ಶಿವತೇಜಸ್ ಚಿತ್ರಕಥೆ ನಿರ್ದೇಶನ ಮಾಡುತ್ತಿರುವ ಚಿರಂಜೀವಿ ಸರ್ಜಾ ಅವರ ಹೊಸ ಸಿನಿಮಾ ಶಿವಾರ್ಜುನ. ನಿಶ್ಚಿತ ಕಂಬೈನ್ಸ್ ಲಾಂಛನದಲ್ಲಿ ಎಂ. ಬಿ. ಮಂಜುಳಾ ಶಿವಾರ್ಜುನ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ಸಿಂಗ ನಂತರ ಚಿರಂಜೀವಿ ಸರ್ಜಾ ನಟಿಸುತ್ತಿರುವ ಚಿತ್ರಕ್ಕೆ ಪ್ರೊಡಕ್ಷನ್ ನಂ 1 ಎಂದು ಚಿತ್ರೀಕರಣ ಶುರು ಮಾಡಿಕೊಂಡಿತ್ತು. ಸದ್ಯ ಈ ಚಿತ್ರಕ್ಕೆ ಶಿವಾರ್ಜುನ ಎಂದು ಟೈಟಲ್ ಫಿಕ್ಸ್ ಮಾಡಲಾಗಿದೆ. ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳಿಂದ ನಿರ್ಮಾಣ ನಿರ್ವಾಹಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶಿವಾರ್ಜುನ್ ಅವರ ನಿರ್ಮಾಣದ ಚಿತ್ರವಿದು. ನಿರ್ಮಾಪಕರ ಹೆಸರೆ ಚಿತ್ರದ ಶೀರ್ಷಿಕೆಯಾಗಿರುವುದು ವಿಶೇಷ.
ಚಿತ್ರದ ತಾರಾಗಣದಲ್ಲಿ ಅಮೃತ, ಅಕ್ಷತ, ತಾರಾ, ಅವಿನಾಶ್, ಕುರಿ ಪ್ರತಾಪ್, ದಿನೇಶ್ ಮಂಗಳೂರು, ಸಾಧುಕೋಕಿಲ, ರವಿ ಕಿಶನ್, ತರಂಗ ವಿಶ್ವ, ಶಿವರಾಜ್ ಕೆ. ಆರ್. ಪೇಟೆ, ನಯನ ಇದ್ದಾರೆ. ಉಳಿದಂತೆ ಹೆಚ್. ಸಿ. ವೇಣು ಛಾಯಾಗ್ರಹಣ, ಸುರಾಗ್ ಸಂಗೀತ ಸಂಯೋಜನೆ, ಕೆ. ಎಂ. ಪ್ರಕಾಶ್ ಸಂಕಲನ, ರವಿವರ್ಮ, ವಿನೋದ್, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಮುರಳಿ ನೃತ್ಯ ನಿರ್ದೇಶನ ಚಿತ್ರಕ್ಕಿದೆ.