ಆಸ್ಟ್ರೇಲಿಯಾದ ಮೆಲ್ಬೋರ್ನ್ ನ ಲಾ ಟ್ರೋಬ್ ವಿಶ್ವವಿದ್ಯಾಲಯ ಬಾಲಿವುಡ್ ನ ಖ್ಯಾತ ನಟ ಶಾರುಖ್ ಖಾನ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಶುಕ್ರವಾರ ನಡೆದ ಸಮಾರಂಭದಲ್ಲಿ ಶಾರುಖ್ ಖಾನ್ ಈ ಗೌರವಕ್ಕೆ ಭಾಜನರಾದರು.
ಭಾರತ ಚಿತ್ರರಂಗಕ್ಕೆ ನೀಡಿರುವ ಕೊಡುಗೆ ಹಾಗೂ ಮೀರ್ ಫೌಂಡೇಶನ್ ಮೂಲಕ ಬಡಮಕ್ಕಳು, ಮಹಿಳೆಯರ ಸಬಲೀಕರಣದ ಹೋರಾಟವನ್ನು ಪರಿಗಣಿಸಿ ಲಾ ಟ್ರೋಬ್ ವಿಶ್ವವಿದ್ಯಾಲಯ ಡಾಕ್ಟರೇಟ್ ಪ್ರಧಾನ ಮಾಡಿದೆ. ಜತೆಗೆ ಶಾರೂಖ್ ಹೆಸರಿನಲ್ಲಿ ಸ್ಕಾಲರ್ ಶಿಪ್ ನೀಡುವುದಾಗಿ ಲಾ ಟ್ರೋಬ್ ವಿಶ್ವವಿದ್ಯಾಲಯ ಘೋಷಿಸಿದೆ. ಸಂಶೋಧನ ವಿಭಾಗದಲ್ಲಿ ಆಯ್ಕೆಯಾಗುವ ಮಹಿಳಾ ಅಭ್ಯರ್ಥಿಗಳಿಗೆ ನಾಲ್ಕು ವರ್ಷಕ್ಕೆ ಧನಸಹಾಯ ಮಾಡುವುದಾಗಿ ತಿಳಿಸಿದ್ದಾರೆ. ಮಹಿಳಾ ಸಬಲೀಕರಣ ಮತ್ತು ಮಹಿಳಾ ಸಮಾನತೆ ದೃಷ್ಟಿಯಿಂದ ಈ ವಿದ್ಯಾರ್ಥಿ ವೇತನ ನೀಡುತ್ತಿರುವುದು ನನಗೆ ಸಂತಸ ತಂದಿದೆ. ಇದಕ್ಕಾಗಿ ಲಾ ಟ್ರೋಬ್ ವಿಶ್ವವಿದ್ಯಾಲಯಕ್ಕೆ ತುಂಬು ಹೃದಯದ ಧನ್ಯವಾದವನ್ನು ತಿಳಿಸುತ್ತೇನೆ” ಎಂದು ಕಿಂಗ್ ಖಾನ್ ತಿಳಿಸಿದ್ದಾರೆ.