Tag: #alaikya #cinibuzz #audiolaunch
-
‘ಅಲೈಕ್ಯಾ’ ಟ್ರೈಲರ್ ಆಡಿಯೋ ಬಿಡುಗಡೆ
ಹಾರರ್ ಹಿನ್ನೆಲೆಯಲ್ಲಿ ನಡೆಯೋ ಕಥಾಹಂದರ ಒಳಗೊಂಡ ಚಿತ್ರ ಅಲೈಕ್ಯಾ. 21-21-21 ಎಂಬ ಅಡಿಬರಹ ಹೊಂದಿರುವ ಈ ಚಿತ್ರದ ಟ್ರೈಲರ್ ಹಾಡುಗಳು ಬಿಡುಗಡೆ ಸಮಾರಂಭ ರೇಣುಕಾಂಬ ಸ್ಟಯಡಿಯೋದಲ್ಲಿ ನೆರವೇರಿತು. ಹಿರಿಯನಟ ಸುಚೇಂದ್ರಪ್ರಸಾದ್ ಹಾಗೂ ನಟಿ ಸಂಜನಾ ನಾಯ್ಡು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ತಂಡಕ್ಕೆ ಶುಭ ಹಾರೈಸಿದರು.ಹಿತೇಶ್ ಮೂವೀಸ್ ಲಾಂಛನದಲ್ಲಿ ಎಂ.ಭೂಪತಿ ಅವರು ನಿರ್ಮಿಸಿರುವ, ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಅಲೈಕ್ಯಾ ಚಿತ್ರದ ಎಲ್ಲಾ ಕೆಲಸಗಳು ಮುಗಿದಿದ್ದು, ಚಿತ್ರವೀಗ ಬಿಡುಗಡೆಯ ಹಂತ ತಲುಪಿದೆ. ಈ ಹಿಂದೆ ಮಳೆಬಿಲ್ಲು ಚಿತ್ರದ…