ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಳಿಯ ಹಾಗೂ ಕೆಫೆ ಕಾಫಿ ಡೇ ಸಂಸ್ಥೆಯ ಉದ್ಯಮಿ ಸಿದ್ಧಾರ್ಥ್ ನಿಧನಕ್ಕೆ ಸ್ಯಾಂಡಲ್ ವುಡ್ ನ ತಾರಾಬಳಗ ಸಂತಾಪ ಸೂಚಿಸಿದೆ. ಮಂಡ್ಯ ಸಂಸದೆ ಹಾಗೂ ಹಿರಿಯ ನಟಿ ಸುಮಲತಾ ಅಂಬರೀಶ್ ಟ್ವಿಟರ್ ಮೂಲಕ ಸಿದ್ದಾರ್ಥ್ ನಿಧನಕ್ಕೆ ಸಂತಾಪ ಸೂಚಿಸಿದ್ದು,

https://twitter.com/sumalathaA/status/1156427699612577792

”ನಮ್ಮ ಮಂಡ್ಯ ಜಿಲ್ಲೆಯವರಾದ ಶ್ರೀ ಎಸ್.ಎಂ.ಕೃಷ್ಣ ಅವರ ಅಳಿಯ, ಕೆಫೆ ಕಾಫಿ ಡೇ ಸಂಸ್ಥಾಪಕ, ಉದ್ಯಮಿ ಸಿದ್ದಾರ್ಥ್ ಅವರ ಸಾವು ತೀವ್ರ ಆಘಾತ ತಂದಿದೆ.” ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ‘ಎಸ್.ಎಂ.ಕೃಷ್ಣ ಅವರಿಗೂ ಹಾಗೂ ಅವರ ಕುಟುಂಬದವರಿಗೂ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ, ಸಿದ್ದಾರ್ಥ್ ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ನೀಡಲಿ” ಎಂದು ಸುಮಲತಾ ಪ್ರಾರ್ಥನೆ ಮಾಡಿದ್ದಾರೆ.

ARUN KUMAR G
ARUN KUMAR G Senior Film Journalist GAURI LANKESH PATRIKE, KARMAVEERA and others

ಬೆನ್ನುನೋವಿನಿಂದ ಬಳಲುತ್ತಿದ್ದಾರೆ ಪೈಲ್ವಾನ್!

Previous article

ಅಂತಿಮ ಚಿತ್ರೀಕರಣ ಹಂತದಲ್ಲಿ ಮತ್ತೆ ಉದ್ಭವ!

Next article

You may also like

Comments

Leave a reply