಡೆಯವರನ್ನು ಅಭಿನಂದಿಸಿದರು. ಕಾರ್ಮಿಕರ ದಿನಾಚರಣೆ ಅಂಗವಾಗಿ ಚಿತ್ರರಂಗದಲ್ಲಿ ಹೆಚ್ಚು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವವರಿಗೆ ಸತ್ಯ ಹೆಗಡೆ ಈ ಸಂದರ್ಭದಲ್ಲಿ ಸನ್ಮಾನಿಸಿದರು.

ARUN KUMAR G
ARUN KUMAR G Senior Film Journalist GAURI LANKESH PATRIKE, KARMAVEERA and others

ಗಿರ್ಕಿ ಸಾಂಗು ಕಿಕ್ಕು ಕೊಡುತ್ತಿದೆ…

Previous article

ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಮನರಂಜನೆ!

Next article

You may also like

Comments

Leave a reply

Your email address will not be published. Required fields are marked *